ಬ್ರೇಕಿಂಗ್ ನ್ಯೂಸ್
12-01-21 11:06 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ದಂಪತಿ ಸಂತಸದಲ್ಲಿ ಅಲೆಯಲ್ಲಿ ತೇಲುತ್ತಿದ್ದಾರೆ. ಮೊದಲ ಮಗುವನ್ನು ಸ್ವಾಗತಿಸಿದ ವಿರುಷ್ಕಾ ಜೋಡಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ನಿನ್ನೆ (ಜನವರಿ 11) ಮಧ್ಯಾಹ್ನ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ
ಮಗು ಜನಿಸಿದ ಬಳಿಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವ ಮೂಲಕ ಸಂತಸದ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಅನುಷ್ಕಾ ಮತ್ತು ವಿರಾಟ್ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.
ಮಗುವನ್ನು ಮಾಧ್ಯಮಗಳಿಂದ ದೂರ ಇಡುವುದಾಗಿ ಅನುಷ್ಕಾ ಈ ಹಿಂದೆಯೇ ಹೇಳಿದ್ದರು. ಹಾಗಾಗಿ ಮಗಳ ಫೋಟೋ ರಿವೀಲ್ ಮಾಡಿಲ್ಲ. ಆದರೆ ಅನುಷ್ಕಾ ಶರ್ಮಾ ಅವರ ಸೋದರಮಾವ ಅನುಷ್ಕಾ ಮತ್ತು ವಿರಾಟ್ ದಂಪತಿಯ ಮುದ್ದು ಮಗಳ ಫೋಟೋವನ್ನು ಶೇರ್ ಮಾಡಿದ್ದಾರೆ.

ಮನೆಗೆ ಆಗಮಿಸಿದ ಹೊಸ ಸದಸ್ಯೆಯನ್ನು ಸ್ವಾಗತಿಸಿ ಅನುಷ್ಕಾ ಮಾವ ಪುಟ್ಟ ಕಂದನ ಕಾಲುಗಳ ಫೋಟೋವನ್ನು ಶೇರ್ ಮಾಡಿದ್ದಾರೆ. ಅನುಷ್ಕಾ ಮಗುವಿಗೆ ಜನ್ಮ ನೀಡಿದ ಬಳಿಕ ಫೋಟೋ ಶೇರ್ ಮಾಡಿ ವಿಕಾಸ್, ' ಸಂತೋಷ ಹೆಚ್ಚಾಗಿದೆ. ಮನೆಯಲ್ಲಿ ದೇವತೆ' ಎಂದು ಬರೆದುಕೊಂಡಿದ್ದಾರೆ. ಆದರೆ ಅನುಷ್ಕಾ ಮತ್ತು ವಿರಾಟ್ ಮಗಳು ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಇದು ಅನುಷ್ಕಾ ಮಗುವಿನ ಫೋಟೋನಾ ಎನ್ನುವ ಅನುಮಾನ ಕಾಡಿದೆ. ಅದೇನೆ ಇದ್ರು ಅನುಷ್ಕಾ ಶರ್ಮಾ ಮಾವ ಶೇರ್ ಮಾಡಿರುವ ಫೋಟೋ ವೈರಲ್ ಆಗುತ್ತಿದೆ. ಮಗಳು ಜನಿಸಿದ ಬಗ್ಗೆ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ 'ನಿಮ್ಮ ಪ್ರೀತಿ, ಪ್ರಾರ್ಥನೆ ಮತ್ತು ಶುಭಾಶಯಗಳಿಗೆ ಧನ್ಯವಾದಗಳು. ಅನುಷ್ಕಾ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ನಮ್ಮ ಜೀವನದ ಹೊಸ ಅಧ್ಯಾಯವನ್ನು ಪ್ರಾರಭಿಸಿದ್ದೇವೆ. ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸಿದ್ದೇನೆ' ಎಂದು ಬಹಿರಂಗ ಪಡಿಸಿದ್ದರು.
This News Article is a Copy of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm