ಬ್ರೇಕಿಂಗ್ ನ್ಯೂಸ್
17-03-22 04:02 pm Bengaluru Correspondent ಸಿನಿಮಾ
ಬೆಂಗಳೂರು, ಮಾ.17 : ದಿವಂಗತ ನಟ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸುವುದಾಗಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ದೇಶಾದ್ಯಂತ ಇಂದು ನಟ ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್ ತೆರೆ ಕಂಡಿದ್ದು, ಸಿನಿಮಾಗೆ ತೆರಿಗೆ ರಿಯಾಯಿತಿ ನೀಡುವ ಕುರಿತು ಅವರ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.
ಈ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಆರ್ ಅಶೋಕ್, 'ಪುನೀತ್ ಅಭಿಮಾನಿಗಳು ನನಗೆ ಕರೆ ಮಾಡಿದ್ದರು. ಇದರ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದೇನೆ ಎಂದು ಹೇಳಿದರು.
ರಾಜ್ಯ ಕಂಡ ನಿಸ್ವಾರ್ಥ ಮತ್ತು ಅಧ್ಭುತ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮನದಾಳದಿಂದ ಶುಭಾಶಯ ಹೇಳುತ್ತೇನೆ. ದಿ. ನಟ ಪುನೀತ್ ನಟನೆಯ ಕೊನೆಯ ಚಿತ್ರ ಇಂದು ಬಿಡುಗಡೆಯಾಗಿದ್ದು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಪ್ರಾರಂಭವಾಗಿದೆ. ಇದೇ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳು ನನಗೆ ಕರೆ ಮಾಡಿ ಜೇಮ್ಸ್ ಸಿನಿಮಾಗೆ ವಿನಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವಿಚಾರವನ್ನ ಸಿಎಂ ಜೊತೆ ಚರ್ಚಿಸುತ್ತೇನೆ ಎಂದವರು ಹೇಳಿದರು.
ಕೆಲವರು ಸತ್ತಾಗ ಸ್ವಲ್ಪ ದಿನದಲ್ಲೆ ಮರೆಯುವುದು ಸಾಮಾನ್ಯ. ಆದರೆ ಪುನೀತ್ ಇಲ್ಲ ಅಂದ್ರು ಬದುಕಿರುವ ರೀತಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ಅದ್ಭುತ, ಪುನೀತ್ ಗೆ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ. ಆದಷ್ಟು ಬೇಗ ಅದನ್ನ ಕೊಡುವ ಕೆಲಸ ಆಗುತ್ತೆ ಎಂದರು.
Minister R Ashok has said that he will hold talks with CM Basavaraja Bommai seeking tax exemption for actor Puneet Raj Kumar starrer James.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm