ಬ್ರೇಕಿಂಗ್ ನ್ಯೂಸ್
28-01-21 12:33 pm Source: FILMIBEAT Murulidhara ಸಿನಿಮಾ
ಬೆಂಗಳೂರು, ಜನವರಿ 28: ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿದ್ದ ಇಂದ್ರಜಿತ್ ಲಂಕೇಶ್ ಗೆ ಮತ್ತೊಮ್ಮೆ ಸಿಸಿಬಿ ಬುಲಾವ್ ನೀಡಿದೆ. ಸಿಸಿಬಿ ಡಿಸಿಪಿ ಬಸವರಾಜ ಅಂಗಡಿ ಮುಂದೆ ಹಾಜರಾಗಲು ಸೂಚಿಸಿದ್ದು, ಗುರುವಾರ ಬೆಳಗ್ಗೆ 11 ಗಂಟೆಗೆ ಇಂದ್ರಜಿತ್ ಪೊಲೀಸ್ ಅಯುಕ್ತರ ಕಚೇರಿಗೆ ಹಾಜರಾಗಲಿದ್ದಾರೆ. ಡ್ರಗ್ಸ್ ಕುರಿತು ಮತ್ತಷ್ಟು ಮಾಹಿತಿ ಪಡೆಯಲಿದ್ದಾರೆ.
ಈ ಹಿಂದೆ ಎರಡು ಬಾರಿ ಸಿಸಿಬಿ ಪೊಲೀಸರ ಕಚೇರಿಗೆ ಭೇಟಿ ನೀಡಿ ಸ್ಯಾಂಡಲ್ ವುಡ್ ಡ್ರಗ್ ಜಾಲದ ಬಗ್ಗೆ ಇಂಧ್ರಜಿತ್ ಲಂಕೇಶ್ ಮಾಹಿತಿ ನೀಡಿದ್ದರು. 2020 ಅಗಸ್ಟ್ 21 ಹಾಗೂ ಸೆಪ್ಟಂಬರ್ 2 ರಂದು ಎರಡು ಬಾರಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿ ಮಾಹಿತಿ ನೀಡಿದ್ದರು. ಡ್ರಗ್ ಪಾರ್ಟಿಯ ಚಿತ್ರಗಳಿದ್ದ ಪೆನ್ ಡ್ರೈವ್ ಸಿಸಿಬಿ ಪೊಲೀಸರಿಗೆ ನೀಡಿದ್ದರು. ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ನೀಡಿದ್ದ ಮಾಹಿತಿ ಸಿಸಿಬಿ ಪೊಲೀಸರಿಗೆ ಮಹತ್ವದ ಸುಳಿವು ನೀಡಿತ್ತು.
ಈ ಹಿನ್ನೆಲೆಯಲ್ಲಿ ಬಾಣಸವಾಡಿ ಠಾಣೆಯಲ್ಲಿ ದಾಖಲಾಗಿದ್ದ ಹಳೇ ಪ್ರಕರಣ ಮರು ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರು ಆರ್ ಟಿಓ ಅಧಕಾರಿ ರವಿಶಂಕರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ತದನಂತರ ನಟಿ ಐಂದ್ರಿತಾ ರೈ, ದಿಗಂತ್, ರಾಗಿಣಿ, ಸಂಜನಾ ಗಲ್ರಾಣಿ ಸೇರಿದಂತೆ ಸ್ಯಾಂಡಲ್ ವುಡ್ ನಟ- ನಟಿಯರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.
ನಟಿ ಸಂಜನಾ , ರಾಗಿಣಿ ಬಂಧನಕ್ಕೆ ಒಳಗಾಗಿದ್ದರು. ಆದಿತ್ವ ಆಳ್ವಾ ಕೂಡ ಇತ್ತೀಚೆಗೆ ಬಂಧನಕ್ಕೆ ಒಳಗಾಗಿದ್ದ. ಇನ್ನು ಡ್ರಗ್ ಡೀಲಿಂಗ್ ಕಿಂಗ್ ಪಿನ್ ಗಳಾದ ವೀರೇನ್ ಖನ್ನಾ, ರಾಹುಲ್ ತೋನ್ಸೆ, ಶಿವಪ್ರಕಾಶ್ ಸೇರಿದಂತೆ ಸ್ಯಾಂಡಲ್ ವುಡ್ ಡ್ರಗ್ ಡೀಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಇಂದ್ರಜಿತ್ ಲಂಕೇಶ್ ಅವರಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸಿಸಿಬಿ ಡಿಸಿಪಿ ಬಸವರಾಜ ಅಂಗಡಿ ಅವರ ಮುಂದೆ ಇಂದ್ರಜಿತ್ ಹಾಜರಾಗಲಿದ್ದು, ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಸಿಬಿ ಪೊಲೀಸರು ವಿಚಾರಣೆಗೆ ಬರುವಂತೆ ಕರೆದಿರುವುದು ನಿಜ. ನಾನು ಸಿಸಿಬಿ ಡಿಸಿಪಿ ಯವರನ್ನು ಭೇಟಿ ಮಾಡಲಿದ್ದೇನೆ. ಅವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ ಬಳಿಕವಷ್ಟೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಇಂದ್ರಜಿತ್ ಲಂಕೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 01:58 pm
Udupi Correspondent
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm