ಬ್ರೇಕಿಂಗ್ ನ್ಯೂಸ್
05-01-21 04:45 pm Source: FILMIBEAT Shruthi Gk ಸಿನಿಮಾ
ತಮಿಳಿನ ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ಸದ್ಯ ವಿಜಯ್ ನಟನೆಯ ಮಾಸ್ಟರ್ ಸಿನಿಮಾದ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ದಳಪತಿ ವಿಜಯ್ ಅಭಿನಯದ ಮಾಸ್ಟರ್ ಸಿನಿಮಾ ಇದೇ ತಿಂಗಳು 13ರಂದು ರಿಲೀಸ್ ಆಗುತ್ತಿದೆ. ತಮಿಳು ಮಾತ್ರವಲ್ಲದೆ ದಕ್ಷಿಣ ಭಾರತದ ಎಲ್ಲಾ ಭಾಷೆ ಜೊತೆಗೆ ಹಿಂದಿಯಲ್ಲೂ ತೆರೆಗೆ ಬರುತ್ತಿರುವುದು ವಿಶೇಷ. ಸದ್ಯ ಮಾಸ್ಟರ್ ಸಿನಿಮಾದ ರಿಲೀಸ್ ನ ಬ್ಯುಸಿಯಲ್ಲಿರುವ ನಿರ್ದೇಶಕ ಲೋಕೇಶ್ ಬಗ್ಗೆ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ಹೌದು, ಮಾಸ್ಟರ್ ರಿಲೀಸ್ ಗೂ ಮೊದಲೇ ಲೋಕೇಶ್ ತೆಲುಗಿನ ಸ್ಟಾರ್ ನಟನ ಜೊತೆ ಸಿನಿಮಾ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಂದಹಾಗೆ ಆ ನಟ ನಟ ಮತ್ಯಾರು ಅಲ್ಲ ರಾಮ್ ಚರಣ್.
ಹೌದು, ಈಗಾಗಲೇ ಲೋಕೇಶ್, ರಾಮ್ ಚರಣ್ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನುವ ಮಾತುಗಳು ಕಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ. ಅಂದಹಾಗೆ ಮಾಸ್ಟರ್ ಸಿನಿಮಾ ಬಳಿಕ ಲೋಕೇಶ್ ಜೊತೆ ಸಿನಿಮಾ ಮಾಡಲು ಸ್ಟಾರ್ ನಟರು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಲೋಕೇಶ್, ರಾಮ್ ಚರಣ್ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ರಾಮ್ ಚರಣ್ ಗಾಗಿ ಸ್ಕ್ರಿಪ್ಟ್ ಕೆಲಸವನ್ನು ಪ್ರಾರಂಭಿಸಿದ್ದಾರಂತೆ.
ಅಂದಹಾಗೆ ಲೋಕೇಶ್ ಈಗಾಗಲೇ ಕಮಲ್ ಹಾಸನ್ ಜೊತೆ ವಿಕ್ರಮ್ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಭರದಿಂದ ನಡೆಯುತ್ತಿದೆ. ಕಮಲ್ ಹಾಸನ್ ಜೊತೆ ಸಿನಿಮಾ ಮುಗಿದ ಬಳಿಕ ತೆಲುಗು ಸಿನಿಮಾರಂಗಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ತಮಿಳಿನಲ್ಲಿ 4 ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಲೋಕೇಶ್ ಒಂದು ವೇಳೆ ರಾಮ್ ಚರಣ್ ಗೆ ಆಕ್ಷನ್ ಕಟ್ ಹೇಳಿದ್ರೆ ಮೊದಲ ಬಾರಿಗೆ ತೆಲುಗಿನಲ್ಲಿ ಅದೃಷ್ಟ ಪರೀಕ್ಷೆಗೆ ನಿಲ್ಲಲಿದ್ದಾರೆ. ರಾಮ್ ಚರಣ್ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಸಿನಿಮಾ ನಿರ್ಮಾಣದ ಕಡೆಯೂ ಗಮನ ಹರಿಸಿದ್ದಾರೆ. ಇತ್ತ ಲೋಕೇಶ್ ಕನಗರಾಜ್ ಸಹ ಕಮಲ್ ಜೊತೆ ವಿಕ್ರಮ್ ನಲ್ಲಿ ನಿರತರಾಗಿದ್ದಾರೆ.
ವಿಕ್ರಮ್ ಬಳಿಕ ರಾಮ್ ಚರಣ್ ಜೊತೆ ಹೊಸ ಸಿನಿಮಾ ಪ್ರಾರಂಭ ಮಾಡುವ ಸಾಧ್ಯತೆ ಇದೆ. ಸದ್ಯ ಅಭಿಮಾನಿಗಳ ಚಿತ್ತ ಮಾಸ್ಟರ್ ಸಿನಿಮಾದ ಮೇಲಿದೆ. ತಮಿಳು ನಾಡಿನಲ್ಲಿ ಈಗಾಗಲೇ ಶೇ.100 ಆಸನ ಭರ್ತಿಗೆ ಅವಕಾಶ ನೀಡಿದ್ದಾರೆ. ಲಾಕ್ ಡೌನ್ ಬಳಿಕ ರಿಲೀಸ್ ಆಗುತ್ತಿರುವ ಸ್ಟಾರ್ ನಟನ ಸಿನಿಮಾ ಇದಾಗಿದ್ದು, ಅಭಿಮಾನಿಗಳ ಪ್ರತಿಕ್ರಿಯೆ ಹೇಗಿರಲಿದೆ, ಚಿತ್ರಮಂದಿರಕ್ಕ ಜನ ಬರ್ತಾರಾ ಎನ್ನುವ ಕುತೂಹಲ ಎಲ್ಲರೂ ಹೆಚ್ಚಾಗಿದೆ.
This News Article is a Copy of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm