ಬ್ರೇಕಿಂಗ್ ನ್ಯೂಸ್
16-04-21 02:35 pm Headline Karnataka News Network ಸಿನಿಮಾ
ಬೆಂಗಳೂರು, ಎ.17: ಡ್ರಗ್ಸ್ ನಂಟಿನಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರು ಅನ್ನೋ ಗುಲ್ಲು ಹಬ್ಬಿತ್ತು. ನಿಶ್ಚಿತಾರ್ಥ ಆಗಿರುವ ಫೋಟೊ ಕೂಡ ವೈರಲ್ ಆಗಿತ್ತಲ್ಲದೆ, ಈ ನಡುವೆ ಮದುವೆಗಾಗಿ ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಇದೀಗ ಜೈಲಿನಿಂದ ಹೊರಬಂದಿರುವ ಸಂಜನಾ ತಾನು ಮತಾಂತರ ಆಗಿರುವುದನ್ನು ಸ್ವತಃ ಹೇಳಿಕೊಂಡಿದ್ದಾರೆ. ಅಲ್ಲದೆ, ಖುರಾನ್ ಕಲಿತು ನಮಾಜ್ ಓದಲು ಕಲಿಯುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.
ಸ್ಟಾರ್ ಸುವರ್ಣ ವಾಹಿನಿಯಲ್ಲಿನ 'ಯುಗಾದಿ ಸಂಭ್ರಮ' ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಜನಾ ಗಲ್ರಾನಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ಆಧ್ಯಾತ್ಮದತ್ತ ವಾಲುತ್ತಿದ್ದೇನೆ. ಕೆಲ ತಿಂಗಳುಗಳಿಂದ ನಮಾಜ್ ಓದುವುದನ್ನು ರೂಢಿ ಮಾಡಿಕೊಳ್ಳುತ್ತಿದ್ದೇನೆ. ಕರ್ಮ, ದೇವರಲ್ಲಿ ನನಗೆ ನಂಬಿಕೆ ಇಟ್ಟಿದ್ದೇನೆ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗೋದು ನನ್ನ ವೈಯಕ್ತಿಕ ಆಯ್ಕೆಯಾಗಿತ್ತು. ಆ ಜೀವನದಿಂದ ನಾನು ಆಕರ್ಷಿತಳಾಗಿದ್ದೇನೆ. ನನ್ನ ನಿರ್ಧಾರ ರಾಜಕೀಯ ಪ್ರೇರಿತ ಅಲ್ಲ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.
ಫಿಟ್‌ನೆಸ್ ಪ್ಲಾನಿಂಗ್ ಬಗ್ಗೆ ಹೇಳಿಕೊಂಡ ಅವರು, ಈ ತಿಂಗಳು ನನ್ನ ನಿದ್ದೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಕೆಲಸ, ದಿನಚರಿಯಲ್ಲಿ ಬದಲಾವಣೆ ಆಗಬೇಕು. ಉಪವಾಸ ಮಾಡುತ್ತಿದ್ದೇನೆ. ನಾನು ಮತ್ತೆ ಫಿಟ್‌ನೆಸ್ ಬೆಳೆಸಿಕೊಳ್ಳಬೇಕು, ಸಂಜೆ ವರ್ಕೌಟ್ ಆರಂಭಿಸುತ್ತೇನೆ. ರಾತ್ರಿ 9 ಗಂಟೆಗೆ ಉಪವಾಸ ಮುಗಿಸುತ್ತೇನೆ. ರಮ್ಜಾನ್ ಉಪವಾಸವನ್ನು ಚೆನ್ನಾಗಿಯೇ ಮಾಡುತ್ತೇನೆ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.
It was my own choice for conversion to Islam says sandalwood actor aanjana galrani who was arrested in drugs case in Bangalore.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm