ಬ್ರೇಕಿಂಗ್ ನ್ಯೂಸ್
27-01-21 02:37 pm Source: FILMIBEAT Shruthi Gk ಸಿನಿಮಾ
ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇತ್ತೀಚಿಗೆ ವಿಶೇಷ ಅಭಿಮಾನಿಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಅಭಿಮಾನಿಗಳೇ ದೇವರೆಂದು ಆರಾಧಿಸುವ ಅಪ್ಪು ಅವರು ಕಷ್ಟದಲ್ಲಿದ್ದಾರೆ ಎಂದು ಗೊತ್ತಾದರೆ ಸಾಕು ಸಹಾಯಕ್ಕೆ ನಿಲ್ಲುತ್ತಾರೆ. ಇತ್ತೀಚಿಗೆ ಪವರ್ ಸ್ಟಾರ್ ಅಪ್ಪಟ ಅಭಿಮಾನಿಯೊಬ್ಬರನ್ನು ಭೇಟಿಯಾಗಿ ಅವರ ಆಸೆ ಈಡೇರಿಸಿದ್ದಾರೆ. ಹೌದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆಯ ದೇವಿಪ್ರಿಯಾ ಎನ್ನುವ ಬಾಲಕಿಗೆ ಅಪ್ಪು ಎಂದರೆ ತುಂಬಾ ಪ್ರೀತಿ.
ಆದರೆ ಆ ದೇವರು ಎಲ್ಲಾ ಮಕ್ಕಳಂತೆ ಕುಣಿಯುವ, ಓಡುವ, ಹಾರಾಡುತ್ತಾ ಜೀವಿಸುವ ಬದುಕನ್ನು ಕಿತ್ತುಕೊಂಡಿದ್ದಾನೆ. ಸುಮಾರು ಎರಡು ವರ್ಷಗಳಿಂದ ದೇವಿಪ್ರಿಯಾ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಪುಟ್ಟ ಬಾಲಕಿ ಪ್ರತಿನಿತ್ಯ ಪವರ್ ಸ್ಟಾರ್ ನೋಡದೆ ಊಟ ಸಹ ಮಾಡುವುದಲ್ಲವಂತೆ.

ಜೀವನದಲ್ಲಿ ಒಮ್ಮೆಯಾದರೂ ಅಪ್ಪು ಭೇಟಿಯಾಗಬೇಕು, ಮಾತನಾಡಿಸಬೇಕು ಎನ್ನುವುದು ಆ ಬಾಲಕಿಯ ಆಸೆ. ಈ ಬಗ್ಗೆ ವಿಷಯ ತಿಳಿದುಕೊಂಡ ಪವರ್ ಸ್ಟಾರ್ ಪುಟ್ಟ ಬಾಲಕಿಯನ್ನು ಭೇಟಿಯಾಗಿದ್ದಾರೆ. ಅವರ ಜೊತೆ ಕೆಲ ಸಮಯ ಮಾತನಾಡಿ ಧೈರ್ಯ ತುಂಬಿದ್ದಾರೆ. ಪವರ್ ಸ್ಟಾರ್ ಭೇಟಿಯಿಂದ ದೇವಿಪ್ರಿಯಾ ಫುಲ್ ಖುಷ್ ಆಗಿದ್ದಾರೆ. ಅವರ ಕುಟುಂಬದವರು ಸಹ ಅಪ್ಪು ನೋಡಿ ಸಂತಸ ಪಟ್ಟಿದ್ದಾರೆ. ಪುನೀತ್ ದೇವಿಪ್ರಿಯಾ ಮತ್ತು ಅವರ ಕುಟುಂಬದವರನ್ನು ಭೇಟಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪ್ಪು ಮಾನವೀಯ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪುನೀತ್ ಸದ್ಯ ಜೇಮ್ಸ್ ಸಿನಿಮಾದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜೇಮ್ಸ್ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಚಿತ್ರಕ್ಕೆ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇನ್ನು ಪುನೀತ್ ನಟನೆಯ ಯುವರತ್ನ ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದು, ಏಪ್ರಿಲ್ 1ರಂದು ತೆರೆಗೆ ಬರುತ್ತಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
This News Article is a Copy of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm