ಬ್ರೇಕಿಂಗ್ ನ್ಯೂಸ್
28-04-21 11:16 am Headline Karnataka News Network ಸಿನಿಮಾ
ಬೆಂಗಳೂರು, ಎ.28: ಸ್ಯಾಂಡಲ್ ವುಡ್ ನಟ ಕೋಮಲ್ ಗೆ ಕೊರೋನಾ ಸೋಂಕು ತಗುಲಿದೆ. ಅವರಿಗೆ ಕೃತಕ ಆಮ್ಲಜನಕ ವ್ಯವಸ್ಥೆ ಮಾಡಲಾಗಿದ್ದು ತಮ್ಮನನ್ನು ಉಳಿಸಿಕೊಡಿ ಎಂದು ನವರಸ ನಾಯಕ ಜಗ್ಗೇಶ್ ಮಂತ್ರಾಲಯದ ರಾಯರ ಪಾದಕ್ಕೆ ಶರಣಾಗಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಹೇಳಿಕೊಂಡಿರುವ ನಟ ಜಗ್ಗೇಶ್ "ತಮ್ಮನಿಗೆ ಕೊರೊನಾ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ! ದೇವರಿಗೆ ಗೊತ್ತು , ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ ! ಅವನಿಗೆ ಸಹಾಯ ಮಾಡಿದ ಡಾ.ಮಧುಮತಿ, ನಾದಿನಿ ಡಾ. ಲಲಿತ, ನರ್ಸ್ ಗಳ ಪಾದಕ್ಕೆ ನನ್ನ ನಮನ ಎಂದಿದ್ದಾರೆ.

ಅಲ್ಲದೆ ನಾನು ಇಷ್ಟು ದಿನ ಮುಚ್ಚಿಟ್ಟು ಪಡುತ್ತಿದ್ದ ಯಾತನೆ ರಾಯರಿಗೆ ಮಾತ್ರ ಗೊತ್ತು!ಭಕ್ತನ ಗುರುಗಳ ನಡುವೆ ನಡೆದಿತ್ತು ಭಾವನಾತ್ಮಕ ಭಕ್ತಿಯ ಬೇಡಿಕೆ! ಅದು ಒಂದೇ ರಾಯರೇ ನಾನು ಕಾಯಾವಾಚಾ ಮನಸಾ ಸತ್ಯವಾಗಿ ನಡೆದುಕೊಂಡಿದ್ದರೆ, ಹೃದಯದಿಂದ ಒಳ್ಳೆಯತನ ಅನುಸರಿಸಿದ್ದರೆ, ಮನುಷ್ಯ ಪಕ್ಷಿ ಪ್ರಾಣಿಯ ಆತ್ಮದಲ್ಲಿ ಸಮಾನವಾಗಿ ದೇವರಿದ್ದಾನೆ ಎಂದು ನಂಬಿದ್ದರೆ, ಯಾರಿಗೂ ಕೇಡು ಬಯಸದೆ ಮೋಸ ವಂಚನೆ ಅನ್ಯಾಯ ಮಾರ್ಗದಲ್ಲಿ ನಡೆದು ನೊಂದವರಿಗೆ ನಂಬಿದವರಿಗು ಭುಜಕೊಟ್ಟು ಬದುಕಿದ್ದರೆ, ನನ್ನ ತಂದೆ ತಾಯಿಯನ್ನು ನೋಯಿಸದೆ ಉತ್ತಮ ಮಗನಂತೆ ಸಂತೈಸಿದ್ದರೆ, ಅನ್ನಕೊಟ್ಟ ಶಾರದೆ ಸೇವೆ ನಿಷ್ಟೆಯಿಂದ ಮಾಡಿದ್ದರೆ, ಕಾಯಕ ಮಾಡುವ ಎಲ್ಲಾ ಕ್ಷೇತ್ರದಲ್ಲೂ ಪ್ರಾಮಾಣಿಕನಾಗಿದ್ದರೆ, ರಾಯರು ನನ್ನ ಹೃದಯಲ್ಲಿದ್ದರೆ ಸಾವಿನ ಮನೆ ಕದ ತಟ್ಟುತ್ತಿರುವ ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು! ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದು ಬಂದು ಪಕ್ಕ ನಿಂತು ಅವನ ಉಳಿಸಿಬಿಟ್ಟರು ! komal is safe..

ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು ಸ್ವಂತ ವ್ಯವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ! ಆದರೆ ಇತ್ತೀಚೆಗೆ ತನಗೆ ಬರಬೇಕಾದ billಗೆ ಅಲ್ಲಿನ ಕೆಲ ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು! ಅದನ್ನು ಪಡೆಯಲು ದಿನ ಓಡಾಡುತ್ತಿದ್ದ ತಮ್ಮನಿಗೆ ಕೊರೋನ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ! ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ!" ಎಂದಿದ್ದಾರೆ.
ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು!ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದುಬಂದು ಪಕ್ಕನಿಂತು ಅವನ ಉಳಿಸಿಬಿಟ್ಟರು!komal is safe🙏ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು
— ನವರಸನಾಯಕ ಜಗ್ಗೇಶ್ (@Jaggesh2) April 27, 2021
ಸ್ವಂತ ವ್ಯೆವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ!ಆದರೆ ಇತ್ತೀಚೆಗೆ ತನಗೆ ಬರಬೇಕಾದ bill
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm