ಬ್ರೇಕಿಂಗ್ ನ್ಯೂಸ್
12-03-21 11:39 am Source: FILMIBEAT ಸಿನಿಮಾ
ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾದ ಶೀರ್ಷಿಕೆ ಮತ್ತು ಮೊದಲ ನೋಟ ಬಿಡುಗಡೆಯಾಗಿದೆ. ಬಹುನಿರೀಕ್ಷೆಯ ಸಿನಿಮಾಗೆ 'ಹರಿ ಹರ ವೀರ ಮಲ್ಲು' ಎಂದು ಹೆಸರಿಡಲಾಗಿದೆ. ಶಿವರಾತ್ರಿ ಹಬ್ಬದ ವಿಶೇಷವಾಗಿ ಸಿನಿಮಾತಂಡ ಚಿತ್ರದ ಶೀರ್ಷಿಕೆ ಬಿಡುಗೆ ಮತ್ತು ಮೊದಲ ನೋಟ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದ್ದಾರೆ.
ನಿರ್ದೇಶಕ ಕ್ರಿಶ್ ಮತ್ತು ಪವನ್ ಕಲ್ಯಾಣ್ ಪ್ಯಾನ್ ಇಂಡಿಯಾ ಸಿನಿಮಾ ಕಳೆದ ವರ್ಷದಿಂದ ಸಿಕ್ಕಾಪಟ್ಟೆ ಸದ್ದು ಮಾಡುತ್ತಿತ್ತು. ಆದರೆ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡದೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದರು. ಇದೀಗ ಹರಿ ಹರ ವೀರ ಮಲ್ಲು ಆಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಪವನ್ ಕಲ್ಯಾಣ್ ಪ್ಯಾನ್
ಇಂಡಿಯಾ ಸಿನಿಮಾಗೆ ನಾಯಕಿ ಫಿಕ್ಸ್: ಯಾರದು? ಹರಿ ಹರ ಮಲ್ಲು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ತಿಂಗಳ ಮೇಲಾಗಿದೆ. ಇತ್ತೀಚಿಗಷ್ಟೆ ಪವನ್ ಕಲ್ಯಾಣ್ ಚಿತ್ರೀಕರಣ ಸೆಟ್ ನಿಂದ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. 17ನೇ ಶತಮಾನದ ವಾಸ್ತುಶಿಲ್ಪ ಹೋಲುವ ಸೆಟ್ ಗಳನ್ನು ನಿರ್ಮಿಸಲಾಗಿದ್ದು, ಚಿತ್ರೀಕರಣ ಮಾಡಲಾಗುತ್ತಿದೆ.
ಈ ಐತಿಹಾಸಿಕ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ. ಚಿತ್ರದಲ್ಲಿ ಪವನ್ ಕಲ್ಯಾಣ್ ಗೆ ನಾಯಕಿಯಾಗಿ ನಿಧಿ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸ್ವತಃ ನಿಧಿ ಅಗರ್ವಾಲ್ ಬಹಿರಂಗ ಪಡಿಸಿದ್ದರು. 'ನಾನು ಪವನ್ ಕಲ್ಯಾಣ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ನನ್ನ ಕನಸು ನನಸಾಗಿದೆ. ಇದು ನನ್ನ 9ನೇ ಸಿನಿಮಾ. ಇದನ್ನ ನಾನು ಗೋಲ್ಡನ್ ಸಿನಿಮಾವಾಗಿ ನೋಡುತ್ತೇನೆ' ಎಂದು ಹೇಳುವ ಮೂಲಕ ಪವನ್ ಕಲ್ಯಾಣ್ ಜೊತೆ ನಟಿಸುತ್ತಿರುವ ಮಾಹಿತಿ ಬಿಚ್ಚಿಟ್ಟಿದ್ದರು.
ಸದ್ಯ 40ರಷ್ಟು ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಜುಲೈನಲ್ಲಿ ಚಿತ್ರೀಕರಣ ಮುಗಿಸುವ ನಿರ್ಧಾರ ಮಾಡಿದ್ದಾರೆ. ಇನ್ನು ಚಿತ್ರದ ವಿ ಎಫ್ ಎಕ್ಸ್ ಕೆಲಗಳು ಜಾಸ್ತಿ ಇರುವ ಕಾರಣ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ಹಾಲಿವುಡ್ ನ ಖ್ಯಾತ ಗ್ರಾಫಿಕ್ಸ್ ಡಿಸೈನರ್ಸ್ ಹರಿ ಹರ ಮಲ್ಲು ಸಿನಿಮಾಗೆ ಗ್ರಾಫಿಕ್ಸ್ ಕೆಲಸ ಮಾಡುತ್ತಿದ್ದಾರೆ.
This News Article Is A Copy Of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm