ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ

07-03-21 02:56 pm       Source: FILMIBEAT   ಸಿನಿಮಾ

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಿಸಿ ಜೋರಾಗಿದ್ದು, ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅಖಾಡಕ್ಕೆ ಧುಮುಕಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಿಸಿ ಜೋರಾಗಿದ್ದು, ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅಖಾಡಕ್ಕೆ ಧುಮುಕಿದ್ದಾರೆ. ಹಿರಿಯ ನಟ ಮಿಥುನ್ ಚಕ್ರವರ್ತಿ ಮತ್ತು ಸೌರವ್ ಗಂಗೂಲಿ ಬಿಜೆಪಿ ಪಕ್ಷ ಸೇರಲಿದ್ದಾರೆ ಎಂದು ಹೇಳಲಾಗಿತ್ತು.

ಇದೀಗ, ಮಿಥುನ್ ಚಕ್ರವರ್ತಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಭಾನುವಾರ ಮಧ್ಯಾಹ್ನ ಕೊಲ್ಕತ್ತಾದಲ್ಲಿ ಬೃಹತ್ ಚುನಾವಣೆ ಜಾಥಾ ಆಯೋಜನೆಯಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದಕ್ಕೂ ಮುಂಚೆ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಈ ಹಿಂದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರು ನಟ ಮಿಥುನ್ ಅವಕ್ರವರ್ತಿ ಅವರನ್ನು ಬೆಲ್ಗಾಚಿಯಾದ ನಿವಾಸದಲ್ಲಿ ಭೇಟಿಯಾಗಿದ್ದರು. ಮಿಥುನ್ ಬಿಜೆಪಿ ಸೇರಲಿದ್ದಾರೆ ಎಂದು ಸುಳಿವು ನೀಡಿದ್ದರು.

ಈ ಹಿಂದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಾರಥ್ಯದಲ್ಲಿ ಮಿಥುನ್ ಚಕ್ರವರ್ತಿ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ್ದರು. 2014ರಲ್ಲಿ ರಾಜ್ಯಸಭೆ ಸದಸ್ಯರಾಗಿ ಮಿಥುನ್ ನಾಮನಿರ್ದೇಶನಗೊಂಡಿದ್ದರು. ನಂತರ ರಾಜಕೀಯದಿಂದ ಹಿಂದೆ ಸರಿದ ಕಾರಣ ಮಿಥುನ್ ಚಕ್ರವರ್ತಿ 2016 ರಲ್ಲಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮಾರ್ಚ್ 27 ರಂದು ಪಶ್ಚಿಮ ಬಂಗಾಳದಲ್ಲಿ 294 ಸ್ಥಾನಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮೇ 2 ರಂದು ಚುನಾವಣಾ ಫಲಿತಾಂಶ ಹೊರಬರಲಿದೆ. ಈ ಚುನಾವಣೆಯಲ್ಲಿ ಮಿಥುನ್ ಚಕ್ರವರ್ತಿ ಸಹ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

This News Article Is A Copy Of FILMIBEAT