ಬ್ರೇಕಿಂಗ್ ನ್ಯೂಸ್
02-08-21 10:27 pm Headline Karnataka News Network ಸಿನಿಮಾ
Photo credits : BBCL
ಬ್ಲೂ ಫಿಲ್ಮ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ಪತಿ ರಾಜ್ ಕುಂದ್ರ ಬಗ್ಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಜುಲೈ 19ರಂದು ಬಂಧನಕ್ಕೊಳಗಾಗಿರುವ ಪತಿ ರಾಜ್ ಕುಂದ್ರ ಬಗ್ಗೆ ಶಿಲ್ಪಾ ಶೆಟ್ಟಿ ಯಾವುದೇ ಹೇಳಿಕೆ ಬಿಡುಗಡೆ ಮಾಡಿರಲಿಲ್ಲ. ಇತ್ತೀಚಿಗೆ ಪರೋಕ್ಷವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಆದರೆ ಪತಿಯ ಬಂಧನದ ಬಗ್ಗೆ ಯಾವುದೇ ಹೇಳಿಕೆ ನೀಡಿರಲಿಲ್ಲ.
ಇತ್ತೀಚಿಗಷ್ಟೆ ಮಾಧ್ಯಮದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ನಟಿ ಶಿಲ್ಪಾ ಶೆಟ್ಟಿ, ಇದೀಗ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ತನ್ನ ಬಗ್ಗೆ ಸಾಕಷ್ಟು ಸುಳ್ಳುಸುದ್ದಿಗಳು ಹರಿದಾಡುತ್ತಿದೆ. ದಯವಿಟ್ಟು ಮಕ್ಕಳ ಸಲುವಾಗಿ, ತಮ್ಮ ಕುಟುಂಬದ ಖಾಸಗಿತನಕ್ಕೆ ಗೌರವ ನೀಡಿ ಎಂದು ಶಿಲ್ಪಾ ಶೆಟ್ಟಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾಗಿ ಬರೆದುಕೊಂಡಿದ್ದಾರೆ.
ಶಿಲ್ಪಾ ಶೆಟ್ಟಿ ಹೇಳಿಕೆ ;
"ಹೌದು, ಕಳೆದ ಕೆಲವು ದಿನಗಳು ನನಗೆ ತುಂಬಾ ಸವಾಲಿನ ದಿನಗಳಾಗಿವೆ. ಪ್ರತಿಯೊಂದು ವಿಚಾರದಲ್ಲೂ. ಸಾಕಷ್ಟು ವದಂತಿಗಳು ಮತ್ತು ಆರೋಪಗಳು ಬಂದಿವೆ. ಮಾಧ್ಯಮಗಳು ನನ್ನ ಮಾನಹಾನಿ ಮಾಡುತ್ತಿವೆ. ಬಹಳಷ್ಟು ಟ್ರೋಲ್ ಮತ್ತು ಪ್ರಶ್ನೆಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. ನನಗೆ ಮಾತ್ರವಲ್ಲ ನನ್ನ ಕುಟುಂಬಕ್ಕೂ ಸಹ" ಎಂದು ಶಿಲ್ಪಾ ಶೆಟ್ಟಿ ಹೇಳಿದ್ದಾರೆ.
ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದ ಶಿಲ್ಪಾ;
ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದಿರುವ ಶಿಲ್ಪಾ "ನನ್ನ ಸ್ಟ್ಯಾಂಡ್..ನಾನು ಯಾವುದೇ ಕಾಮೆಂಟ್ ಮಾಡಲ್ಲ. ಈ ಪ್ರಕರಣದಲ್ಲಿ ತನಿಖೆ ಹಂತದಲ್ಲಿದೆ. ಅದ್ದರಿಂದ ದಯವಿಟ್ಟು ನಾನು ಹೇಳಿದ್ದೇನೆ ಅಂತ ಸುಳ್ಳು ಹೇಳಿಕೆಯನ್ನು ಪ್ರಕಟಿಸಬೇಡಿ" ಎಂದು ಕೇಳಿಕೊಂಡಿದ್ದಾರೆ.
ಮಕ್ಕಳ ಸಲುವಾಗಿ ಕೇಳಿಕೊಳ್ಳುತ್ತಿದ್ದೇನೆ;
"ನಾನು ವಿನಮ್ರವಾಗಿ ಮನವಿ ಮಾಡುತ್ತೇನೆ. ವಿಶೇಷವಾಗಿ ಒಬ್ಬ ತಾಯಿಯಾಗಿ, ನನ್ನ ಮಕ್ಕಳ ಸಲುವಾಗಿ ನಮ್ಮ ಖಾಸಗಿತನವನ್ನು ಗೌರವಿಸಿ. ಸತ್ಯಾಸತ್ಯತೆ ಪರಿಶೀಲಿಸದೆ ಅರೆಬೆಂದ ಮಾಹಿತಿಯ ಬಗ್ಗೆ ಪ್ರತಿಕ್ರಿಯಿಸಬೇಡಿ ಎಂದು ಕೇಳಿ ಕೊಳ್ಳುತ್ತೇನೆ" ಎಂದು ಹೇಳಿದ್ದಾರೆ.
ಲಿಂಕ್ ಕೇಳುತ್ತಿರುವ ನೆಟ್ಟಿಗರು;
ಶಿಲ್ಪಾ ಶೆಟ್ಟಿ ಹೇಳಿಕೆ ಬಿಡುಗಡೆ ಮಾಡುತ್ತಿದ್ದಂತೆ ನೆಟ್ಟಿಗರು ಲಿಂಕ್ ಕಳುಹಿಸಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ರಾಜ್ ಕುಂದ್ರ ನಿರ್ಮಾಣ ಮಾಡುತ್ತಿದ್ದ ಅಶ್ಲೀಲ ವಿಡಿಯೋಗಳ ಲಿಂಕ್ ಶೇರ್ ಮಾಡುವಂತೆ ನೆಟ್ಟಿಗರು ಪ್ರತಿಕ್ರಿಯೆ ನೀಡುತ್ತಿದ್ದಾರೆ. "ನಿಮ್ಮ ಹೇಳಿಕೆ ನಮಗೆ ಬೇಡ, ಮೊದಲು ಲಿಂಕ್ ಕೊಡಿ" ಎಂದು ಕೇಳುತ್ತಿದ್ದಾರೆ. ಸಾಕಷ್ಟು ಮಂದಿ ಕಾಮೆಂಟ್ ಮಾಡಿ ಲಿಂಕ್ ಕಳುಹಿಸುವಂತೆ ಕೇಳಿಕೊಳ್ಳುತ್ತಿದ್ದಾರೆ.
ಮಾಧ್ಯಮದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಶಿಲ್ಪಾ;
ತನ್ನ ವಿರುದ್ಧ ಮಾನಹಾನಿಕರ ವಿಷಯ ಪ್ರಕಟಿಸದಂತೆ ತಡೆಕೋರಿ ಮಾಧ್ಯಮ ಸಂಸ್ಥೆ, ಸಾಮಾಜಿಕ ಜಾಲತಾಣಗಳು ಮತ್ತು ವೆಬ್ ಸೈಟ್ ಗಳ ವಿರುದ್ಧ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಮಾನಹಾನಿಕರ ಸುದ್ದಿ ಪ್ರಕಟ ಮಾಡಿರುವ ಮಾಧ್ಯಮ ಸಂಸ್ಥೆಗಳು, ಸಾಮಾಜಿಕ ಜಾಲತಾಣಗಳು ಬೇಷರತ್ ಕ್ಷಮೆ ಕೇಳಬೇಕು, ಎಲ್ಲಾ ಮಾನಹಾನಿಕರ ವಿಷಯಗಳನ್ನು ಡಿಲೀಟ್ ಮಾಡಬೇಕು ಮತ್ತು 25 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದರು.
ನ್ಯಾಯಾಲಯ ಪ್ರಶ್ನೆ;
''ನೀವು ಸಾರ್ವಜನಿಕ ಜೀವನದಲ್ಲಿದ್ದೀರಾ ಅಂದ್ಮೇಲೆ ಇಂತಹ ಘಟನೆಗಳು ಸಹಜ. ಜನರು ನಿಮ್ಮ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ ಹೊಂದಿರುತ್ತಾರೆ. ಆಕೆ ಅತ್ತಳು, ಗಂಡನ ಜೊತೆ ಜಗಳವಾಡಿದಳು ಎಂದು ಯಾರಾದರೂ ಬರೆದರೆ ಅದು ಹೇಗೆ ಮಾನಹಾನಿಕರ ಎಂದು ಪರಿಗಣಿಸಲಾಗುತ್ತದೆ'' ಎಂದು ನ್ಯಾಯಾಲಯ ಕೇಳಿದೆ.
Actor Shilpa Shetty has finally released her statement weeks after husband Raj Kundra was arrested for allegedly creating and distributing pornographic content via mobile apps. The actor, who had approached the Bombay High Court seeking to restrain various media organizations from publishing any ‘incorrect, false, malicious and defamatory’ content against her, said in the statement that she is being subjected to a ‘media trial’.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm