ಬ್ರೇಕಿಂಗ್ ನ್ಯೂಸ್
19-02-21 04:46 pm Source: FILMIBEAT ಸಿನಿಮಾ
ಕಾಲಿವುಡ್ ನ ದಳಪತಿ ವಿಜಯ್ ಸದ್ಯ ಮಾಸ್ಟರ್ ಸಿನಿಮಾದ ಯಶಸ್ಸಿನ ಸಂತಸದಲ್ಲಿದ್ದಾರೆ. ಮಾಸ್ಟರ್ ಬಳಿಕ ವಿಜಯ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿತ್ತು. ಆದರೆ ವಿಜಯ್ 65ನೇ ಚಿತ್ರಕ್ಕೆ ನೆಲ್ಸನ್ ದಿಲೀಪ್ ಕುಮಾರ್ ಆಕ್ಷನ್ ಕಟ್ ಹೇಳುತ್ತಾರೆ ಎಂದು ಅನೌನ್ಸ್ ಮಾಡುವ ಮೂಲಕ ಕುತೂಹಲಕ್ಕೆ ತೆರೆ ಎಳೆಯಲಾಗಿದೆ. ದಳಪತಿ 65 ಎಂದು ಕರೆಯುವ ವಿಜಯ್ ಮುಂದಿನ ಸಿನಿಮಾಗೆ ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಆದರೆ ಈಗಾಗಲೇ ಈ ಸಿನಿಮಾದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದೆ. ಇದೀಗ ಮತ್ತೊಂದು ವಿಚಾರ ವೈರಲ್ ಆಗಿದೆ. ನಟ ವಿಜಯ್ ಸಿನಿಮಾದಲ್ಲಿ ಬಾಲಿವುಡ್ ನ ಖ್ಯಾತ ನಟ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಹೌದು, ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿಜಯ್ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿದೆ. ನವಾಜುದ್ದೀನ್, ವಿಜಯ್ ಎದುರು ವಿಲನ್ ಆಗಿ ಅಬ್ಬರಿಸಲಿದ್ದಾರೆ. ಮೂಲಗಳ ಪ್ರಕಾರ, ದಳಪತಿ 65 ಸಿನಿಮಾದಲ್ಲಿ ವಿಲನ್ ಪಾತ್ರ ತುಂಬಾ ಪವರ್ ಫುಲ್ ಆಗಿದೆಯಂತೆ. ಹಾಗಾಗಿ ಈ ಪಾತ್ರ ನವಾಜುದ್ದೀನ್ ಮಾಡಿದರೆ ಸೂಕ್ತ ಎನ್ನುವುದು ಚಿತ್ರತಂಡದ ನಿರ್ಧಾರ. ಇದರಿಂದ ಸಿನಿಮಾತಂಡ ಅವರನ್ನು ತಮಿಳಿಗೆ ಕರೆತರುವ ಪ್ಲಾನ್ ಮಾಡಿದೆ ಎನ್ನಲಾಗಿದೆ.
ಈಗಾಗಲೇ ಸಿನಿಮಾತಂಡ ನವಾಜುದ್ದೀನ್ ಜೊತೆ ಮಾತುಕತೆ ನಡೆಸಿದ್ದು, ಗ್ರೀನ್ ಸಿಗ್ನಲ್ ಗಾಗಿ ಕಾಯುತ್ತಿದೆಯಂತೆ. ಎಲ್ಲವೂ ಅಂದುಕೊಂಡಂತೆ ಆದರೆ ವಿಜಯ್ ಎದುರು ನವಾಜುದ್ದೀನ್ ನಟಿಸುವುದು ಕನ್ಫರ್ಮ್. ಇಬ್ಬರನ್ನು ಒಟ್ಟಿಗೆ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.
ನವಾಜುದ್ದೀನ್ ಸಿದ್ದಿಕಿ ಸದ್ಯ ಬಾಲಿವುಡ್ ನ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆಯೂ ಡೇಟ್ ಹೊಂದಾಣಿಕೆ ಮಾಡಿಕೊಂಡು ವಿಜಯ್ ಎದುರು ತೊಡೆತಟ್ಟಿ ನಿಲ್ಲಲಿದ್ದಾರಾ ಎಂದು ಕಾದು ನೋಡಬೇಕು. ಅಂದಹಾಗೆ ವಿಜಯ್ ಸಿನಿಮಾ ಜೂನ್ ತಿಂಗಳಿಂದ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ. ಚಿತ್ರಕ್ಕೆ ಸನ್ ಪಿಕ್ಟರ್ಸ್ ಬಂಡವಾಳ ಹೂಡುತ್ತಿದೆ. ವಿಜಯ್ ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
This News Article is a Copy of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm