ಬ್ರೇಕಿಂಗ್ ನ್ಯೂಸ್
14-06-21 12:36 pm Filmbeat : Bharath Kumar K ಸಿನಿಮಾ
ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಭರಿಸುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಷಯ ತಿಳಿದು ಬಂದಿದೆ. ಇಂದು ಬೆಳಗ್ಗೆ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಭರಿಸುತ್ತದೆ ಎಂದು ಭರವಸೆ ನೀಡಿದರು.
ವಿಜಯ್ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.
ಶನಿವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಚಾರಿ ವಿಜಯ್, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ಗಂಭೀರವಾದ ಗಾಯಗಳಾಗಿದ್ದು, ಶನಿವಾರ ರಾತ್ರಿಯೇ ಶಸ್ತ್ರ ಚಿಕಿತ್ಸೆ ಆಗಿದೆ. ಸದ್ಯಕ್ಕೆ ವಿಜಯ್ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಬಂದಾಗಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಆಪರೇಷನ್ ಮುಗಿದ ಮೇಲೂ ಪ್ರಜ್ಞೆ ಬಂದಿಲ್ಲ. ಹಾಗಾಗಿ ಪ್ರಜ್ಞೆ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ ಅರುಣ್ ನಾಯಕ್ ಹೇಳಿದ್ದರು.
(Kannada Copy of Filmbeat Kannada)
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm