ಬ್ರೇಕಿಂಗ್ ನ್ಯೂಸ್
03-05-21 02:47 pm Source: FILMIBEAT Shruthi Gk ಸಿನಿಮಾ
ಕೊರೊನಾ ಸೋಂಕಿತರು ಆಕ್ಸಿಜನ್, ಆಸ್ಪತ್ರೆ, ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಸಾವಿರಾರು ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯು ಹೆಚ್ಚಾಗುತ್ತಿದ್ದೆ. ಕೊರೊನಾ ಭೀಕರ ಸ್ಥಿತಿಗೆ ಇಡೀ ದೇಶ ನಲುಗಿ ಹೋಗಿದೆ.
ಈ ಸಂಕಷ್ಟದ ಸ್ಥಿತಿಯಲ್ಲಿ ಅನೇಕರು ಮುಂದೆ ಬಂದು ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್ ವ್ಯವಸ್ಥೆ ಮಾಡಿಸುತ್ತಿದ್ದಾರೆ. ಅನೇಕ ಸಿನಿಸೆಲೆಬ್ರಿಟಿಗಳು ಸಹ ಕಷ್ಟದಲ್ಲಿ ಇರೋರಿಗೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಖ್ಯಾತ ನಟ ಹರ್ಷವರ್ಧನ್ ರಾಣೆ ಕೂಡ ಕೋವಿಡ್ ರೋಗಿಗಳ ಸಹಾಯ ನಿಂತಿದ್ದಾರೆ.
ಆಮ್ಲಜನಕ ಕೊರತೆ ನೀಗಿಸಲು ಹರ್ಷವರ್ಧನ್ ತನ್ನ ಪ್ರೀತಿಯ ಬೈಕ್ ಅನ್ನೇ ಮಾರಾಟಕ್ಕೆ ಇಟ್ಟಿದ್ದಾರೆ. ಈ ಬಗ್ಗೆ ಹರ್ಷವರ್ಧನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತನ್ನ ನೆಚ್ಚಿನ ಬೈಕ್ ಫೋಟೋಗಳನ್ನು ಹಂಚಿಕೊಳ್ಳುವ ಜೊತೆಗೆ 'ಆಗತ್ಯ ಇರುವವರಿಗೆ ಆಮ್ಲಜನಕ ಸಾಂದ್ರಕಗಳನ್ನು ಖರೀದಿಸಲು ನನ್ನ ಬೈಕ್ ಮಾರಾಟ ಮಾಡುತ್ತಿದ್ದೇನೆ. ಹೈದರಾಬಾದ್ ನಲ್ಲಿ ಉತ್ತಮ ಆಕ್ಸಿಜನ್ ಸಾಂದ್ರಕ ಎಲ್ಲಿ ಸಿಗುತ್ತೆ ಹೇಳಿ' ಎಂದು ಪೋಸ್ಟ್ ಹಾಕಿದ್ದಾರೆ.

ಸನಮ್ ತೇರಿ ಕಸಮ್ ಸಿನಿಮಾ ಮೂಲಕ ಸಿನಿಪ್ರೇಕ್ಷಕರ ಹೃದಯ ಗೆದ್ದಿರುವ ತೆಲುಗು ನಟ ಹರ್ಷವರ್ಧನ್ ಅವರ ಮಾನವೀಯ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂದಹಾಗೆ ಹರ್ಷವರ್ಧನ್ ಬಳಿ ಉತ್ತಮ ಬೈಕ್ ಮತ್ತು ಕಾರ್ ಕಲೆಕ್ಷನ್ ಗಳಿವೆ. ಹರ್ಷವರ್ಧನ್ ಬೈಕ್ ಕ್ರೇಜ್ ಬಗ್ಗೆ ಅವರ ಅಭಿಮಾನಿಗಳಿಗೆ ಗೊತ್ತಿರುವ ವಿಚಾರ. ಇದೀಗ ಕೊರೊನಾ ರೋಗಿಗಳಿಗೆ ಸಹಾಯ ಮಾಡಲು ತನ್ನ ನೆಚ್ಚಿನ ಬೈಕ್ ಅನ್ನೇ ಮಾರಾಟಕ್ಕೆ ಇಡುವ ಮೂಲಕ ರಿಯಲ್ ಹೀರೋ ಆಗಿದ್ದಾರೆ.
ಸಂಕಷ್ಟ ಸ್ಥಿತಿಯಲ್ಲಿ ಅನೇಕರು ಸಿನಿ ಸೆಲೆಬ್ರಿಟಿಗಳು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ, ಅಕ್ಷಯ್ ಕುಮಾರ್, ಅಜಯ್ ದೇವಗನ್, ಜಾನ್ ಅಬ್ರಹಾಂ, ಸಲ್ಮಾನ್ ಖಾನ್ ಇನ್ನು ಕನ್ನಡದ ನಟರಾದ ಅರ್ಜುನ್ ಗೌಡ, ಭುವನ್ ಪೊನ್ನಣ್ಣ ಸೇರಿದಂತೆ ಅನೇಕ ಸಿನಿತಾರೆಯರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.
This News Article Is A Copy Of FILMIBEAT
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm