ಬ್ರೇಕಿಂಗ್ ನ್ಯೂಸ್
05-02-21 01:24 pm Source: FILMIBEAT Shruthi Gk ಸಿನಿಮಾ
ಕನ್ನಡ ಚಿತ್ರರಂಗದ ಹಿರಿಯ ನಟಿ ಮಹಾಲಕ್ಷ್ಮಿ 3 ದಶಕಗಳ ಬಳಿಕ ಮತ್ತೆ ಕನ್ನಡ ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. 1980-90ರ ದಶಕದಲ್ಲಿ ಚಿತ್ರರಂಗವನ್ನಾಳಿದ ನಟಿ ಮಹಾಲಕ್ಷ್ಮಿ ದಿಢೀರನೆ ಬಣ್ಣದ ಲೋಕದಿಂದ ಮಾಯವಾಗಿದ್ದರು. ಅದ್ಭುತ ಅಭಿನಯದ ಮೂಲಕ ಕನ್ನಡ ಚಿತ್ರ ಪ್ರೇಕ್ಷಕರನ್ನು ರಂಜಿಸಿ, ಹೇಳದೆ ಕೇಳದೆ ಮಾಯವಾಗಿದ್ದ ಮಹಾಲಕ್ಷ್ಮಿ ಈಗ ಮತ್ತೆ ಬಣ್ಣದ ಲೋಕಕ್ಕೆ ವಾಪಸ್ ಆಗಿರುವುದು ಕನ್ನಡ ಚಿತ್ರಾಭಿಮಾನಿಗಳಿಗೆ ಸಂತಸ ತಂದಿದೆ. ಮಹಾಲಕ್ಷ್ಮಿ ಎಲ್ಲಿದ್ದರು? ಏನ್ಮಾಡುತ್ತಿದ್ದರು? ಎನ್ನುವ ಪ್ರಶ್ನೆ ಚಿತ್ರಪ್ರೇಕ್ಷಕರನ್ನು 30 ವರ್ಷಗಳಿಂದ ಕಾಡಿತ್ತು. ಆದರೆ ಈ ಎಲ್ಲಾ ಪ್ರಶ್ನೆಗೆ ಉತ್ತರದೊಂದಿಗೆ ಮಹಾಲಕ್ಷ್ಮಿ 2019ರಲ್ಲಿ ಪ್ರತ್ಯಕ್ಷರಾಗಿ ಅಚ್ಚರಿ ಮೂಡಿಸಿದ್ದರು. 2019ರಲ್ಲಿ ಫಿಲ್ಮಿ ಬೀಟ್ ಕನ್ನಡಕ್ಕೆ ನೀಡಿದ ಎಕ್ಸಕ್ಲೂಸಿವ್ ಸಂದರ್ಶನದಲ್ಲಿ 30 ವರ್ಷದ ನಿಗೂಢ ಪಯಣದ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದರು
2019ರಲ್ಲಿ ಫಿಲ್ಮಿ ಬೀಟ್ ಕನ್ನಡದ ಜೊತೆ ಮಾತನಾಡಿದ್ದ ಮಹಾಲಕ್ಷ್ಮಿ
'ನಾನು ತುಂಬ ತುಂಬಾ ಚೆನ್ನಾಗಿ ಇದ್ದೀನಿ. ನನ್ನ ಬಗ್ಗೆ ಕೇಳಿ ಬರುತ್ತಿದ್ದ ಸುದ್ದಿಗಳೆಲ್ಲ ರೂಮರ್ಸ್ ಅಷ್ಟೆ, ನನಗೆ ತುಂಬ ಒಳ್ಳೆಯ ಫ್ಯಾಮಿಲಿ ಇದೆ. ನಾನು ಹೌಸ್ ವೈಫ್ ಆಗಿದ್ದೀನಿ, ನಾನು ಸನ್ಯಾಸಿ ಅಲ್ಲ, ನಾನು ಸಂಸಾರಸ್ತೆ ಎನ್ನುವುದನ್ನು ಸ್ಪಷ್ಟಪಡಿಸುತ್ತೇನೆ. ಚರ್ಚ್ ನಲ್ಲಿ ಕೆಲಸ ಮಾಡುತ್ತಿರುವುದು ನಿಜ ಆದರೆ ಸನ್ಯಾಸಿ ಅಲ್ಲ. ನಾನೂ ಚೆನ್ನೈನಲ್ಲಿ ನೆಲೆಸಿದ್ದೀನಿ' ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದರು.

ಎರಡನೇ ಇನ್ನಿಂಗ್ಸ್ ಪ್ರಾಂಭಿಸಿರುವ ನಟಿ
ಅದೇ ಸಮಯದಲ್ಲಿ ಮತ್ತೆ ಬಣ್ಣದ ಲೋಕಕ್ಕೆ ವಾಪಸ್ ಬರುವುದಾಗಿ ಹೇಳಿದ್ದರು. ಅದರಂತೆ ಈಗ ಮಹಾಲಕ್ಷ್ಮಿ ಬಣ್ಣದ ಬದುಕಿನಲ್ಲಿ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ್ದಾರೆ. ಕನ್ನಡ ಸಿನಿಮಾವೊಂದರಲ್ಲಿ ನಟಿಸಲು ಸಜ್ಜಾಗಿದ್ದಾರೆ. ಇತ್ತೀಚಿಗೆ ಮಹಾಲಕ್ಷ್ಮಿ ನಟನೆಯ ಹೊಸ ಸಿನಿಮಾದ ಮುಹೂರ್ತ ಕೂಡ ನೆರವೇರಿದೆ.
TRP ರಾಮ ಸಿನಿಮಾದಲ್ಲಿ ನಟನೆ
ಹೌದು, ಮಹಾಲಕ್ಷ್ಮಿ TRP ರಾಮ ಎನ್ನುವ ಸಿನಿಮಾ ಮೂಲಕ ಮತ್ತೆ ಕನ್ನಡ ಚಿತ್ರಾಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಚಿತ್ರದಲ್ಲಿ ಮಹಾಲಕ್ಷ್ಮಿ ನಾಯಕನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟನೆಗೆ ತುಂಬಾ ಪ್ರಾಮುಖ್ಯತೆ ಇರುವ ಪಾತ್ರವಾಗಿದ್ದರಿಂದ ಈ ಸಿನಿಮಾ ಒಪ್ಪಿಕೊಂಡಿರುವುದಾಗಿ ಹೇಳಿದ್ದಾರೆ.

TRP ರಾಮ ಸಿನಿಮಾದ ಬಗ್ಗೆ
TRP ರಾಮ ಚಿತ್ರದಲ್ಲಿ ರವಿ ಪ್ರಸಾದ್ ನಿರ್ದೇಶನ ಮಾಡಿ, ನಟಿಸುತ್ತಿರುವ ಸಿನಿಮಾ. ಚಿತ್ರಕ್ಕೆ ಚಿತ್ರಸಾಹಿತಿ ಮತ್ತು ನಿರ್ದೇಶಕ ಕವಿರಾಜ್ ಚಿತ್ರಕ್ಕೆ ಕ್ಲಾಪ್ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. 30 ವರ್ಷಗಳ ಬಳಿಕ ಮತ್ತೆ ಮರಳಿರುವ ಮಹಾಲಕ್ಷ್ಮಿ ಅವರನ್ನು ತೆರೆಮೇಲೆ ನೋಡಲು ಅನೇಕರು ಕಾತರರಿದ್ದಾರೆ. ಆದರೆ ಇನ್ನು ಸ್ವಲ್ಪ ದಿನ ಕಾಯಲೇ ಬೇಕು.
This News Article is a Copy of FILMIBEAT
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm