ಬ್ರೇಕಿಂಗ್ ನ್ಯೂಸ್
01-04-21 01:40 pm Source: FILMIBEAT Shruthi Gk ಸಿನಿಮಾ
ಬಾಲಿವುಡ್‌ನ ಖ್ಯಾತ ನಟಿ ಮತ್ತು ಗಾಯಕಿ ಹಾಗೂ ರಾಜಕಾರಣಿ ಕಿರಣ್ ಖೇರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಚಂಡೀಗಢದ ಸಂಸದೆಯಾಗಿರುವ ಕಿರಣ್ ಖೇರ್ ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಸದ್ಯ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಚಂಡೀಗಢದ ಬಿಜೆಪಿ ಅಧ್ಯಕ್ಷ ಅರುಣ್ ಸೂದ್ ಬಹಿರಂಗ ಪಡಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅರುಣ್ ಸೂದ್, ಕಳೆದ ವರ್ಷದಿಂದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಿರಣ್ ಖೇರ್ ಕಳೆದ ವರ್ಷ ನವೆಂಬರ್‌ನಲ್ಲಿ ತನ್ನ ಚಂಡೀಗಢ್ ನಿವಾಸದಲ್ಲಿ ಎಡಗೈಗೆ ಗಾಯ ಮಾಡಿದ್ದ ಕಿರಣ್ ಖೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಸಮಯದಲ್ಲಿ ಕಿರಣ್ ಖೇರ್ ಅನಾರೋಗ್ಯದಿಂದ ಬಳಲುತ್ತಿದ್ದ ಬಗ್ಗೆ ಬಹಿರಂಗವಾಗಿದೆ. ಬಳಿಕ ಅವರು ಮುಂಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.
ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿರುವ ಕಿರಣ್ ಖೇರ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆಗಾಗ ಕೋಕಿಲಾಬೆನ್ ಆಸ್ಪತ್ರೆಗೆ ಭೇಟಿ ಆರೋಗ್ಯ ತಪಾಸಣೆ ನಡೆಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ನಟಿ ಕಿರಣ್ ಖೇರ್ 2014ರಲ್ಲಿ ಲೋಕಸಭೆಗೆ ಆಯ್ಕೆಯಾಗುವ ಮೂಲಕ ರಾಜಕೀಯದಲ್ಲಿ ಮೊದಲ ಹೆಜ್ಜೆ ಇಟ್ಟಿದ್ದರು. ಮೋದಿ ಅಲೆಯ ಮೇಲೆ ಸವಾರಿ ಮಾಡಿದ ಕಿರಣ್ 2019ರ ಚುನಾವಣೆಯಲ್ಲಿ ಮತ್ತೆ ಗೆದ್ದು ಬೀಗಿದರು. ಕಳೆದ ಒಂದು ವರ್ಷದಿಂದ ಹೆಚ್ಚಾಗಿ ಕಾಣಿಸಿಕೊಳ್ಳದ ಕಿರಣ್ ಖೇರ್ ವಿರುದ್ಧ ಕಾಂಗ್ರೆಸ್ ಭಾರಿ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಚಂಡೀಗಢ್ ಬಿಜೆಪಿ ಅನಾರೋಗ್ಯದ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದಾರೆ. 68 ವರ್ಷದ ನಟಿ ಮತ್ತು ರಾಜಕಾರಣಿ ಕಿರಣ್ ಖೇರ್ ಸದ್ಯ ಎರಡನೇ ಪತಿ ಅನುಪಮ್ ಖೇರ್ ಜೊತೆ ವಾಸುತ್ತಿದ್ದಾರೆ. ಅನುಪಮ್ ಖೇರ್ ಬಾಲಿವುಡ್‌ನ ಖ್ಯಾತ ನಟ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಹಿಂದಿ ಮತ್ತು ಪಂಜಾಬಿ ಭಾಷೆಯಲ್ಲಿ ನಟಿಸಿರುವ ಕಿರಣ್ ಖೇರ್ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಬಳಿಕ ಸಿನಿಮಾದಲ್ಲಿ ಕಾಣಿಸಿಕೊಂಡಿಲ್ಲ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm