ಬ್ರೇಕಿಂಗ್ ನ್ಯೂಸ್
31-03-21 12:02 pm Source: FILMIBEAT Shruthi Gk ಸಿನಿಮಾ
ಸ್ಟಾರ್ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುವುದರಲ್ಲಿ ನಿರ್ಮಾಪಕ ಮತ್ತು ನಿರ್ದೇಶಕ ಕರಣ್ ಜೋಹರ್ ಎತ್ತಿದ ಕೈ. ಈಗಾಗಲೇ ಸಾಕಷ್ಟು ಸ್ಟಾರ್ ಕಿಡ್‌ಗಳನ್ನು ಬಣ್ಣದ ಲೋಕಕ್ಕೆ ಎಂಟ್ರಿ ಕೊಡಿಸಿರುವ ಕರಣ್ ಇದೀಗ ಸೈಫ್ ಅಲಿ ಖಾನ್ ಪುತ್ರನನ್ನು ಬಾಲಿವುಡ್‌ಗೆ ಕರೆತರುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಸಹ ಇದೇ ಕರಣ್ ಜೋಹರ್. ಅಂದಹಾಗೆ ಸೈಫ್ ಪುತ್ರ ಇಬ್ರಾಹಿಂ ಅಲಿ ಖಾನ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿರುವುದು ನಾಯಕನಾಗಿ ಅಲ್ಲ, ಬದಲಿಗೆ ಸಹಾಯಕ ನಿರ್ದೇಶಕನಾಗಿ. ಬಹುತೇಕರು ನಾಯಕನಾಗಿ ಮಿಂಚಬೇಕು, ಬೆಳ್ಳಿ ಪರದೆ ಮೇಲೆ ರಾರಾಜಿಸಬೇಕು ಎನ್ನುವ ಕನಸು ಕಂಡಿರುತ್ತಾರೆ. ಆದರೆ ಸೈಫ್ ಪುತ್ರ ನಿರ್ದೇಶಕನಾಗುವ ಕನಸನ್ನು ಹೊತ್ತು ಚಿತ್ರರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.
ಕರಣ್ ಜೋಹರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಇಬ್ರಾಹಿಂ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಲಿದ್ದಾರೆ. ಅಂದಹಾಗೆ ಕರಣ್ ಮುಂದಿನ ಸಿನಿಮಾ ರಣ್ವೀರ್ ಸಿಂಗ್ ಮತ್ತು ಅಲಿಯಾ ಭಟ್

ಗಲ್ಲಿಬಾಯ್ ಸಿನಿಮಾ ಬಳಿಕ ಅಲಿಯಾ ಮತ್ತು ರಣ್ವೀರ್ ಎರಡನೇ ಬಾರಿ ಒಂದಾಗುತ್ತಿದ್ದಾರೆ. ಗಲ್ಲಿಬಾಯ್ ಸೂಪರ್ ಹಿಟ್ ಆದ ಬಳಿಕ ಈ ಜೋಡಿಯನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳ ಆಸೆಯಂತೆ ಅಲಿಯಾ ಮತ್ತು ರಣ್ವೀರ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕರಣ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಇನ್ನೂ ಹೆಸರಿಡದ ಈ ಚಿತ್ರ ರೊಮ್ಯಾಂಟಿಕ್ ಥ್ರಿಲ್ಲರ್ ಆಗಿದೆಯಂತೆ. ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಕರಣ್ ಮತ್ತು ತಂಡ ಜೂನ್ ಅಥವ ಜುಲೈನಲ್ಲಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ.
ಅದಕ್ಕೂ ಮೊದಲು ವರ್ಕ್ ಶಾಪ್ ಆಯೋಜಿಸಲಿದ್ದು, ರಣ್ವೀರ್ ಮತ್ತು ಅಲಿಯಾ ಜೊತೆಗೆ ಇಬ್ರಾಹಿಂ ಕೂಡ ಭಾಗಿಯಾಗುತ್ತಿದ್ದಾರೆ. ಅಲಿಯಾ ಮತ್ತು ರಣ್ವೀರ್ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುವ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸುತ್ತಾರಾ ಎಂದು ಕಾಯುನೋಡಬೇಕು.
This News Article Is A Copy Of FILMIBEAT
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm