ಬ್ರೇಕಿಂಗ್ ನ್ಯೂಸ್
16-09-21 03:27 pm Filmbeat: Bharath Kumar K ಸಿನಿಮಾ
ಬಾಡಿ ಬಿಲ್ಡರ್ ಹಾಗೂ ಮಾಜಿ ಮಿಸ್ಟರ್ ಇಂಡಿಯಾ ವಿಜೇತ ಮನೋಜ್ ಪಾಟೀಲ್ ಮುಂಬೈನ ಓಶಿವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವರದಿಯಾಗಿದೆ.
ಈ ಕುರಿತು ಮುಂಬೈ ಪೊಲೀಸರುವ ಪಿಟಿಐಗೆ ಪ್ರತಿಕ್ರಿಯಿಸಿದ್ದು, ''ಮನೋಜ್ ಪಾಟೀಲ್ ಓಶಿವಾರದಲ್ಲಿರುವ ತಮ್ಮ ಮನೆಯಲ್ಲಿ ಗುರುವಾರ ಮಲಗುವ ಮುನ್ನ ನಿದ್ರೆ ಮಾತ್ರೆಗಳನ್ನು ಸೇವಿಸಿದ್ದರು'' ಎಂದು ಮಾಹಿತಿ ನೀಡಿದ್ದಾರೆ.

ಮನೋಜ್ ಪಾಟೀಲ್ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಮೇಲೆ ಕುಟುಂಬಸ್ಥರು ಮುಂಬೈನ ಕೂಪರ್ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದರು ಎಂದು ಮನೋಜ್ ಮ್ಯಾನೇಜರ್ ಪಾರಿ ನಾಜ್ ತಿಳಿಸಿದ್ದಾರೆ. ಇತ್ತೀಚಿನ ಅಪ್‌ಡೇಟ್ ಪ್ರಕಾರ, ಬಾಡಿ ಬಿಲ್ಡರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಮನೋಜ್ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಲು ಕಾರಣ ಏನು ಎಂದು ಹುಡುಕಿ ಹೊರಟಾಗ, ಬಾಲಿವುಡ್ ನಟ ಶಾಹೀಲ್ ಖಾನ್ ಹೆಸರು ಕೇಳಿ ಬಂದಿದೆ. ತನ್ನ ಆತ್ಮಹತ್ಯೆಗೆ ನಟ ಶಾಹೀಲ್ ಖಾನ್ ಕಾರಣ ಎಂದು ಡೆತ್‌ನೋಟ್ ಬರೆದಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದ್ದು, ಆ ಪತ್ರ ಪೊಲೀಸರ ಕೈ ಸೇರಿದೆಯಂತೆ. ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ 'ಶಾಹೀಲ್ ಖಾನ್ ಮಾನಸಿಕವಾಗಿ ಹಿಂಸಿಸುತ್ತಿದ್ದರು. ಹಾಗಾಗಿ, ಮನನೊಂದು ಸಾಯಲು ನಿರ್ಧರಿಸುವೆ' ಎಂದು ಮನೋಜ್ ಪಾಟೀಲ್ ಬರೆದಿದ್ದಾರೆ ಎಂದು ಮ್ಯಾನೇಜರ್ ಪಾರಿ ನಾಜ್ ಹೇಳಿದ್ದಾರೆ. ನಟ ಶಾಹೀಲ್ ಖಾನ್, ಬಾಡಿ ಬಿಲ್ಡರ್ ಮನೋಜ್ ಪಾಟೀಲ್ ಅವರ ವೈಯಕ್ತಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಸೃಷ್ಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ತೇಜೋವಧೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮನೋಜ್ ಪಾಟೀಲ್ ವೃತ್ತಿಜೀವನವನ್ನು ಅಂತ್ಯಗೊಳಿಸುವುದಾಗಿ ನಟ ಶಾಹೀಲ್ ಖಾನ್ ಬೆದರಿಕೆ ಹಾಕಿದ್ದರಂತೆ. ಹಾಗೂ ಮನೋಜ್ ಅವರ ಪ್ರೋಟಿನ್ ಶಾಪ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿ ಮಾನಹಾನಿ ಸಹ ಮಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಇ-ಟೈಮ್ಸ್‌ಗೆ ಶಾಹೀಲ್ ಖಾನ್ ಪ್ರತಿಕ್ರಿಯಿಸಿದ್ದು, ''ಇದೆಲ್ಲ ಕೇವಲ ಪ್ರಚಾರಕ್ಕಷ್ಟೆ. ಮನೋಜ್ ಜೊತೆ ನನಗೆ ಯಾವುದೇ ಸಂಬಂಧವಿಲ್ಲ'' ಎಂದು ತಿಳಿಸಿದ್ದಾರೆ.
ಮನೋಜ್ ಪಾಟೀಲ್ ಫಿಟ್ನೆಸ್ ಮಾಡೆಲ್ ಆಗಿದ್ದು, 2016 ರಲ್ಲಿ ಮಿಸ್ಟರ್ ಇಂಡಿಯಾ ಚಾಂಪಿಯನ್‌ಶಿಪ್ ಗೆದ್ದಿದ್ದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm