ಬ್ರೇಕಿಂಗ್ ನ್ಯೂಸ್
05-04-21 12:26 pm source: FILMIBEAT ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್‌ಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಮರುದಿನ 'ರಾಮ್ ಸೇತು' ಚಿತ್ರದ 45 ಸಿಬ್ಬಂದಿಗೆ ಸೋಂಕು ತಗುಲಿರುವುದು ಬಹಿರಂಗವಾಗಿದೆ. ಸೋಮವಾರ ಮುಂಬೈನಲ್ಲಿ 'ರಾಮ್ ಸೇತು' ಚಿತ್ರೀಕರಣ ನಿಗದಿಯಾಗಿತ್ತು. ಅದಕ್ಕೂ ಮುಂಚೆ ಕಡ್ಡಾಯವಾಗಿ ಚಿತ್ರದ ಎಲ್ಲಾ ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 45 ಜನರಿಗೆ ಸೋಂಕು ತಗುಲಿರುವುದು ತಿಳಿದು ಬಂದಿದೆ.
ವರದಿಗಳ ಪ್ರಕಾರ, 100 ಜನರನ್ನು ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 45 ಸಿಬ್ಬಂದಿಗೆ ಸೋಂಕು ಅಂಟಿಕೊಂಡಿದೆ. ಈ ಹಿನ್ನೆಲೆ ಮುಂಬೈನಲ್ಲಿ ನಡೆಯಬೇಕಿದ್ದ ಶೂಟಿಂಗ್ ರದ್ದುಗೊಳಿಸಲಾಗಿದೆ.
ಅಕ್ಷಯ್ ಕುಮಾರ್ ಅವರಿಗೆ ಸೋಂಕು ತಗುಲಿದ ನಂತರ ನಿರ್ಮಾಪಕ ವಿಕ್ರಮ್ ಮಲ್ಹೋತ್ರಾ ಚಿತ್ರೀಕರಣ ಮುಂದುವರಿಸಲು ತೀರ್ಮಾನಿಸಿದರು. ಹಾಗಾಗಿ, ಎಲ್ಲಾ ಸಿಬ್ಬಂದಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಿದರು. ಈ ವೇಳೆ ಸಿಬ್ಬಂದಿಗಳಿಗೂ ಕೊವಿಡ್ ತಗುಲಿರುವುದು ಬಹಿರಂಗವಾಗಿದೆ. ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು.
ಮಾರ್ಚ್ 30 ರಿಂದ ಮುಂಬೈನಲ್ಲಿ ಶೂಟಿಂಗ್ ಪ್ರಾರಂಭವಾಗಿತ್ತು. ಇದೀಗ, ಕೊರೊನಾ ಕಾರಣದಿಂದ ಚಿತ್ರೀಕರಣ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ರಾಮ್ ಸೇತು ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಪುರಾತತ್ವ ಶಾಸ್ತ್ರಜ್ಞ ಪಾತ್ರ ನಿರ್ವಹಿಸುತ್ತಿದ್ದಾರೆ. ಜಾಕ್ವಲಿನ್ ಫರ್ನಾಂಡೀಸ್ ಮತ್ತು ನುಸ್ರುತ್ ಭರುಚ್ಚಾ ಚಿತ್ರದ ನಾಯಕಿಯಾಗಿದ್ದಾರೆ. ಅಭಿಷೇಕ್ ಶರ್ಮಾ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಅರುಣಾ ಭಾಟಿಯಾ, ವಿಕ್ರಮ್ ಮಲ್ಹೋತ್ರಾ ಜೊತೆ ಸೇರಿ ಲೈಕಾ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

ಇನ್ನು ಹಲವು ಸೆಲೆಬ್ರಿಟಿಗಳು ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ. ಅಕ್ಷಯ್ ಕುಮಾರ್‌ಗೂ ಮೊದಲು ಆಲಿಯಾ ಭಟ್, ಫಾತಿಮಾ ಸನಾ ಶೇಖ್, ಪರೇಶ್ ರಾವಲ್, ಕಾರ್ತಿಕ್ ಆರ್ಯನ್, ರಣ್ಬೀರ್ ಕಪೂರ್, ರೋಹಿತ್ ಸರಾಫ್ ಕೊರೊನಾ ಸೋಂಕಿಗೂ ಒಳಗಾಗಿದ್ದರು. ಈ ಕಡೆ ದಕ್ಷಿಣದಲ್ಲಿ ಕನ್ನಡ ನಟ ಪ್ರಜ್ವಲ್ ದೇವರಾಜ್ ಮತ್ತು ಪತ್ನಿ ರಾಗಿಣಿಗೆ, ತಮಿಳು ನಟಿ ನಿವೇತಾ ಥಾಮಸ್, ತೆಲುಗಿನ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್‌ಗೂ ಸೋಂಕು ತಗುಲಿದೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm