ಬ್ರೇಕಿಂಗ್ ನ್ಯೂಸ್
04-09-26 04:46 pm HK News Staffer ಸಿನಿಮಾ
ಬೆಂಗಳೂರು, ಸೆ 04: ಒಂದು ಕಾಲದಲ್ಲಿ ಕನ್ನಡದ ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡಿದ್ದ ಯುವಕ ಇಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಕಾನೂನು ಕ್ಷೇತ್ರದಲ್ಲಿ ಗಮನ ಸೆಳೆಯುತ್ತಿದ್ದಾರೆ. ಇವರು ಬೇರೆ ಯಾರೂ ಅಲ್ಲ, ನ್ಯಾಯಮೂರ್ತಿ ಎಂ. ನಾಗಪ್ರಸನ್ನ. ನ್ಯಾಯಮೂರ್ತಿಯಾಗುವ ಮುನ್ನ 1998ರಲ್ಲಿ ಕನ್ನಡದ ಜನಪ್ರಿಯ ‘ಹೂಮಳೆ’ ಸಿನಿಮಾದಲ್ಲಿ ನಟಿಸಿದ್ದ ನಾಗಪ್ರಸನ್ನ ಅವರು ಇದೀಗ ತಮ್ಮ ಕಠಿಣ ಹಾಗೂ ಸುದೀರ್ಘ ಕಲಾಪದಿಂದ ಸುದ್ದಿಯಾಗಿದ್ದಾರೆ.
ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಸೆಪ್ಟೆಂಬರ್ 2ರಂದು ಒಂದೇ ದಿನ 555 ಪ್ರಕರಣಗಳ ಸುದೀರ್ಘ ವಿಚಾರಣೆ ನಡೆಸಿ ಗಮನ ಸೆಳೆದಿದ್ದಾರೆ. ನಿಗದಿತ ಕಲಾಪದ ಬಳಿಕವೂ ತುರ್ತು ವಿಚಾರಣೆಗೆ ಸಲ್ಲಿಕೆಯಾಗಿದ್ದ 250ಕ್ಕೂ ಹೆಚ್ಚು ಅರ್ಜಿಗಳನ್ನು ಆಲಿಸಲು ರಾತ್ರಿ 8.05ರವರೆಗೆ ಪೀಠದಲ್ಲಿ ಕುಳಿತಿದ್ದರು. ಇದೇ ವೇಳೆ, ನ್ಯಾಯಮೂರ್ತಿಯಾಗುವ ಮುನ್ನ ಅವರು 1998ರಲ್ಲಿ ಕನ್ನಡದ ಜನಪ್ರಿಯ ‘ಹೂಮಳೆ’ ಚಿತ್ರದಲ್ಲಿ ನಟಿಸಿದ್ದ ಕುತೂಹಲಕಾರಿ ಸಂಗತಿಯೂ ಮುನ್ನೆಲೆಗೆ ಬಂದಿದೆ.
ರಾತ್ರಿ 8.05ರವರೆಗೆ ನಿರಂತರ ಕಲಾಪ:
ಕರ್ನಾಟಕ ಹೈಕೋರ್ಟ್‌ನ ಕೋರ್ಟ್ ಹಾಲ್ 14ರಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಸೆಪ್ಟೆಂಬರ್ 2ರಂದು ಬೆಳಗ್ಗಿನಿಂದ ರಾತ್ರಿ 8.05ರವರೆಗೆ ಸತತವಾಗಿ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಿದರು. ಒಟ್ಟು 555ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸಿದ ಅವರು, ಅವುಗಳಲ್ಲಿ ಸುಮಾರು 85 ಅರ್ಜಿಗಳನ್ನು ವಿಲೇವಾರಿ ಮಾಡಿದರು.
ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದ ವಿಚಾರಣಾ ಪಟ್ಟಿಯಲ್ಲಿ ಅಂದು 318 ಅರ್ಜಿಗಳನ್ನು ನಿಗದಿಪಡಿಸಲಾಗಿತ್ತು. ಆದರೆ, ಬೆಳಗ್ಗೆ ವಕೀಲರು ತಮ್ಮ ಪ್ರಕರಣಗಳನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳುವಂತೆ ಕೋರಿ 240ಕ್ಕೂ ಹೆಚ್ಚು ಮೆಮೊಗಳನ್ನು ಸಲ್ಲಿಸಿದರು.
ಈ ಮೆಮೊಗಳನ್ನು ಸ್ವೀಕರಿಸಿದ ನ್ಯಾಯಮೂರ್ತಿಗಳು, ಅವುಗಳನ್ನೂ ಮಧ್ಯಾಹ್ನದ ಕಲಾಪದಲ್ಲಿ ವಿಚಾರಣೆಗೆ ನಿಗದಿಪಡಿಸುವಂತೆ ಕೋರ್ಟ್ ಆಫೀಸರ್‌ಗೆ ಸೂಚಿಸಿದರು. ಇದರೊಂದಿಗೆ ತಕರಾರು ಮತ್ತು ಕ್ರಿಮಿನಲ್ ಸೇರಿದಂತೆ ಒಟ್ಟು 558 ಅರ್ಜಿಗಳು ವಿಚಾರಣೆಗೆ ಬಂದವು. ದಿನದ ನಿಗದಿತ ಕಲಾಪ ಸಂಜೆ 4.30ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಆದರೆ, ಎಲ್ಲಾ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ನ್ಯಾಯಮೂರ್ತಿಗಳು ಹೆಚ್ಚುವರಿಯಾಗಿ ಸುಮಾರು ಮೂರುವರೆ ಗಂಟೆಗಳ ಕಾಲ ಕಲಾಪ ಮುಂದುವರಿಸಿದರು. ಎಲ್ಲಾ ಪ್ರಕರಣಗಳ ವಿಚಾರಣೆ ಮುಗಿಯುವ ವೇಳೆಗೆ ರಾತ್ರಿ 8 ಗಂಟೆ ದಾಟಿತ್ತು.
250ಕ್ಕೂ ಹೆಚ್ಚು ಅರ್ಜಿಗಳಿಗೆ ಎರಡೂವರೆ ಗಂಟೆಯಲ್ಲಿ ವಿಚಾರಣೆ:
ದಿನದ ನಿಗದಿತ ಪ್ರಕರಣಗಳ ಜೊತೆಗೆ ತುರ್ತು ವಿಚಾರಣೆಗೆ ಸಲ್ಲಿಕೆಯಾಗಿದ್ದ 250ಕ್ಕೂ ಹೆಚ್ಚು ಅರ್ಜಿಗಳನ್ನು ಕೇವಲ ಎರಡೂವರೆ ಗಂಟೆಗಳ ಅವಧಿಯಲ್ಲಿ ಪರಿಶೀಲಿಸಿ ಆಲಿಸಿರುವುದು ವಿಶೇಷವಾಗಿತ್ತು. ಅರ್ಜಿದಾರರಿಗೆ ಶೀಘ್ರ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾತ್ರಿ ವೇಳೆಯವರೆಗೂ ಕಲಾಪ ನಡೆಸಿದ ನ್ಯಾಯಮೂರ್ತಿಗಳ ಕಾರ್ಯವೈಖರಿಗೆ ಕಾನೂನು ಕ್ಷೇತ್ರದಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಕಲಾಪ ಮುಕ್ತಾಯದ ವೇಳೆಯಲ್ಲಿ ದರ್ಶನ್ ಅರ್ಜಿಗೆ ಸಂಬಂಧಿಸಿದ ತೀರ್ಪು ಬರೆಸಿ ಪ್ರಕಟಿಸುವ ಕುರಿತು ನ್ಯಾಯಮೂರ್ತಿಗಳು ಅವರ ಪರ ವಕೀಲರಲ್ಲಿ ವಿಚಾರಿಸಿದರು.
ಈ ವೇಳೆ ಹಾಜರಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ಅವರು ನ್ಯಾಯಮೂರ್ತಿ ನಾಗಪ್ರಸನ್ನ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ‘ಮೈ ಲಾರ್ಡ್, ನೀವು ದಿನವೊಂದರಲ್ಲಿ 10 ಗಂಟೆಗಳ ನಿರಂತರ ಕಲಾಪ ನಡೆಸಿದ್ದೀರಿ. ಒಂದೇ ದಿನ 550 ಅರ್ಜಿಗಳು ವಿಚಾರಣೆಯಾಗಿರುವುದು ಚರಿತ್ರೆ ಸೃಷ್ಟಿಯಾದಂತಾಗಿದೆ. ಆ ಮೂಲಕ ದೇಶದ ಹೈಕೋರ್ಟ್ ಇತಿಹಾಸದಲ್ಲಿ ಹೊಸ ಹೆಜ್ಜೆ ಮೂಡಿಸಿದ್ದೀರಿ’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
27 ವರ್ಷಗಳ ಹಿಂದಿನ ‘ಹೂಮಳೆ’ ಕನೆಕ್ಷನ್:
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ತಮ್ಮ ವಿಶಿಷ್ಟ ಕಾರ್ಯಶೈಲಿಯಿಂದ ನ್ಯಾಯಾಂಗ ಕ್ಷೇತ್ರದಲ್ಲಿ ಗಮನ ಸೆಳೆದಿದ್ದಾರೆ. ಆದರೆ, ಅವರ ವೃತ್ತಿಜೀವನದ ಮತ್ತೊಂದು ಕುತೂಹಲಕಾರಿ ಸಂಗತಿ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಅದುವೇ ಅವರ ನಟನಾ ಪ್ರವೃತ್ತಿ. ನ್ಯಾಯಾಂಗ ಕ್ಷೇತ್ರಕ್ಕೆ ಪೂರ್ಣಪ್ರಮಾಣದಲ್ಲಿ ಪ್ರವೇಶಿಸುವ ಮುನ್ನ, 1998ರಲ್ಲಿ ವಕೀಲರಾಗಿದ್ದ ಸಂದರ್ಭದಲ್ಲಿ ನಾಗಪ್ರಸನ್ನ ಅವರು ಕನ್ನಡದ ಜನಪ್ರಿಯ ‘ಹೂಮಳೆ’ ಚಿತ್ರದಲ್ಲಿ ನಟಿಸಿದ್ದರು.
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಈ ಚಿತ್ರದಲ್ಲಿ ರಮೇಶ್ ಅರವಿಂದ್ ನಾಯಕನಾಗಿ ಹಾಗೂ ಸುಮನ್ ನಗರ್ಕರ್ ನಾಯಕಿಯಾಗಿ ಅಭಿನಯಿಸಿದ್ದರು. ಚಿತ್ರದಲ್ಲಿ ನಾಗಪ್ರಸನ್ನ ಅವರು ನಾಯಕನ ತಂಗಿಯ ಪ್ರಿಯಕರನಾಗಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ರಮೇಶ್ ಅರವಿಂದ್ ಮತ್ತು ಸುಮನ್ ನಗರ್ಕರ್ ಅವರೊಂದಿಗೆ ಎಚ್.ಜಿ. ದತ್ತಾತ್ರೇಯ, ಸೋರತ್ ಅಶ್ವಥ್, ಭಾಗೀರಥಿ ಬಾಯಿ, ಬಿ.ವಿ. ರಾಧಾ ಮತ್ತು ವಾಣಿಶ್ರೀ ಸೇರಿದಂತೆ ಹಲವು ಹಿರಿಯ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದರು. ‘ಹೂಮಳೆ’ ಚಿತ್ರವು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಹಾಗೂ ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ಪಡೆದುಕೊಂಡು ಗಮನ ಸೆಳೆದಿತ್ತು.
ಕಾನೂನು ಕ್ಷೇತ್ರದಲ್ಲಿ ದಕ್ಷತೆ ಮತ್ತು ಕಟಿಬದ್ಧತೆಗೆ ಹೆಸರಾಗಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ನ್ಯಾಯಾಂಗ ಪ್ರವೇಶಕ್ಕೂ ಮುನ್ನ ಕಲಾಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸಿದ್ದ ಸಂಗತಿ ಇದೀಗ ಕುತೂಹಲಕ್ಕೆ ಕಾರಣವಾಗಿದೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 10:55 am
HK News Staffer
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm