ಬ್ರೇಕಿಂಗ್ ನ್ಯೂಸ್
04-03-22 10:51 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಕಲ್ಲಂಗಡಿ ಹಣ್ಣಿನ ರುಚಿ ಮತ್ತು ಬಣ್ಣದ ಬಗ್ಗೆ ಹೆಚ್ಚು ಹೇಳುವ ಅಗತ್ಯವಿಲ್ಲ. ದೊಡ್ಡವರಿಂದ ಚಿಕ್ಕವರವರೆಗೆ ಕಲ್ಲಂಗಡಿ ಹಣ್ಣನ್ನು ಇಷ್ಟ ಪಟ್ಟು ತಿನ್ನುತ್ತಾರೆ. ಇದೊಂದು ಆರೋಗ್ಯಕರವಾದ ಹಣ್ಣಾಗಿದ್ದು, ಬೇಸಿಗೆಯಲ್ಲಿ ಉಂಟಾಗುವ ಬಾಯಾರಿಕೆಯನ್ನು ನಿವಾರಿಸುತ್ತದೆ.
ಈ ಸಿಹಿ ಮತ್ತು ರಸಭರಿತವಾದ ಕಲ್ಲಂಗಡಿ ಹಣ್ಣು ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಎ ಸೇರಿದಂತೆ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದೆ.
ಅಧ್ಯಯನಗಳ ಪ್ರಕಾರ, ಕಲ್ಲಂಗಡಿ ಹಣ್ಣು ಆರೋಗ್ಯಕರವಾದ ಜೀವನಶೈಲಿಯ ಭಾಗವಾಗಿ ಕ್ಯಾನ್ಸರ್ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತೋರಿಸುತ್ತವೆ. ನಿಮಗೆ ತಿಳಿದಿರಲಿ, ಕಲ್ಲಂಗಡಿ ಹಣ್ಣು ಇತರೆ ಹಣ್ಣುಗಳಿಗಿಂತ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿ ಶ್ರೀಮಂತವಾಗಿದೆ.
ಕಲ್ಲಂಗಡಿಯ ಬಗ್ಗೆ ನಿಮಗೆ ತಿಳಿಯದ ವಿಷಯಗಳನ್ನು ಇಲ್ಲಿ ನೀಡಲಾಗಿದೆ ಓದಿ.
ಕಲ್ಲಂಗಡಿ ಸಿಟ್ರುಲಿನ್ ಎಂಬ ಅಮೈನೋ ಆಮ್ಲವನ್ನು ಹೊಂದಿದ್ದು, ಶ್ರೀಮಂತವಾಗಿದೆ. ಇದು ನಿಮ್ಮ ದೇಹದ ಮೂಲಕ ರಕ್ತವನ್ನು ಚಲಿಸಲು ಸಹಾಯ ಮಾಡುತ್ತದೆ. ಅಲ್ಲದೆ, ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಲೈಕೋಪೀನ್ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳು ಸಾಬೀತು ಪಡಿಸಿವೆ.
ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಹೃದಯದ ಅಪಾಯದಿಂದಾಗಿ ಸಾಕಷ್ಟು ಮಂದಿ ಬಲಿಯಾಗುತ್ತಿದ್ದಾರೆ. ಹೃದಯದ ಸಮಸ್ಯೆಯಿಂದ ಪಾರಾಗಲು ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡಿ.
ಬೇಸಿಗೆಯ ಕಾಲದಲ್ಲಿ ದೇಹವನ್ನು ಹೈಡ್ರೇಟ್ ಮಾಡಲು ಕಲ್ಲಂಗಡಿಗಿಂತ ಅತ್ಯುತ್ತಮವಾದ ಹಣ್ಣು ಬೇರೊಂದಿಲ್ಲ ಎಂದೇ ಹೇಳಬಹುದು. ಏಕೆಂದರೆ ಹೆಚ್ಚಿನ ನೀರಿನ ಅಂಶವಿರುವ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ನೀರನ್ನು ಪಡೆಯಲು ಸಹಾಯ ಮಾಡುತ್ತದೆ.
ಕಲ್ಲಂಗಡಿಯಲ್ಲಿ ಸುಮಾರು 92% ನೀರನ್ನು ಒಳಗೊಂಡಿರುತ್ತದೆ. ಇಷ್ಟೇ ಅಲ್ಲ, ಹೆಚ್ಚಿನ ನೀರಿನ ಅಂಶದಿಂದಾಗಿ ಕಡಿಮೆ ಕ್ಯಾಲೋರಿಯನ್ನು ಹೊಂದಿದೆ. ಇದು ನಿಮ್ಮ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ.
ಕಲ್ಲಂಗಡಿಯಲ್ಲಿರುವ ಉತ್ಕರ್ಷಣ ನಿರೋಧಕಗಳು, ಲೈಕೋಪೀನ್ ಮತ್ತು ವಿಟಮಿನ್ ಸಿ ಸಂಯೋಜನೆಯು ಉರಿಯೂತ ಮತ್ತು ಆಕ್ಸಿಡೇಟಿವ್ ಹಾನಿಯನ್ನು ಕಡಿಮೆ ಮಾಡುತ್ತದೆ. ಕಲ್ಲಂಗಡಿ ಹಣ್ಣು ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳು ತಿಳಿಸುತ್ತವೆ. ಯಾರೆಲ್ಲಾ ಒತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆಯೋ ಅಂತವರು ಕಲ್ಲಂಗಡಿ ಹಣ್ಣು ಪ್ರತಿನಿತ್ಯ ನಿಯಮಿತವಾಗಿ ಸೇವನೆ ಮಾಡಿ.
ಕಲ್ಲಂಗಡಿಯಲ್ಲಿ ಕಂಡು ಬರುವ ಅಮೈನೋ ಆಮ್ಲವಾದ ಸಿಟ್ರುಲಿನ್, ವ್ಯಾಯಾಮದ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ಇನ್ನು ಇದು ಸ್ನಾಯು ನೋವನ್ನು ಗುಣಪಡಿಸುತ್ತದೆ.
ಕಲ್ಲಂಗಡಿಯು ಬೀಟಾ ಕ್ರಿಪ್ಟೋಕ್ಸಾಂಥಿನ್ ಎಂಬ ನೈಸರ್ಗಿಕ ವರ್ಣದ್ರವ್ಯವನ್ನು ಹೊಂದಿದ್ದು, ಅದು ನಿಮ್ಮ ಕೀಲುಗಳನ್ನು ಉರಿಯೂತದಿಂದ ರಕ್ಷಿಸುತ್ತದೆ. ಭವಿಷ್ಯದಲ್ಲಿ ಪಡೆಯುವ ಸಂಧಿವಾತವನ್ನು ಕಡಿಮೆ ಮಾಡುತ್ತದೆ ಎಂದು ಕೆಲವು ಅಧ್ಯಯನಗಳು ತೋರಿಸುತ್ತವೆ.
ಕಲ್ಲಂಗಡಿಯಲ್ಲಿರುವ ವಿಟಮಿನ್ ಎ, ಬಿ 6 ಮತ್ತು ಸಿ ಚರ್ಮವನ್ನು ಮೃದು ಮತ್ತು ನಯವಾಗಿರುವಂತೆ ಮಾಡುತ್ತದೆ. ಈ ಹಣ್ಣು 92% ರಷ್ಟು ನೀರಿನಿಂದ ಕೂಡಿರುವುದರಿಂದ ದೇಹವನ್ನು ಹೈಡ್ರೇಟ್ ಮಾಡುತ್ತದೆ. ಶುಷ್ಕ ಚರ್ಮವನ್ನು ಒಳಗಿನಿಂದ ಮತ್ತು ಹೊರಗಿನಿಂದ ನಿರ್ಮೂಲನೆ ಮಾಡುತ್ತದೆ.
ಕಲ್ಲಂಗಡಿಯನ್ನು ನಿಮ್ಮ ಚರ್ಮಕ್ಕೂ ಅನ್ವಯಿಸಬಹುದು. ಈ ಹಣ್ಣಿನ ಸೇವನೆಯು ನಿಮ್ಮ ದೇಹವು ಕಾಲಜನ್ ಅನ್ನು ತಯಾರಿಸಲು ಸಹಾಯ ಮಾಡುತ್ತದೆ. ಹಾಗಾಗಿ ಇದು ನಿಮ್ಮ ಕೂದಲು ಮತ್ತು ಚರ್ಮಕ್ಕೆ ಬಹಳ ಒಳ್ಳೆಯದು. ಮುಖ್ಯವಾಗಿ ಒಣ ಮತ್ತು ಸುಕ್ಕುಗಳಿಂದ ಕೂಡಿದ ಚರ್ಮಕ್ಕೆ ಕಲ್ಲಂಗಡಿ ಹಣ್ಣು ಉತ್ತಮ.
ಈಗಾಗಲೇ ಹೇಳಿದಂತೆ ಕಲ್ಲಂಗಡಿ ಸಾಕಷ್ಟು ನೀರು ಮತ್ತು ಸಣ್ಣ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ. ಇವೆರಡೂ ಆರೋಗ್ಯಕರವಾದ ಜೀರ್ಣಕ್ರಿಯೆಗೆ ಅವಶ್ಯಕವಾಗಿದೆ.
ಫೈಬರ್ ನಿಮ್ಮ ಕರುಳನ್ನು ನಿಯಮಿತವಾಗಿ ಇರಿಸಲು ಸಹಾಯ ಮಾಡುತ್ತದೆ. ಆದರೆ ನೀರು ನಿಮ್ಮ ಜೀರ್ಣಾಂಗಗಳ ಮೂಲಕ ತ್ಯಾಜ್ಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಚಲಿಸುತ್ತದೆ.
ಕಲ್ಲಂಗಡಿ ಸುಮಾರು 80 ರಷ್ಟು ಗ್ಲೈಸೆಮಿಕ್ ಇಂಡೆಕ್ಸ್ ಮೌಲ್ಯವನ್ನು ಹೊಂದಿದೆ. ಹಾಗಾಗಿ ಮಧುಮೇಹ ಹೊಂದಿರುವವರು ನಿಸ್ಸಂದೇಹವಾಗಿ ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡಬಹುದು. ಇದರಿಂದ ಯಾವುದೇ ಕಾರಣಕ್ಕೂ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುವುದಿಲ್ಲ.
Outstanding Health Benefits Of Watermelon In Kannada
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm