ಬ್ರೇಕಿಂಗ್ ನ್ಯೂಸ್
29-06-21 05:36 pm Filmbeat : Bharath Kumar K ಸಿನಿಮಾ
ದಿವಂಗತ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ವಿಶೇಷವಾಗಿ ಗೌರವಿಸಿದೆ.
ಬೈಕ್ ಅಪಘಾತದಲ್ಲಿ ನಿಧನರಾಗಿದ್ದ ಕನ್ನಡ ಚಲನಚಿತ್ರ ನಟ ಸಂಚಾರಿ ವಿಜಯ್ ಸ್ಮರಣಾರ್ಥವಾಗಿ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ತನ್ನ ಥಿಯೇಟರ್ ಬೋರ್ಡ್ ಮೇಲೆ ವಿಜಯ್ ಕುರಿತಾದ ಸಂದೇಶವೊಂದನ್ನು ಪ್ರಕಟಿಸಿದೆ.
24 ಗಂಟೆಗಳ ಕಾಲ ಈ ಸಂದೇಶವನ್ನು ಥಿಯೇಟರ್ ಬೋರ್ಡ್‌ನಲ್ಲಿ ಪ್ರದರ್ಶಿಸಲಾಗಿದೆ. ಈ ಬಗ್ಗೆ 'ನಾನು ಅವನಲ್ಲ ಅವಳು' ಸಿನಿಮಾದ ನಿರ್ದೇಶಕ ಲಿಂಗದೇವರು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

''ಅಮೇರಿಕಾದ ಫ್ರಾಂಕ್ಲಿನ್ ಥಿಯೇಟರ್‌ನವರು ವಿಜಯ್ ನೆನಪಲ್ಲಿ ಇಂದು 'Always in our Heart , Sanchari Vijay, Gone Yet Not Forgotten' ಎಂಬ ಮೆಸೇಜ್ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಕಾರಣಕರ್ತರಾದ ರವಿ ಕಶ್ಯಪ್ ರವರಿಗೆ ವಂದನೆಗಳು'' ಎಂದು ಲಿಂಗದೇವರು ಪೋಸ್ಟ್ ಹಾಕಿದ್ದಾರೆ. ಜೂನ್ 15 ರಂದು ಸಂಚಾರಿ ನಿಧನ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ವಿಜಯ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಮೆದುಳಿನ ಬಲ ಭಾಗ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾಗಿ ಕೊನೆಯುಸಿರೆಳೆದರು.
ಸಾವಿನ ಬಳಿಕವೂ ಸಾರ್ಥಕತೆ ಮೆರೆದ ನಟ ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡಿದರು. ಕಣ್ಣು, ಕಿಡ್ನಿ, ಲಿವರ್, ಹಾರ್ಟ್ ವ್ಯಾಲ್ಸ್ ದಾನ ಮಾಡುವ ಮೂಲಕ ಏಳು ಜನರ ಬದುಕಲ್ಲಿ ಬೆಳಕಾದರು.
ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಇದೇ ಸಿನಿಮಾಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಲಭಿಸಿತ್ತು.
Kannada Copy of Filmbeat Kannada)
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm