ಬ್ರೇಕಿಂಗ್ ನ್ಯೂಸ್
08-02-21 02:47 pm Source: FILMIBEAT Shruthi Gk ಸಿನಿಮಾ
ತಮಿಳಿನ ಖ್ಯಾತ ನಟ ಸೂರ್ಯಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಸೂರ್ಯ ಹೇಳಿದ್ದಾರೆ. ಅಲ್ಲದೆ ಇನ್ನೂ ಕೊರೊನಾ ವೈರಸ್ ಹೋಗಿಲ್ಲ, ಜೀವನ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ ಎಂದಿಲ್ಲ ಎಂದು ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿರುವ ಸೂರ್ಯ, 'ನಾನು ಕೊರೊನಾ ಸೋಂಕಿನಿಂದ ಬಳಲುತ್ತಿದ್ದೇನೆ. ವೈದ್ಯರಿಂದ ಚಿಕಿತ್ಸೆಪಡೆಯುತ್ತಿದ್ದೇನೆ. ಜೀವನವೂ ಇನ್ನು ಸಹಜ ಸ್ಥಿತಿಗೆ ಬಂದಿಲ್ಲ ಎಂದು ನಾವು ಅರಿತುಕೊಳ್ಳಬೇಕು. ಸುರಕ್ಷತೆಯ ಕಡೆ ಗಮನಕೊಡಬೇಕು. ವೈದ್ಯರಿಗೆ ನನ್ನ ಧನ್ಯವಾದಗಳು' ಎಂದು ಹೇಳಿದ್ದಾರೆ.
ನಿರ್ದೇಶಕ ರಾಜಶೇಖರ್ ಪಾಂಡಿಯನ್ ಟ್ವೀಟ್ ಮಾಡಿ, ಸಹೋದರ ಮತ್ತು ಸಹೋದರಿಯರೇ ಅಣ್ಣ ಚೆನ್ನಾಗಿದ್ದಾರೆ. ಯಾರು ಚಿಂತಿಸಬೇಡಿ' ಎಂದು ಹೇಳಿದ್ದಾರೆ.
ನಟ ಸೂರ್ಯ ಟ್ವೀಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆ ಮಾಡುತ್ತಿದ್ದಾರೆ. ಬೇಗ ವಾಪಸ್ ಆಗುವಂತೆ ಕೇಳಿಕೊಳ್ಳುತ್ತಿದ್ದಾರೆ. ಸೂರ್ಯ ಕೊನೆಯದಾಗಿ ಸೂರರೈ ಪೊಟ್ರು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿದೆ. ಒಟಿಟಿಯಲ್ಲಿ ರಿಲೀಸ್ ಆಗಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ಆಸ್ಕರ್ ರೇಸ್ ನಲ್ಲಿ ಜಾಗ ಪಡೆದಿದೆ.
ಇತ್ತೀಚಿಗಷ್ಟೆ ಸೂರ್ಯ ನಟನೆಯ 40ನೇ ಸಿನಿಮಾ ಅನೌನ್ಸ್ ಆಗಿದ್ದು, ಪಾಂಡಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸೂರ್ಯಗೆ ನಾಯಕಿಯಾಗಿ ಪ್ರಿಯಾಂಕಾ ಮೋಹನ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧರಾಗಿದ್ದ ಸೂರ್ಯಗೆ ಈಗ ಕೊರೊನಾ ಸೋಂಕು ತಗುಲಿರುವುದರಿಂದ ಚಿತ್ರೀಕರಣ ಇನ್ನಷ್ಟು ತಡವಾಗುವ ಸಾಧ್ಯತೆ ಇದೆ.
This News Article is a Copy of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm