ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು

26-08-21 01:49 pm       Filmbeat: Shruthi GK   ಸಿನಿಮಾ

ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅನಾರೋಗ್ಯಕ್ಕೆ ತುತ್ತಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅನಾರೋಗ್ಯಕ್ಕೆ ತುತ್ತಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಎದೆ ನೋವಿನ ಕಾರಣ ದೊಡ್ಡಣ್ಣ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ದೊಡ್ಡಣ್ಣ ಅವರ ಹೃದಯ ಬಡಿತ ಏರುಪೇರಾದ ಹಿನ್ನಲೇ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಮೂಲಗಳ ಮಾಹಿತಿ ಪ್ರಕಾರ ದೊಡ್ಡಣ್ಣ ಆರೋಗ್ಯ ಸ್ಥಿರವಾಗಿದ್ದು, ಪೇಸ್ ಮೇಕರ್ ಅಳವಡಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮೂರ್ನಾಲ್ಕು ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ಬಗ್ಗೆ ಆಸ್ಪತ್ರೆ ವೈದ್ಯರಿಂದಾಗಲಿ ಅಥವಾ ದೊಡ್ಡಣ್ಣ ಕುಟುಂಬದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ.

ದೊಡ್ಡಣ್ಣ ದಿಢೀರ್ ಆಸ್ಪತ್ರೆಗೆ ದಾಖಲಾಗಿರುವುದು ಅವರ ಸ್ನೇಹಿತರಲ್ಲಿ ಮತ್ತು ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಇತ್ತೀಚಿಗಷ್ಟೆ ನಟ ದೊಡ್ಡ ಬಗ್ಗೆ ಸುಳ್ಳು ಸುದ್ದಿ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು RIP ಎಂದು ಕಾಮೆಂಟ್ ಮಾಡುತ್ತಿದ್ದರು. ಈ ಬಗ್ಗೆ ದೊಡ್ಡ ಸ್ವತಃ ವಿಡಿಯೋ ಮೂಲಕ ಮಾಹಿತಿ ತನಗೇನು ಆಗಿಲ್ಲ, ತಾನಿನ್ನು ಬದುಕಿದ್ದೀನಿ ಎಂದು ಸ್ಪಷ್ಟನೆ ನೀಡಿದ್ದರು.



"ಯಾರೋ ಕಿಡಿಗೇಡಿಗಳು ನನ್ನ ಫೋಟೋ ಹಾಕಿ rip ಅಂತ ಹಾಕಿದ್ದಾರೆ. ದೊಡ್ಡಣ್ಣ ನಿಧನರಾಗಿದ್ದಾರೆ ಎನ್ನುವ ಹಾಗೆ ಹಾಕಿದ್ದಾರೆ. ನೂರಾರು ಫೋನ್ ಬರ್ತಿದೆ. ಎಲ್ಲರಿಗೂ ಹೇಳಲು ಇಷ್ಟಪಡುತ್ತೇನೆ. ನಾನು ಮನೆಯಲ್ಲೇ ಇದ್ದೀನಿ, ಆರೋಗ್ಯವಾಗಿ, ಆರಾಮಾಗಿ ಇದ್ದೀನಿ. ಯಾರು ಭಯ ಪಡಬೇಕಾಗಿಲ್ಲ. ಕನ್ನಡ ನಾಡಿನ ಎಲ್ಲಾ ತಂದೆ-ತಾಯಿಗಳ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಿಮ್ಮ ದೊಡ್ಡಣ್ಣನಿಗೆ ಏನು ಆಗಲ್ಲ. ಆಯಸ್ಸು ಜಾಸ್ತಿ. ಯಾವುದೊ ಒಂದು ಕಂಟಕ ಭಗೆಹರಿಯಿತು ಅಂತ ಅಂದುಕೊಳ್ಳುತ್ತೇನೆ. ನಾನು ಆರೋಗ್ಯವಾಗಿ ಇದ್ದೀನಿ" ಎಂದು ಹೇಳುವ ಮೂಲಕ ಹರಿದಾಡುತ್ತಿದ್ದ ಸುದ್ದಿಗೆ ಬ್ರೇಕ್ ಹಾಕಿದ್ದರು.

ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ದೊಡ್ಡಣ್ಣ ಕೊನೆಯದಾಗಿ 'ಅಂಬಿ ನಿಂಗ್ ವಯಸ್ಸಾಯ್ತೊ' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ಬಳಿಕ ದೊಡ್ಡಣ್ಣ ಮತ್ತೆ ತೆರೆಮೇಲೆ ಬಂದಿಲ್ಲ. 2010ರ ಬಳಿಕ ದೊಡ್ಡಣ್ಣ ಸಿನಿಮಾಗಳ ಸಂಖ್ಯೆ ಕಡಿಮೆಯಾಗಿದೆ. ಬಳಿಕ ಅಪರೂಪಕ್ಕೊಂದು ಸಿನಿಮಾ ಮಾಡುತ್ತಿದ್ದ ದೊಡ್ಡಣ್ಣ 2018ರ ಬಳಿಕ ಬಣ್ಣ ಹಚ್ಚುವುದನ್ನೇ ಬಿಟ್ಟಿದ್ದಾರೆ.

(Kannada Copy of Filmbeat Kannada)