ಬ್ರೇಕಿಂಗ್ ನ್ಯೂಸ್
23-09-21 10:50 am Shreeraksha, Boldsky ಡಾಕ್ಟರ್ಸ್ ನೋಟ್
ಹಾಲು ಮತ್ತು ಸೋಂಪು ಎರಡೂ ನಮ್ಮ ಒಟ್ಟಾರೆ ಆರೋಗ್ಯಕ್ಕೆ ಅದ್ಭುತವಾದ ಪ್ರಯೋಜನಗಳನ್ನು ಹೊಂದಿವೆ, ಆದರೆ ಇವುಗಳನ್ನು ಒಟ್ಟಿಗೆ ಸೇರಿಸಿದಾಗ ನಿಮ್ಮ ದೇಹಕ್ಕೆ ಮ್ಯಾಜಿಕ್ನಂತೆ ಕೆಲಸ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ? ಹೌದು, ಹಾಲಿಗೆ ಸರಿಯಾದ ಪದಾರ್ಥಗಳನ್ನು ಸೇರಿಸುವುದರಿಂದ ಮತ್ತಷ್ಟು ಆರೋಗ್ಯಕರವಾಗಬಹುದು. ಸೋಂಪುಭರಿತ ಹಾಲು ಜೀವಸತ್ವಗಳು ಮತ್ತು ಖನಿಜಗಳ ಸಮೃದ್ಧತೆಯಿಂದ ಕೂಡಿದ್ದು, ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಾದರೆ ಈ ಕುರಿತ ಮತ್ತಷ್ಟು ಮಾಹಿತಿ ನಿಮಗಾಗಿ.
ಮೊದಲಿಗೆ ಸೋಂಪಿನ ಹಾಲನ್ನು ಹೇಗೆ ಮಾಡಬೇಕೆಂದು ತಿಳಿದುಕೊಳ್ಳೋಣ..
ಬೇಕಾಗುವ ಪದಾರ್ಥಗಳು:
1/2 ಟೀಸ್ಪೂನ್ ಸೋಂಪು
ಹಾಲು
ತಯಾರಿಸುವ ವಿಧಾನ:
ಬಾಣಲೆಯಲ್ಲಿ, ಹಾಲು ಮತ್ತು ಅರ್ಧ ಚಮಚ ಸೋಂಪು ಬೀಜಗಳನ್ನು ಸೇರಿಸಿ, ಕುದಿಸಿ, ನಂತರ ಸೋಸಿದರೆ, ಸೋಂಪಿನ ಹಾಲು ಸಿದ್ಧ. ಇದಕ್ಕೆ ನಿಮ್ಮ ರುಚಿಗೆ ತಕ್ಕಂತೆ ನೀವು ಸಕ್ಕರೆ ಅಥವಾ ಬೆಲ್ಲವನ್ನು ಸೇರಿಸಬಹುದು.
ಸೋಪಿನ ಹಾಲನ್ನು ಕುಡಿಯುವುದರಿಂದಾಗುವ ಪ್ರಯೋಜನಗಳು:
ಜೀರ್ಣಕ್ರಿಯೆ ಸುಧಾರಣೆ:
ಸೋಂಪಿನ ಹಾಲನ್ನು ಕುಡಿಯುವುದರಿಂದ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಆಗುವುದು. ಸೋಂಪಿನಲ್ಲಿ ಬಾಷ್ಪಶೀಲ ತೈಲಗಳಿವೆ, ಇದು ಜಠರ ಕಿಣ್ವಗಳ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಈ ಹಾಲನ್ನು ಕುಡಿಯುವುದರಿಂದ ನಿಮ್ಮ ಜೀರ್ಣಾಂಗವು ಆರೋಗ್ಯಕರವಾಗಿರುತ್ತದೆ.
ಮೂಳೆಯ ಆರೋಗ್ಯ ವೃದ್ಧಿ:
ಸೋಂಪಿನ ಹಾಲು ಕ್ಯಾಲ್ಸಿಯಂ, ಮ್ಯಾಂಗನೀಸ್ ಮತ್ತು ಮೆಗ್ನೀಸಿಯಮ್ನ ಉತ್ತಮ ಮೂಲವಾಗಿದ್ದು, ಇದು ಮೂಳೆಯ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ತಿಳಿದಿದೆ.
ರಕ್ತಹೀನತೆ ನಿವಾರಣೆ:
ರಕ್ತಹೀನತೆಗೆ ಸಾಮಾನ್ಯ ಕಾರಣವೆಂದರೆ ದೇಹದಲ್ಲಿ ಕಬ್ಬಿಣದ ಪ್ರಮಾಣ ಕಡಿಮೆಯಾಗುವುದು. ಇಂದು ಬಹಳಷ್ಟು ಮಹಿಳೆಯರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಸೋಂಪಿನಲ್ಲಿ ಕಬ್ಬಿಣ ಮತ್ತು ಪೊಟ್ಯಾಶಿಯಂ ಇದ್ದು, ಇದು ದೇಹಕ್ಕೆ ಅಗತ್ಯವಾದ ಕಬ್ಬಿಣವನ್ನು ಪೂರೈಸುತ್ತದೆ ಮತ್ತು ರಕ್ತದಲ್ಲಿನ ಹಿಮೋಗ್ಲೋಬಿನ್ ಅನ್ನು ಸಮತೋಲನಗೊಳಿಸುತ್ತದೆ. ಈ ಮೂಲಕ ರಕ್ತಹೀನತೆಯಿಂದಾಗುವ ಇತರ ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ .
ಹೃದಯದ ಆರೋಗ್ಯ ಕಾಪಾಡುವುದು:
ಸೋಂಪಿನಲ್ಲಿ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಫೈಬರ್ ಮತ್ತು ಮೆಗ್ನೀಶಿಯಂ ಇದ್ದು, ಇವುಗಳು ನಮ್ಮ ಹೃದಯದ ಆರೋಗ್ಯಕ್ಕೆ ಉತ್ತಮವೆಂದು ಪರಿಗಣಿಸಲಾಗಿದೆ. ಈ ಗುಣಗಳು ನಮ್ಮ ಹೃದಯವನ್ನು ಅಪಾಯಗಳಿಂದ ತಡೆಯುತ್ತದೆ. ಈ ಹಾಲನ್ನು ಕುಡಿಯುವುದರಿಂದ ನಮ್ಮ ಹೃದಯದ ಆರೋಗ್ಯಕ್ಕೆ ಉತ್ತಮವಾದ ಕೊಲೆಸ್ಟ್ರಾಲ್ ಅನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ.
ಆರೋಗ್ಯ ಸಮಸ್ಯೆಗಳ ನಿವಾರಣೆ:
ಸೋಂಪನಲ್ಲಿ ಪಾಲಿಫಿನಾಲ್ ಉತ್ಕರ್ಷಣ ನಿರೋಧಕಗಳು ಇರುವುದರಿಂದ ಇವು ನಮ್ಮ ಒಟ್ಟಾರೆ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ತಿಳಿದುಬಂದಿದೆ. ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ವಿವಿಧ ರೀತಿಯ ಕ್ಯಾನ್ಸರ್, ಬೊಜ್ಜು, ಹೃದಯ ಸಮಸ್ಯೆಗಳು ಮತ್ತು ಮಧುಮೇಹ ಸೇರಿದಂತೆ ಇತರ ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ.
ಉಸಿರಾಟದ ಸಮಸ್ಯೆಗಳಿಗೆ ಚಿಕಿತ್ಸೆ:
ನೀವು ಆಸ್ತಮಾದಂತಹ ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದರೆ ಸೋಂಪಿನ ಹಾಲು ನಿಮಗೆ ಉತ್ತಮವಾಗಿದೆ. ಇದು ಉಸಿರಾಟದ ಕಾಯಿಲೆಗಳ ವಿರುದ್ಧ ಹೋರಾಡುವ ಫೈಟೊನ್ಯೂಟ್ರಿಯೆಂಟ್ಗಳನ್ನು ಹೊಂದಿದೆ.
ಚರ್ಮಕ್ಕೂ ಒಳ್ಳೆಯದು:
ಸೋಂಪು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ರಕ್ತವನ್ನು ಶುದ್ಧೀಕರಿಸಲು ಮತ್ತು ಮೊಡವೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಫೆನ್ನೆಲ್ ಬೀಜಗಳ ಹಾಲನ್ನು ಕುಡಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದು ಏಕೆಂದರೆ ಜೊತೆಗೆ ಈ ಹಾಲು ನಿಮ್ಮ ರಕ್ತವನ್ನು ಶುದ್ಧಗೊಳಿಸಿ, ಮೊಡವೆಗಳಂತಹ ಯಾವುದೇ ಚರ್ಮದ ಸಮಸ್ಯೆಗಳನ್ನು ದೂರವಿರಿಸುತ್ತದೆ.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 02:51 pm
HK News Desk
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm