ಬ್ರೇಕಿಂಗ್ ನ್ಯೂಸ್
02-07-21 10:55 am Filmbeat : Shruthi K ಸಿನಿಮಾ
ಸ್ಯಾಂಡಲ್ ವುಡ್ ನ ಹಿರಿಯ ನಟ ಜಗ್ಗೇಶ್ ಪುತ್ರ ಯತಿರಾಜ್ ಚಲಾಯಿಸುತ್ತಿದ್ದ ಕಾರು ನಿನ್ನೆ (ಜುಲೈ 1) ಬೆಂಗಳೂರು-ಹೈದರಾಬಾದ್ ಹೆದ್ದಾರಿ ಅಗಲಗುರ್ಕಿ ಬಳಿ ಅಪಘಾತಕ್ಕೆ ಇಡಾಗಿತ್ತು. ಅದೃಷ್ಟವಶಾತ್ ಯತಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎನ್ನುವ ಮಾಹಿತಿ ತಿಳಿದುಬಂದಿದೆ. ಸದ್ಯ ಯತಿರಾಜ್ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ
ಪುತ್ರನ ಆರೋಗ್ಯದ ಬಗ್ಗೆ ಸ್ವತಃ ಜಗ್ಗೇಶ್ ಟ್ವೀಟ್ ಮಾಡಿದ್ದು ಮಗನಿಗೆ ಬಹಳ ಒಳ ಏಟು ಬಿದ್ದಿದೆ ಎಂದು ಹೇಳಿದ್ದಾರೆ. ನಿನ್ನೆ ಅಪಘಾತದ ಬಳಿಕ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಜಗ್ಗೇಶ್ ಅಪಘಾತದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬಳಿಕ ಟ್ವೀಟ್ ಡಿಲೀಟ್ ಮಾಡಿದ್ದರು. ಜಗ್ಗೇಶ್ ಟ್ವೀಟ್ ಡಿಲೀಟ್ ಮಾಡಿದ್ದು ಸಾಕಷ್ಟು ಗೊಂದಲಕ್ಕೆ ಕಾರಣವಾಗಿತ್ತು.
ಬಳಿಕ ಮತ್ತೆ ಟ್ವೀಟ್ ಮಾಡಿ ಜಗ್ಗೇಶ್ ಮಗನ ಆರೋಗ್ಯದ ಬಗ್ಗೆ ಮಾಹಿತಿ ನೀಡುವ ಜೊತೆಗೆ ಟ್ವೀಟ್ ಡಿಲೀಟ್ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.
"ಜೀವನದಲ್ಲಿ ಸಂಸಾರದ ಸರ್ವಸದಸ್ಯರ ಭಾರಹೊತ್ತು, ತನಗಾಗಿ ಏನು ಬಯಸದೆ. ತನ್ನವರಿಗಾಗಿ ಬಂದದ್ದೆಲ್ಲಾ ಸಹಿಸಿ ನೋವುನುಂಗಿ ಹೆಜ್ಜೆ ಹಾಕುವ ಮೌನಯೋಗಿ ಅಪ್ಪ. ಇಂದು ಬಹಳ ನೆನಪಾದ ನನ್ನ ಅಪ್ಪ. ಅವನ ತ್ಯಾಗದ ಮುಂದೆ ಇಂದು ನಾನು ತೃಣ ಎನಿಸಿತು. ಮಗನಿಗೆ ಬಹಳ ಒಳ ಏಟು ಬಿದ್ದಿದೆ, ಪಕ್ಕೆಮೂಳೆ ಬಲತೊಡೆ ligamentಗೆ ಬಲವಾದ ಪೆಟ್ಟು. ಚಿಕಿತ್ಸೆ ನಡೆಯುತ್ತಿದೆ" ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಟ್ವೀಟ್ ನಲ್ಲಿ ಕೆಟ್ಟ ಭಯ ಆವರಿಸುತ್ತಿದೆ. ಮನೆಯವರು ನೋಡದಂತೆ ವಿನಂತಿ ಮಾಡಿದರು ಹಾಗಾಗಿ ಟ್ವೀಟ್ ಡಿಲೀಟ್ ಮಾಡಿರುವುದಾಗಿ ಹೇಳಿದ್ದಾರೆ. "ಮಗನ ಕಾರ್ accident ಚಿತ್ರ ನೋಡಿದರೆ ನನಗೆ ಹೃದಯದ ಬಡಿತ ಹೆಚ್ಚಾಗುತ್ತಿದೆ. ಕೆಟ್ಟ ಭಯ ಆವರಿಸುತ್ತದೆ. ಬೆಳಿಗ್ಗೆಯಿಂದ ಏನು ತಿನ್ನಲಾಗದೆ ಕೆಟ್ಟ ಕಲ್ಪನೆಗಳು ನನ್ನ ಕಾಡುತ್ತಿದೆ. ಮನೆಯವರು ಅದ ನೋಡದಂತೆ ವಿನಂತಿ ಮಾಡಿದರು. ಹಾಗಾಗಿ ಹಾಕಿದ ವಿಷಯ ಡಿಲೀಟ್ ಮಾಡಿದೆ" ಎಂದು ಹೇಳಿದ್ದಾರೆ.
(Kannada Copy of Filmbeat Kannada)
ಜೀವನದಲ್ಲಿ ಸಂಸಾರದ ಸರ್ವಸದಸ್ಯರ ಭಾರಹೊತ್ತು, ತನಗಾಗಿ ಏನುಬಯಸದೆ!ತನ್ನವರಿಗಾಗಿ ಬಂದದ್ದೆಲ್ಲಾ ಸಹಿಸಿ ನೋವುನುಂಗಿ ಹೆಜ್ಜೆಹಾಕುವ ಮೌನಯೋಗಿ #ಅಪ್ಪ
— ನವರಸನಾಯಕ ಜಗ್ಗೇಶ್ (@Jaggesh2) July 1, 2021
ಇಂದು ಬಹಳ ನೆನಪಾದ ನನ್ನ #ಅಪ್ಪ ಅವನ ತ್ಯಾಗದಮುಂದೆ ಇಂದು ನಾನು ತೃಣ ಎನ್ನಿಸಿತು!
ಮಗನಿಗೆ ಬಹಳ ಒಳಏಟು ಬಿದ್ದಿದೆ,ಪಕ್ಕೆಮೂಳೆ ಬಲತೊಡೆ ligamentಗೆ ಬಲವಾದ ಪೆಟ್ಟು!ಚಿಕಿತ್ಸೆ ನಡೆಯುತ್ತಿದೆ🙏
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm