ಬ್ರೇಕಿಂಗ್ ನ್ಯೂಸ್
17-01-21 02:17 pm Source: FILMIBEAT ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಗಳಿಂದ ದೂರ ಆಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದಲ್ಲೊಂದು ವಿವಾದಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೊಂದು ವಿವಾದದಲ್ಲಿ ಕಂಗನಾ ಸಿಲುಕಿಕೊಂಡಿದ್ದಾರೆ. ಕ್ವೀನ್ ನಟಿಯ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪ ಕೇಳಿಬಂದಿದೆ. ಕಂಗನಾ ಇತ್ತೀಚಿಗಷ್ಟೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು. 'ಮಣಿಕರ್ಣಿಕಾ; ದಿ ಲೆಜೆಂಡ್ ಆಫ್ ದಿಡ್ಡಾ' ಎಂಬ ಹೆಸರಿನ ಚಿತ್ರದಲ್ಲಿ ಕಾಶ್ಮೀರದ ರಾಣಿಯಾಗಿ ನಟಿಸುವುದಾಗಿ ಕಂಗನಾ ಘೋಷಣೆ ಮಾಡಿದ್ದರು. ಸಿನಿಮಾ ಘೋಷಣೆಯಾದ ಬೆನ್ನಲ್ಲೇ ವಿವಾದವೂ ಬೆನ್ನತ್ತಿದೆ. ಕಂಗನಾ ಕಥೆ ಕದ್ದಿದ್ದಾರೆ ಎಂದು ಲೇಖಕ ಆಶಿಶ್ ಕೌಲ್ ಆರೋಪಿಸಿ ಕಂಗನಾಗೆ ನೋಟಿಸ್ ನೀಡಲಾಗಿದೆ.
ದಿಡ್ಡಾ- ಕಾಶ್ಮೀರ್ ಕೀ ಯೋಧಾ ರಾಣಿ' ಪುಸ್ತಕಕ್ಕೆ ಮುನ್ನುಡಿ ಬರೆದುಕೊಡುವಂತೆ ಕಂಗನಾಗೆ ಈ ಹಿಂದೆ ಮೇಲ್ ಮಾಡಿದ್ದೆ, ಆದರೆೆ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುನ್ನುಡಿ ಬದಲು, ಅದನ್ನೇ ಸಿನಿಮಾ ಮಾಡಲು ಮುಂದಾಗಿದ್ದಾರೆ ಎಂದು ಲೇಖಕ ಆಶಿಶ್ ಆರೋಪಿಸಿದ್ದಾರೆ.
ನೋಟಿಸ್ ನಲ್ಲಿ ಕಂಗನಾಗೆ 72 ಗಂಟೆಯಲ್ಲಿ ಉತ್ತರ ನೀಡುವಂತೆ ಕೇಳಿಕೊಂಡಿದ್ದಾರೆ. ಇಲ್ಲವಾದರೇ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಚಿತ್ರದ ನಿರ್ಮಾಪಕ ಕಮಲ್ ಜೈನ್ ಕಥೆ ಕದ್ದು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಆದರೆ ಅವರ ಸಿನಿಮಾ ಪುಸ್ತಕವನ್ನು ಆಧರಿಸಿದೆ ಎಂದು ಲೇಖಕ ಆಶೀಶ್ ಆರೋಪಿಸಿದ್ದಾರೆ. ಅಲ್ಲದೇ ಕಂಗನಾ ವಿರುದ್ಧ ಕಥೆ ಕದ್ದ ಆರೋಪ ಮಾಡಿದ ಬಳಿಕ ಕಂಗನಾ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ, ನಿಂದನೆ ಮಾಡುತ್ತಿದ್ದಾರೆ. ಇದರಿಂದ ತೀವ್ರ ಮಾನಸಿಕ ಯಾತನೆ ಅನುಭವಿಸಿರುವುದಾಗಿಯೂ ಅಶಿಶ್ ಹೇಳಿದ್ದಾರೆ.
ಅಲ್ಲದೆ ಈ ಪುಸ್ತಕ ಈಗಾಗಲೇ ಸಿನಿಮಾವಾಗಲು ಖ್ಯಾತ ನಿರ್ಮಾಣ ಸಂಸ್ಥೆ ಜೊತೆ ಮಾತುಕತೆ ನಡೆದಿದೆ. 2017ರಲ್ಲೇ ನೋಂದಾಯಿಸಲಾಗಿದೆ ಎಂದು ಹೇಳಿದ್ದಾರೆ. ಇದೀಗ ಕಂಗನಾ ಕಡೆಯಿಂದ ಯಾವ ಪ್ರತಿಕ್ರಿಯೆ ಬರಲಿದೆ ಎನ್ನುವ ಕಾತರ ಅಭಿಮಾನಿಗಲ್ಲಿದೆ. ಸಿನಿಮಾ ಪ್ರಾರಂಭಕ್ಕೂ ಮುನ್ನವೇ ಎದುರಾಗಿರುವ ವಿಘ್ನ ನಿವಾರಣೆಯಾಗುತ್ತಾ ಕಾದುನೋಡಬೇಕು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm