ಬ್ರೇಕಿಂಗ್ ನ್ಯೂಸ್
09-04-21 03:42 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಪಾಸಿಟಿವ್ ವರದಿ ಬಂದ ಕಾರಣ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವರ್ಷ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತ ಸಂಭವಿಸಿದ್ದು, ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಘಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಸುದ್ದಿ ಜನ್ಯ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಶಾಕ್ ನೀಡಿತ್ತು. ಬಳಿಕ ಚೇತರಿಸಿಕೊಂಡು ಮತ್ತೆ ಕೆಲಸಕ್ಕೆ ಹಾಜರಾಗಿದ್ದರು.
ಸಂಗೀತ ಕೆಲಸಗಳ ಜೊತೆಗೆ ಕಿರುತೆರೆಯಲ್ಲೂ ಬ್ಯುಸಿ ಇರುವ ಅರ್ಜುನ್ ಜನ್ಯ ಸದ್ಯ ಡಾನ್ಸ್ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾದ ಜೊತೆ ಮಾತನಾಡಿದ ಅರ್ಜುನ್ ಜನ್ಯ, 'ತಡವಾಗಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿತು. ನಂತರ ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾನು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದೇನೆ' ಎಂದಿದ್ದಾರೆ.

ಸುರಕ್ಷತಾ ಪ್ರೋಟೋಕಾಲ್ ಅನುಸರಿಸಿದ್ದೇವೆ, ತುಂಬಾ ಜಾಗರೂಕರಾಗಿ ಇದ್ದರೂ ಸಹ ಹೇಗೆ ಕೊರೊನಾ ವೈರಸ್ ಬಂದಿದೆ ಎನ್ನುವುದು ಖಚಿತವಿಲ್ಲ ಎಂದಿದ್ದಾರೆ. ಶೀಘ್ರದಲ್ಲೇ ಚೇತರಿಸಿಕೊಂಡು ಮನೆಗೆ ಮರಳುತ್ತೇನೆ. ವೈದ್ಯರ ಸಲಹೆ ಮೇರೆಗೆ ಮತ್ತೆ ಕೆಲಸಕ್ಕೆ ತೆರಳುವುದಾಗಿ ಹೇಳಿದ್ದಾರೆ.
ಕನ್ನಡ ಚಿತ್ರರಂಗದ ಬಹು ಬೇಡಿಕೆಯ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿರುವ ಅರ್ಜುನ್ ಜನ್ಯ ಸಾಕಷ್ಟು ಹಿಟ್ ಸಿನಿಮಾಗಳಿಗೆ ಹಿಟ್ ಹಾಡುಗಳನ್ನು ನೀಡಿದ್ದಾರೆ. ಇತ್ತೀಚಿಗೆ ರಿಲೀಸ್ ಆದ ದರ್ಶನ್ ನಟನೆಯ ಸೂಪರ್ ಹಿಟ್ ರಾಬರ್ಟ್ ಸಿನಿಮಾಗೂ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm