ಬ್ರೇಕಿಂಗ್ ನ್ಯೂಸ್
09-10-26 08:58 pm HK News Staffer ಸಿನಿಮಾ
ಪಣಜಿ, ಅ.9: ಹಿರಿಯ ನಟ ನಾನಾ ಪಾಟೇಕರ್ ಸಾವಿಗೆ ಸಂಬಂಧಿಸಿ ಗೋವಾ ಪೊಲೀಸರು ‘ಅಸ್ವಾಭಾವಿಕ ಸಾವು’ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಗುರುವಾರ ಬೆಳಗಿನ ಜಾವ ತೀವ್ರ ಅಸ್ವಸ್ಥಗೊಂಡಿದ್ದ ನಾನಾ ಅವರನ್ನು ಗೋವಾದ ದೋನಾ ಪೌಲಾದ ಓಷನ್ ಪಾರ್ಕ್ನಲ್ಲಿರುವ ಅವರ ನಿವಾಸದಿಂದ ಬಾಂಬೋಲಿಮ್ನ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದಾಗ ಸಾವು ಸಂಭವಿಸಿದ್ದು ಮತ್ತು ಆಸ್ಪತ್ರೆಗೆ ತರುವಾಗಲೇ ಸಾವು ಆಗಿತ್ತು ಎಂಬ ವೈದ್ಯರ ಹೇಳಿಕೆ ಹಿನ್ನೆಲೆಯಲ್ಲಿ ಸಾವಿನಲ್ಲಿ ಏನಾದರೂ ಅನುಮಾನಗಳಿವೆಯೇ ಎಂದು ಪತ್ತೆಹಚ್ಚಲು ಪೊಲೀಸರು ಬಿಎನ್ಎಸ್ 194 ಅಡಿ ಕೇಸು ದಾಖಲಿಸಿದ್ದಾರೆ. ಆಸ್ಪತ್ರೆಯ ವೈದ್ಯರ ಮಾಹಿತಿ ಪ್ರಕಾರ, ನಾನಾ ಪಾಟೇಕರ್ ಅವರಿಗೆ ಮೊದಲಿನಿಂದಲೇ ಹೃದಯ ಸಂಬಂಧಿ ಕಾಯಿಲೆ ಇತ್ತು. ಅದಕ್ಕೆ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಹೀಗಾಗಿ ಅವರ ಸಾವಿಗೆ ಹೃದಯಾಘಾತವೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಇದೀಗ ಗೋವಾ ಪೊಲೀಸರು ಬಿಎನ್ಎಸ್ 194ರ ಅಡಿಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಪಿಎಸ್ಐ ನಿತಿನ್ ನಾಯ್ಕ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.
ಮಣಿಪಾಲ್ ಹಾಸ್ಪಿಟಲ್ ಡಾ.ಶೇಖರ್ ಸಾಲ್ಕರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ಅವರನ್ನು ನಸುಕಿನ 4.20-4.30ರ ಸುಮಾರಿಗೆ ನಮ್ಮ ಆಸ್ಪತ್ರೆಗೆ ತರಲಾಗಿತ್ತು. ನಾವು ನಮ್ಮ ಪ್ರಯತ್ನ ಮಾಡಿದ್ದೆವು. ಆದರೆ ಬರುವಾಗಲೇ ಸಾವು ಆಗಿತ್ತು. ಹೀಗಾಗಿ ಮೆಡಿಕೋ ಲೀಗಲ್ ಕೇಸ್ ಆಗಿದ್ದರಿಂದ ನಾವು ಪೊಲೀಸರಿಗೆ ಮಾಹಿತಿ ನೀಡಿದ್ದೆವು ಎಂದು ತಿಳಿಸಿದ್ದರು.
ಗುರುವಾರ ರಾತ್ರಿ ನಾನಾ ಪಾಟೇಕರ್ ಅವರ ಅಂತ್ಯಕ್ರಿಯೆಯು ಪುಣೆಯ ದೊಂಜೆ ಗ್ರಾಮದಲ್ಲಿರುವ ಅವರದೇ ತೋಟದ ಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm