ಬ್ರೇಕಿಂಗ್ ನ್ಯೂಸ್
19-10-26 11:41 am HK News Staffer ಸಿನಿಮಾ
ಮುಂಬೈ, ಅ 19: ಭಾನುವಾರ ರಾತ್ರಿ ನಟ ಟೈಗರ್ ಶ್ರಾಫ್ ಮೇಲೆ ಬೈಕ್ನಲ್ಲಿ ಬಂದ ಮೂವರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಅವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ಬೆನ್ನಲ್ಲೇ, ಸಲ್ಮಾನ್ ಖಾನ್ಗೂ ಕೊಲೆ ಬೆದರಿಕೆ ಹಾಕಿರುವ ಆಡಿಯೋ ಸಂದೇಶವೊಂದು ಸಂಚಲನ ಮೂಡಿಸಿದೆ. “ಭದ್ರತೆ ಎಷ್ಟೇ ಬಿಗಿಯಾಗಿದ್ದರೂ ಸಲ್ಮಾನ್ ಖಾನ್ನನ್ನ ಬಿಡುವುದಿಲ್ಲ. ಇಂದು ಅಲ್ಲದಿದ್ದರೆ ನಾಳೆ, ಒಂದಲ್ಲ ಒಂದು ದಿನ ಅವನನ್ನ ಮುಗಿಸಿಯೇ ತೀರುತ್ತೇವೆ” ದಾವೂದ್ ಸಾಕಿದ ನಾಯಿಗೆ ಸಾವು ಖಚಿತ ಎಂಬ ಬೆದರಿಕೆ ಆಡಿಯೋದಲ್ಲಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಮುಂಬೈನ ಗ್ಯಾಲಕ್ಸಿ ಅಪಾರ್ಟ್ಮೆಂಟ್ನಲ್ಲಿರುವ ಸಲ್ಮಾನ್ ಖಾನ್ ನಿವಾಸದ ಸುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಈ ಘಟನೆಯ ಬೆನ್ನಲ್ಲೇ, ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತಿರುವ ಆಡಿಯೋ ಸಂದೇಶವೊಂದು ಹರಿದಾಡುತ್ತಿದೆ. ಈ ಸಂದೇಶದಲ್ಲಿ ಟೈಗರ್ ಶ್ರಾಫ್ಗೆ ಬೆದರಿಕೆ ಹಾಕಿರುವುದಲ್ಲದೆ, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೂ ಕೊಲೆ ಬೆದರಿಕೆ ಒಡ್ಡಲಾಗಿದೆ ಎನ್ನಲಾಗಿದೆ.
ಸಲ್ಮಾನ್ ಖಾನ್ಗೂ ಜೀವ ಬೆದರಿಕೆ!
ಆಡಿಯೋ ಸಂದೇಶದಲ್ಲಿ ಮಾತನಾಡಿರುವ ಅನಿಲ್ ಪಂಡಿತ್ ಎಂಬ ವ್ಯಕ್ತಿ, ಸಲ್ಮಾನ್ ಖಾನ್ ನನ್ನ ಬಿಡುವುದಿಲ್ಲ. ಸಲ್ಮಾನ್ ಖಾನ್ ನನ್ನ ಹತ್ಯೆಗೈಯುವ ಯೋಜನೆ ಮುಂದೂಡಿಕೆಯಾಗುತ್ತಿರಬಹುದು, ಆದರೆ ಒಂದಲ್ಲ ಒಂದು ದಿನ ಅವನನ್ನ ಮುಗಿಸಿಯೇ ತೀರುತ್ತೇವೆ ಎಂಬ ಬೆದರಿಕೆಯ ಮಾತುಗಳೂ ಆಡಿಯೋದಲ್ಲಿವೆ. ಅಷ್ಟೇ ಅಲ್ಲ, ಸಲ್ಮಾನ್ ಖಾನ್ ಅವರಿಗೆ ಎಷ್ಟೇ ಬಿಗಿ ಭದ್ರತೆ ಒದಗಿಸಿದರೂ, ಅದನ್ನು ಹೇಗೆ ಭೇದಿಸಬೇಕು ಎಂಬುದು ನಮಗೆ ಗೊತ್ತಿದೆ ಎಂದಿದ್ದಾನೆ.
ಸಲ್ಮಾನ್ ಖಾನ್ ಜೊತೆ ಕೆಲಸ ಮಾಡಿದ್ದೇ ಟಾರ್ಗೆಟ್ಗೆ ಕಾರಣ?
ಟೈಗರ್ ಶ್ರಾಫ್ ತಮ್ಮ ಗ್ಯಾಂಗ್ನ ಸೂಚನೆಗಳನ್ನು ನಿರ್ಲಕ್ಷಿಸಿ, ಲಾರೆನ್ಸ್ ಬಿಷ್ಣೋಯ್ನಿಂದ ನಿರಂತರ ಬೆದರಿಕೆ ಎದುರಿಸುತ್ತಿರುವ ಸಲ್ಮಾನ್ ಖಾನ್ ಅವರೊಂದಿಗೆ ಸಿನಿಮಾಗಳಲ್ಲಿ ಕೆಲಸ ಮುಂದುವರಿಸಿದ್ದರಿಂದ ಅವರನ್ನು ಗುರಿಯಾಗಿಸಲಾಗಿದೆ ಎಂದು ಆಡಿಯೋದಲ್ಲಿರುವ ವ್ಯಕ್ತಿ ಹೇಳಿಕೊಂಡಿದ್ದಾನೆ.
ಟೈಗರ್ ಶ್ರಾಫ್ಗೆ ಈ ಹಿಂದೆಯೇ ಕರೆ ಮಾಡಿ ತಮ್ಮ ನಿಲುವನ್ನು ವಿವರಿಸಿದ್ದೆವು. ಆದರೆ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಹೀಗಾಗಿ ಅವರಿಗೆ ತಕ್ಕ ರೀತಿಯಲ್ಲಿ ಉತ್ತರಿಸಲಾಗಿದೆ ಎಂಬರ್ಥದ ಮಾತುಗಳೂ ಸಂದೇಶದಲ್ಲಿವೆ ಎಂದು ವರದಿಯಾಗಿದೆ.
ಚಲನಚಿತ್ರೋದ್ಯಮದಲ್ಲಿ ತಮ್ಮ ಸೂಚನೆಗಳನ್ನು ಪಾಲಿಸದೆ, ಸಲ್ಮಾನ್ ಖಾನ್ ಜೊತೆ ಕೆಲಸ ಮಾಡುವವರನ್ನು ಗುರಿಯಾಗಿಸುವುದಾಗಿ ಎಚ್ಚರಿಸಿರುವ ವ್ಯಕ್ತಿ, ಇದು ಮೊದಲ ಮತ್ತು ಕೊನೆಯ ಎಚ್ಚರಿಕೆ ಎಂದೂ ಹೇಳಿಕೊಂಡಿದ್ದಾನೆ. ಇದೇ ವೇಳೆ, ಸಲ್ಮಾನ್ ಖಾನ್ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ್ದು, ದಾವೂದ್ ಇಬ್ರಾಹಿಂ ಹೆಸರನ್ನೂ ಪ್ರಸ್ತಾಪಿಸಿದ್ದಾನೆ ಎನ್ನಲಾಗಿದೆ.
ಗ್ಯಾಲಕ್ಸಿ ಅಪಾರ್ಟ್ಮೆಂಟ್ಗೆ ಬಿಗಿ ಭದ್ರತೆ ;
ಸಲ್ಮಾನ್ ಖಾನ್ ಮುಂದಿನ ಗುರಿ ಎಂಬ ಬೆದರಿಕೆ ಸಂದೇಶ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ಮುಂಬೈನ ಬಾಂದ್ರಾದಲ್ಲಿರುವ ಅವರ ನಿವಾಸ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಸುತ್ತ ಭದ್ರತೆ ಹೆಚ್ಚಿಸಲಾಗಿದೆ. ನಿವಾಸದ ಹೊರಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಅಲ್ಲಿಗೆ ಬರುವವರ ಮೇಲೆ ನಿಗಾ ಇರಿಸಲಾಗಿದೆ. ತಪಾಸಣೆಯ ಬಳಿಕವೇ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ ಎನ್ನಲಾಗಿದೆ.
ಒಟ್ಟಿನಲ್ಲಿ, ಟೈಗರ್ ಶ್ರಾಫ್ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ ಎನ್ನಲಾದ ಘಟನೆ ಹಾಗೂ ಸಲ್ಮಾನ್ ಖಾನ್ಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಗಂಭೀರ ಬೆದರಿಕೆ ಸಂದೇಶಗಳು ಬಾಲಿವುಡ್ ವಲಯದಲ್ಲಿ ಆತಂಕ ಮೂಡಿಸಿವೆ.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am