ಜ್ವರ, ಕೆಮ್ಮು, ನೆಗಡಿ ಎಲ್ಲಾ ಕೊರೊನಾವೈರಸ್ ಅಲ್ಲ!?: ಇಲ್ಲಿದೆ ಸರಿಯಾದ ಅಂಕಿ-ಅಂಶ

21-09-21 01:03 pm       Source: One India kannada   ಡಾಕ್ಟರ್ಸ್ ನೋಟ್

ಭಾರತದಲ್ಲಿ ಕಾಲೋಚಿತ ಜ್ವರ, ನೆಗಡಿ, ಕೆಮ್ಮು ಮತ್ತು ಆಯಾಸದಂತ ಲಕ್ಷಣಗಳು ಜನರಲ್ಲಿ ಕೊರೊನಾವೈರಸ್ ಸೋಂಕಿನ ಭೀತಿಯನ್ನು ಮತ್ತಷ್ಟು ಹೆಚ್ಚಿಸುತ್ತಿದೆ.

ನವದೆಹಲಿ, ಸ. 21: ಭಾರತದಲ್ಲಿ ಕಾಲೋಚಿತ ಜ್ವರ, ನೆಗಡಿ, ಕೆಮ್ಮು ಮತ್ತು ಆಯಾಸದಂತ ಲಕ್ಷಣಗಳು ಜನರಲ್ಲಿ ಕೊರೊನಾವೈರಸ್ ಸೋಂಕಿನ ಭೀತಿಯನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ವಾತಾವರಣದಲ್ಲಿ ತಾಪಮಾನದ ವ್ಯತ್ಯಾಸದಿಂದಾಗಿ ಕಾಣಿಸಿಕೊಳ್ಳುವ ರೋಗಗಳ ಬಗ್ಗೆ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಇದರ ಮಧ್ಯೆ ಕೊಂಚ ನೆಮ್ಮದಿಯ ವಿಷಯ ಏನೆಂದರೆ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 30,000ಕ್ಕಿಂತ ಕಡಿಮೆಯಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ34,469 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 252 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ 4,45,385ಕ್ಕೆ ಏರಿಕೆಯಾಗಿದೆ.

ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,35,04,534ಕ್ಕೆ ಏರಿಕೆಯಾಗಿದೆ. ಇದುವರೆಗೂ 3,27,49,574 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, 3,09,575 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ 16 ಲಕ್ಷ ಮಂದಿಗೆ ಕೊರೊನಾವೈರಸ್ ಪರೀಕ್ಷೆ

ದೇಶದಲ್ಲಿ 16 ಲಕ್ಷ ಮಂದಿಗೆ ಕೊರೊನಾವೈರಸ್ ಪರೀಕ್ಷೆ

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾದರೂ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 14,13,951 ಜನರಿಗೆ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 55,50,35,717 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.



81.65 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 81.65 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 248 ದಿನಗಳಾಗಿದೆ. ಕಳೆದ 24 ಗಂಟೆಗಳಲ್ಲಿ 96,46,778 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈವರೆಗೂ 81,85,13,827 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 79,74,26,335 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.



ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಹಂತ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.



ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

2021ರ ಸಪ್ಟೆಂಬರ್ 21ರ ಅಂಕಿ-ಅಂಶಗಳ ಪ್ರಕಾರ, 79,74,26,335 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ. * ಪೂರೈಕೆಯಾದ ಲಸಿಕೆ ಪ್ರಮಾಣ - 64,51,07,160 * ಕೊವಿಡ್-19 ಲಸಿಕೆಯ ಲಭ್ಯತೆ - 5,21,37,660