ಬ್ರೇಕಿಂಗ್ ನ್ಯೂಸ್
04-06-21 11:46 am Headline Karnataka News Network ಸಿನಿಮಾ
ಬೆಂಗಳೂರು, ಜೂನ್ 4: ಚಂದನವನದ ಒಂದೊಂದೇ ಹಿರಿಯ ಕೊಂಡಿಗಳು ಕಳಚಿಕೊಳ್ಳುತ್ತಿವೆ. ಕೆಲವೇ ದಿನಗಳ ಹಿಂದೆ 'ಶಂಖನಾದ' ಅರವಿಂದ್, ಕೃಷ್ಣೇ ಗೌಡ, ನಿರ್ಮಾಪಕ ರಾಮು ಮುಂತಾದವರು ಕೊನೆಯುಸಿರು ಎಳೆದಿದ್ದಾರೆ. ಇದೀಗ ಖ್ಯಾತ ಹಿರಿಯ ನಟಿ ಬಿ. ಜಯಾ ಅವರು ಕೂಡ ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನರಾಗಿದ್ದಾರೆ. ಅವರು ಒಂದು ತಿಂಗಳ ಹಿಂದೆ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದರು ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ, ಕೊನೆಯುಸಿರೆಳೆದಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.
ಸುಮಾರು 6 ದಶಕಗಳಿಗೂ ಅಧಿಕ ಸಮಯ ಕನ್ನಡ ಚಿತ್ರರಂಗದಲ್ಲಿ ಪೋಷಕ ನಟಿಯಾಗಿ ಜಯಾ ಗುರುತಿಸಿಕೊಂಡಿದ್ದರು. ಅದರಲ್ಲೂ ಮುಖ್ಯವಾಗಿ ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಹಾಸ್ಯನಟಿ ಎಂದು ಜಯಾ ಜನಪ್ರಿಯರಾಗಿದ್ದರು. ಮೂರು ತಲೆಮಾರಿನ ನಟ, ನಟಿಯರೊಂದಿಗೆ ಅಭಿನಯಿಸಿರುವ ಹೆಗ್ಗಳಿಕೆ ಅವರದು. ಹಾಸ್ಯ ದಿಗ್ಗಜರಾದ ನರಸಿಂಹರಾಜು, ದ್ವಾರಕೀಶ್ ಮುಂತಾದವರೊಂದಿಗೆ ಜಯಾ ನಟಿಸಿದ ಹಾಸ್ಯ ದೃಶ್ಯಗಳು ಇಂದಿಗೂ ಜನಪ್ರಿಯ. 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು ರಂಗಭೂಮಿ, ಕಿರುತೆರೆಯಲ್ಲೂ ಅವರು ಬಹಳ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಚಿತ್ರರಂಗ ಮತ್ತು ಸಿನಿಪ್ರಿಯರು ಸಂತಾಪ ಸೂಚಿಸಿದ್ದಾರೆ.

1958ರಲ್ಲಿ ತೆರೆಕಂಡ 'ಭಕ್ತ ಪ್ರಹ್ಲಾದ' ಸಿನಿಮಾ ಜಯಾ ಅವರು ಚೊಚ್ಚಲ ಸಿನಿಮಾ. ಡಾ. ರಾಜ್‌ಕುಮಾರ್ ಅವರ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಕೀರ್ತಿ ಅವರದ್ದು. ಆಗಿನ ಡಾ.ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಸೇರಿದಂತೆ ಈಗಿನ ಯುವ ಪೀಳಿಗೆಯ ನಟರೊಂದಿಗೂ ಜಯಾ ನಟಿಸಿರುವುದು ವಿಶೇಷ.
ಅಂಬರೀಷ್ ನಟನೆಯ 'ಗೌಡ್ರು' ಚಿತ್ರದ ಅಭಿನಯಕ್ಕಾಗಿ ಅವರು ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿಗೆ ಪಾತ್ರವಾಗಿದ್ದರು. 'ದೈವಲೀಲೆ', 'ವಿಧಿ ವಿಲಾಸ', 'ಬೆಳ್ಳಿಮೋಡ', 'ಚಿನ್ನದ ಗೊಂಬೆ', 'ಪ್ರತಿಜ್ಞೆ', 'ಮಹದೇಶ್ವರ ಪೂಜಾಫಲ', 'ನ್ಯಾಯವೇ ದೇವರು', 'ಕುಲಗೌರವ', 'ಪೂರ್ಣಿಮಾ', 'ನಗುವ ಹೂವು', 'ಮುಕ್ತಿ', 'ಮಣ್ಣಿನ ಮಗ', 'ಶ್ರೀಕೃಷ್ಣ ದೇವರಾಯ', 'ಜೀವನ ಜೋಕಾಲಿ', 'ದೇವರು ಕೊಟ್ಟ ತಂಗಿ', 'ಗಂಧದ ಗುಡಿ', 'ಶುಭಮಂಗಳ', 'ದಾರಿ ತಪ್ಪಿದ ಮಗ', 'ಪ್ರೇಮದ ಕಾಣಿಕೆ' ಮುಂತಾದ ಸಿನಿಮಾಗಳಲ್ಲಿ ಜಯಾ ನಟಿಸಿದ್ದರು. 1983ರಲ್ಲಿ ಕುಮಾರೇಶ್ವರ ನಾಟಕ ಸಂಘ ಕಟ್ಟಿದ ಬಿ. ಜಯಾ ಅವರು 1992ರವರೆಗೆ ಕಂಪನಿ ನಡೆಸಿದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm