ಬ್ರೇಕಿಂಗ್ ನ್ಯೂಸ್
04-02-21 12:57 pm Source: FILMIBEAT Shruthi Gk ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚಿಗಷ್ಟೆ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಬಹುನಿರೀಕ್ಷೆಯ ವಿಕ್ರಾಂತ್ ರೋಣ ಟೀಸರ್ ವಿಶ್ವದ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಪ್ರದರ್ಶನ ಕಂಡಿತ್ತು.
ವಿಶ್ವ ವಿಖ್ಯಾತ ಕಟ್ಟಡದ ಮೇಲೆ ಆರಡಿ ಕಟೌಟ್ ನ ಆರ್ಬಟ ನೋಡಿ ಅಭಿಮಾನಿಗಳು ಸಂತಸ ಪಟ್ಟಿದ್ದರು. ವಿಕ್ರಾಂತ್ ರೋಣ ಬೆನ್ನಲ್ಲೇ ಇದೀಗ ಸುದೀಪ್ ಕೋಟಿಗೊಬ್ಬನ ದರ್ಶನ ಮಾಡಿಸಲು ಸಜ್ಜಾಗಿದ್ದಾರೆ. ಹೌದು, ಕಿಚ್ಚ ನಟನೆಯ ಕೋಟಿಗೊಬ್ಬ-3 ಸಿನಿಮಾ ಏಪ್ರಿಲ್ 29ಕ್ಕೆ ತೆರೆಗೆ ಬರುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಸಿನಿಮಾ ರಿಲೀಸ್ ಗೂ ಮೊದಲು ಚಿತ್ರದ ಹಾಡುಗಳನ್ನು ರಿಲೀಸ್ ಮಾಡಲು ಸಿನಿಮಾತಂಡ ನಿರ್ಧರಿಸಿದೆ. ಕೋಟಿಗೊಬ್ಬ-3 ಚಿತ್ರದ ಹಾಡುಗಳನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಬೇಕು ಎನ್ನುವುದು ತಂಡದ ಪ್ಲಾನ್. ಅದರಂತೆ ಈಗಾಗಲೇ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಮೂಲಗಳ ಪ್ರಕಾರ ಕೋಟಿಗೊಬ್ಬ-3 ಸಿನಿಮಾದ ಹಾಡುಗಳು ಮಾರ್ಚ್ 28ರಂದು ಬಿಡುಗಡೆಗೆ ಆಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಆಡಿಯೋ ರಿಲೀಸ್ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲಾಗುತ್ತಿದೆ. ಯಾರೆಲ್ಲ ಗೆಸ್ಟ್ ಭಾಗಿಯಾಗಲಿದ್ದಾರೆ, ಚಿತ್ರದ ಹಾಡುಗಳು ಯಾರಿಂದ ಬಿಡುಗಡೆಯಾಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಬಣ್ಣದ ಲೋಕದಲ್ಲಿ 25 ವರ್ಷ ಪೂರೈಸಿರುವ ಸುದೀಪ್, ಈ ಸಂಭ್ರಮವನ್ನು ದುಬೈನಲ್ಲಿ ಆಚರಿಸಿದ್ದಾರೆ. ಸದ್ಯ ದುಬೈನಿಂದ ವಾಪಸ್ ಆಗಿರುವ ಕಿಚ್ಚ ಕೋಟಿಗೊಬ್ಬ-3 ಪ್ರಮೋಷನ್ ನಲ್ಲಿ ಭಾಗಿಯಾಗಲಿದ್ದಾರೆ. ಕೋಟಿಗೊಬ್ಬ 3ನೇ ಸರಣಿಗೆ ನಿರ್ಮಾಪಕ ಸೂರಪ್ಪ ಬಾಬು ಬಂಡವಾಳ ಹೂಡಿದ್ದಾರೆ. ಶಿವ ಕಾರ್ತಿಕ್ ಆಕ್ಷನ್ ಕಟ್ ಹೇಳಿದ್ದಾರೆ.
ಚಿತ್ರದಲ್ಲಿ ದೊಡ್ಡ ಕಲಾವಿದರ ದಂಡೆ ಇದೆ. ಕಿಚ್ಚ ಸುದೀಪ್ ಜೊತೆ ನಾಯಕಿಯಾಗಿ ಮಲಯಾಳಂ ಸುಂದರಿ ಮಡೊನ್ನಾ ಸೆಬಾಸ್ಟಿಯನ್ ಕಾಣಿಸಿಕೊಂಡಿದ್ದಾರೆ. ಇನ್ನು ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸಾನಿ ರವಿಶಂಕರ್ ಸೇರಿದಂತೆ ಅನೇಕರಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದ ಹಾಡುಗಳು ಹೇಗಿರಲಿದೆ ಎನ್ನುವ ಕುತೂಹಲದಿಂದ ಕಾಯುತ್ತಿದ್ದಾರೆ ಅಭಿಮಾನಿಗಳು. ಆಡಿಯೋ ರಿಲೀಸ್ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಸದ್ಯದಲ್ಲೇ ಬಹಿರಂಗ ಪಡಿಸುವ ಸಾಧ್ಯತೆ ಇದೆ.
This News Article is a Copy of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm