ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ನಿಧನ

07-07-21 10:56 am       Filmbeat : Shruthi K   ಸಿನಿಮಾ

ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಬುಧವಾರ ಬೆಳಗ್ಗೆ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಬುಧವಾರ (ಜುಲೈ 7) ಬೆಳಗ್ಗೆ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಇಂದ ಬಳಲುತ್ತಿದ್ದ ನಟ ದಿಲೀಪ್ ಕುಮಾರ್ ಜೂನ್ 29ರಂದು ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಟ ಕೊನೆಯುಸಿರೆಳೆದರು.

ಇತ್ತೀಚಿಗೆ ದಿಲೀಪ್ ಕುಮಾರ್ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದರು. ''ದಿಲೀಪ್ ಕುಮಾರ್ ಆರೋಗ್ಯವಾಗಿದ್ದಾರೆ. ವೈದ್ಯರ ಸಲಹೆಯಂತೆ ಸ್ವಲ್ಪ ದಿನ ಆಸ್ಪತ್ರೆಯಲ್ಲೇ ಇರಲಿದ್ದಾರೆ. ಆರೈಕೆ ಮಾಡಲು ವೈದ್ಯರಿಗೂ ಸಹಾಯವಾಗಲಿದೆ. ಒಂದೆರಡು ದಿನದ ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ'' ಎಂದಿದ್ದರು.ಆದರೀಗ ದಿಲೀಪ್ ಕುಮಾರ್ ಇನ್ನಿಲ್ಲ ಎನ್ನುವ ಸುದ್ದಿ ಶಾಕ್ ನೀಡಿದೆ. ಹಿರಿಯ ನಟನ ನಿಧನಕ್ಕೆ ಬಾಲಿವುಡ್ ಅನೇಕ ಮಂದಿ ಕಂಬನಿ ಮಿಡಿದಿದ್ದಾರೆ. ಜೂನ್ ತಿಂಗಳಲ್ಲಿ ದಿಲೀಪ್ ಕುಮಾರ್ 2ನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಭೀತಿಯ ಹಿನ್ನಲೆ ಪತ್ನಿ ಸಾಹೀರಾ ಬಾನು ಜೊತೆ ಕ್ವಾರಂಟೈನ್ ನಲ್ಲಿದ್ದ ದಿಲೀಪ್ ಕುಮಾರ್ ಅವರನ್ನು ವಯೋಸಹಜ ಕಾಯಿಲೆಗಳು ಆಗಾಗ ಕಾಡುತ್ತಿದ್ದು, ಹಾಗಾಗಿ ಪದೇ ಪದೇ ಆಸ್ಪತ್ರೆಗೆ ದಾಖಲಾಗುವಂತೆ ಮಾಡುತ್ತಿತ್ತು.

'ಮುಘಲ್-ಎ-ಅಜಮ್', 'ರಾಮ್ ಔರ್ ಶ್ಯಾಮ್', 'ಕೋಹಿನೂರ್' ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿರುವ ದಿಲೀಪ್ ಕುಮಾರ್ 1998 ರಿಂದ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ದಿಲೀಪ್ ಕುಮಾರ್ ನಿಜವಾದ ಹೆಸರು ಮೊಹಮ್ಮದ್ ಯೂಸಫ್ ಖಾನ್.

(Kannada Copy of Filmbeat Kannada)