ಬ್ರೇಕಿಂಗ್ ನ್ಯೂಸ್
03-12-21 01:44 pm HK Desk news ಸಿನಿಮಾ
ಬೆಂಗಳೂರು, ಡಿ.3: ಕನ್ನಡ ಚಿತ್ರರಂಗ ಹಿರಿಯ ನಟ ಶಿವರಾಂ(84) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೋಮಾಕ್ಕೆ ತಲುಪಿದ್ದಾರೆಂದು ಹೇಳಲಾಗುತ್ತಿದೆ. ಎರಡು ದಿನಗಳ ಹಿಂದೆಯಷ್ಟೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇತ್ತೀಚೆಗೆ ಕುಟುಂಬಸ್ಥರ ಜೊತೆ ಕಾರಿನಲ್ಲಿ ಹೊರಗೆ ಹೋಗಿದ್ದಾಗ ಅಪಘಾತ ನಡೆದಿದ್ದು, ಈ ವೇಳೆ ಶಿವರಾಂ ಅವರಿಗೂ ಸ್ವಲ್ಪ ಪೆಟ್ಟಾಗಿತ್ತು. ಆನಂತರ, ಯಾವುದೇ ತೊಂದರೆ ಇಲ್ಲವೆಂದು ಮನೆಗೆ ಕರೆ ತರಲಾಗಿತ್ತು. ಮನೆಯಲ್ಲಿದ್ದ ಅವರು ದಿಢೀರ್ ಆಗಿ ಅಸ್ವಸ್ಥರಾಗಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳವಾರ ರಾತ್ರಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿಗೆ ಪೂಜೆ ನಡೆಸಲಾಗಿದ್ದು, ಈ ವೇಳೆ ಕುಟುಂಬಸ್ಥರ ಜೊತೆ ಪೂಜಾ ಕಾರ್ಯದಲ್ಲಿ ಶಿವರಾಂ ಕೂಡ ಭಾಗವಹಿಸಿದ್ದರು. ಪೂಜೆ ಮಾಡಲು ಹೋಗಿದ್ದಾಗ ಆಯತಪ್ಪಿ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟು ತಗಲಿದೆ ಎನ್ನಲಾಗುತ್ತಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದ ವೇಳೆ ಶಿವರಾಂ ಅವರಿಗೆ ಮೆದುಳಿನಲ್ಲಿ ರಕ್ತಸ್ರಾವ ಆಗಿರುವುದು ಕಂಡುಬಂದಿತ್ತು. ಇದೀಗ ಶಿವರಾಂ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ಕೋಮಾ ಸ್ಥಿತಿಗೆ ಜಾರಿದ್ದಾರೆ ಅನ್ನುವ ಮಾಹಿತಿ ಲಭಿಸಿದೆ.
ತಂದೆಯ ಆರೋಗ್ಯದ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದ ಪುತ್ರ ರವಿಶಂಕರ್, ತಲೆಗೆ ಪೆಟ್ಟು ತಗಲಿದ್ದರಿಂದ ತಲೆಯ ಭಾಗದ ಸ್ಕ್ಯಾನಿಂಗ್ ಮಾಡಲಾಗಿತ್ತು. ಅದರಲ್ಲಿ ಮೆದುಳಿನ ರಕ್ತಸ್ರಾವ ಆಗಿರುವುದು ಕಂಡುಬಂದಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದರು.
ಶಿವರಾಂ ಹಿಂದಿನಿಂದಲೂ ಕನ್ನಡ ಚಿತ್ರರಂಗದಲ್ಲಿದ್ದು ನೂರಾರು ಚಿತ್ರಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡು ಖ್ಯಾತಿ ಗಳಿಸಿದ್ದಾರೆ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಜೊತೆಗೆ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದರು. ರಾಜಕುಮಾರ್ ಕಾಲದ ಚಿತ್ರನಟರ ಪೈಕಿ ಕೊನೆಯ ಕೊಂಡಿ ಅಂತಲೂ ಹೇಳಬಹುದು.
Veteran Kannada actor S Shivaram is in a critical condition after being hospitalised due to a head injury. The actor, who was admitted to a private hospital in Bengaluru on Tuesday, is being treated in the intensive care unit (ICU).
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 02:19 pm
Mangalore Correspondent
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm