ಬ್ರೇಕಿಂಗ್ ನ್ಯೂಸ್
11-04-22 07:05 pm Source: Vijayakarnataka ಸಿನಿಮಾ
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
ಸಾಲು ಸಾಲು ರಜೆ
ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.
ಕೆಜಿಎಫ್: ಚಾಪ್ಟರ್ 1 ಕಲೆಕ್ಷನ್ ಎಷ್ಟು?

2018ರಲ್ಲಿ ಬಿಡುಗಡೆಯಾಗಿದ್ದ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಒಟ್ಟಾರೆಯಾಗಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 80 ಕೋಟಿ ರೂಪಾಯಿ ಬಜೆಟ್‌ನಲ್ಲಿ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ತಯಾರಾಗಿತ್ತು. ಆಗಿನ ಸಮಯಕ್ಕೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಕೆಜಿಎಫ್: ಚಾಪ್ಟರ್ 1’ ಪಾತ್ರವಾಗಿತ್ತು.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೇಗಿದೆ?

ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೊದಲ ವಿಮರ್ಶೆ ಔಟ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಓವರ್‌ಸೀಸ್ ಸೆನ್ಸಾರ್ ಬೋರ್ಡ್‌ನ ಸದಸ್ಯರಾದ ಉಮೈರ್ ಸಾಂಧು ವೀಕ್ಷಿಸಿದ್ದು, ತಮ್ಮ ವಿಮರ್ಶೆಯನ್ನ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ.
Yash And Sanjay Dutt Starrer Kgf Chapter 2 Is All Set To Take A Record Breaking Opening.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm