ಬ್ರೇಕಿಂಗ್ ನ್ಯೂಸ್
06-03-22 11:10 pm Source: Vijayakarnataka ಡಾಕ್ಟರ್ಸ್ ನೋಟ್
ಮೊಸರು ಹೊಟ್ಟೆಯನ್ನು ತಂಪಾಗಿಸುವ ಆಹಾರಗಳಲ್ಲಿ ಒಂದಾಗಿದೆ. ಇದು ದೇಹವನ್ನು ತಂಪಾಗಿಸುತ್ತದೆ. ಬೇಸಿಗೆಕಾಲದಲ್ಲಿ ಇದಕ್ಕಿಂತ ಸೂಕ್ತವಾದುದು ಬೇರೊಂದಿಲ್ಲ. ಸಾಕಷ್ಟು ಮಂದಿಯಲ್ಲಿ ಕಾಣಿಸುವ ಆಮ್ಲೀಯತೆ ಮತ್ತು ಹೊಟ್ಟೆಯ ಉರಿಯುವಿಕೆಯನ್ನು ಮೊಸರು ಕಡಿಮೆ ಮಾಡುತ್ತದೆ.
ಆಯುರ್ವೇದಲ್ಲಿ ಮೊಸರು ತನ್ನದೇ ಆದ ಸ್ಥಾನವನ್ನು ಹೊಂದಿದೆ. ಮೊಸರನ್ನು ಸಕ್ಕರೆಯ ಜೊತೆ ಸೇರಿಸಿ ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ಲಾಭಗಳನ್ನು ಪಡೆಯಬಹುದು.
ಮೊಸರಿನಲ್ಲಿ ಕ್ಯಾಲ್ಸಿಯಂ, ವಿಟಮಿನ್ ಬಿ 2, ವಿಟಮಿನ್ ಬಿ 12, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್‌ನಂತಹ ಅನೇಕ ಪ್ರಮುಖವಾದ ಪೋಷಕಾಂಶಗಳನ್ನು ಒಳಗೊಂಡಿದೆ. ಸಾಕಷ್ಟು ಮಂದಿ ಮೊಸರು ಸೇವನೆ ಮಾಡದೇ ಹೋದರೆ ಅವರ ಊಟ ಪೂರ್ಣಗೊಳ್ಳುವುದಿಲ್ಲ. ಮೊಸರು ಸೇವನೆ ಮಾಡುವುದರಿಂದ ಆಗುವ ಆರೋಗ್ಯ ಲಾಭಗಳ ಬಗ್ಗೆ ಮಾಹಿತಿ ಇಲ್ಲಿದೆ ಓದಿ.
ಮಕ್ಕಳಿಗೆ ಒಳ್ಳೆಯದು
ಮೊಸರು ದೇಹ ಮತ್ತು ಮನಸ್ಸಿನ ಮೇಲೆ ತಂಪಾಗಿಸುವ ಮತ್ತು ಹಿತವಾದ ಪರಿಣಾಮವನ್ನು ಬೀರುವುದರಿಂದ ಮಕ್ಕಳಿಗೆ ಮೊಸರನ್ನು ಸಕ್ಕರೆಯೊಂದಿಗೆ ಮಿಶ್ರಣ ಮಾಡಿ ನೀಡಬಹುದು.
ಅಲ್ಲದೆ, ಮೊಸರು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ವಾಸ್ತವವಾಗಿ, ಮೊಸರು ಪ್ರೋಬಯಾಟಿಕ್ ಆಗಿದ್ದು, ಬ್ಯಾಕ್ಟೀರಿಯಾಗಳು ಕರುಳಿನ ಚಟುವಟಿಕೆಯನ್ನು ಸುಧಾರಿಸಲು ಮತ್ತು ಉರಿಯೂತದ ಜೀರ್ಣಾಂಗ ವ್ಯವಸ್ಥೆಯನ್ನು ಶಮನಗೊಳಿಸಲು ಸಹಾಯ ಮಾಡುತ್ತದೆ. ಒಟ್ಟಾರೆ ಮೊಸರು ಹೊಟ್ಟೆಯ ಅಸ್ವಸ್ಥತೆಗೆ ಬಹಳ ಉತ್ತಮವಾಗಿದೆ.
ಬಲವಾದ ರೋಗ ನಿರೋಧಕ ಶಕ್ತಿ
ಮೊಸರಿನಲ್ಲಿರುವ ಪೋಷಕಾಂಶಗಳು ರೋಗ ಉಂಟು ಮಾಡುವ ಸೂಕ್ಷ್ಮಜೀವಿಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದು ನಿಮ್ಮ ಕರುಳು ಮತ್ತು ಕರುಳಿನ ಪ್ರದೇಶವನ್ನು ರಕ್ಷಿಸುತ್ತದೆ. ಪ್ರಸ್ತುತದ ಸಾಂಕ್ರಾಮಿಕ ಸೋಂಕುಗಳ ಮಧ್ಯೆ ಬಲವಾದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಬಹಳ ಮುಖ್ಯ. ಹಾಗಾಗಿ ಪ್ರತಿನಿತ್ಯ ಮೊಸರನ್ನು ನಿಯಮಿತವಾಗಿ ಸೇವನೆ ಮಾಡಿ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ಇದಕ್ಕೆ ಪುಷ್ಠಿ ನೀಡುವಂತೆ ಅನೇಕ ಅಧ್ಯಯನಗಳು ಕೂಡ ಮೊಸರು ಬಲವಾದ ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ ಎಂದು ಹೇಳುತ್ತವೆ.
ಸುಂದರವಾದ ಚರ್ಮಕ್ಕೆ ಮೊಸರು
ಮೊಸರು ಕೇವಲ ಆರೋಗ್ಯದ ಅನೇಕ ಸಮಸ್ಯೆಗಳಿಗೆ ಮಾತ್ರ ಚಿಕಿತ್ಸೆ ನೀಡುವುದಿಲ್ಲ. ಬದಲಾಗಿ ಸುಂದರವಾದ ಮೈ ಕಾಂತಿಗೂ ಕೂಡ ಸಹಾಯ ಮಾಡುತ್ತದೆ. ಮುಖ್ಯವಾಗಿ ಮೊಸರು ನಿಮ್ಮ ಚರ್ಮದ ಮೇಲೆ ಆರ್ಧ್ರಕ ಪರಿಣಾಮವನ್ನು ಬೀರುತ್ತದೆ. ಇದು ನಿಮ್ಮ ಶುಷ್ಕ ಚರ್ಮವನ್ನು ನೈಸರ್ಗಿಕವಾಗಿ ಗುಣಪಡಿಸುತ್ತದೆ.
ನಿಮಗೆ ತಿಳಿದಿರಲಿ, ಕೆಲವು ಜಠರ ಸಮಸ್ಯೆಗಳಿಂದಾಗಿ ಬಹಳಷ್ಟು ಜನರು ಮೊಡವೆಗಳಿಂದ ಬಳಲುತ್ತಿರುತ್ತಾರೆ. ಇದು ಕರುಳಿನ ಚಲನೆಯನ್ನು ಸಕ್ರಿಯಗೊಳಿಸಿ, ಆರೋಗ್ಯಕರವಾದ ಚರ್ಮಕ್ಕೆ ಕಾರಣವಾಗುತ್ತದೆ.
ನೀವು ಹಚ್ಚುವ ಫೇಸ್ ಪ್ಯಾಕ್‌ಗಳಲ್ಲಿ ಮೊಸರನ್ನು ಬಳಸಿ. ಇದರಲ್ಲಿ ಲ್ಯಾಕ್ಟಿಕ್ ಆಮ್ಲ ಶ್ರೀಮಂತವಾಗಿದ್ದು, ಇದು ಎಕ್ಸ್‌ಫೋಲಿಯೇಟರ್ ಆಗಿ ಕಾರ್ಯ ನಿರ್ವಹಿಸುತ್ತದೆ. ಇನ್ನು ಸತ್ತ ಜೀವಕೋಶಗಳಿಗೆ ಚಿಕಿತ್ಸೆ ನೀಡಿ, ಚರ್ಮದ ಮೇಲಿರುವ ಕಲೆಯನ್ನು ಶಮನಗೊಳಿಸುತ್ತದೆ.
ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ
ಕೆಲವು ಅಧ್ಯಯನಗಳ ಪ್ರಕಾರ, ಕೊಬ್ಬಿನಿಂದ ಕೂಡಿರುವ ಮೊಸರನ್ನು ಸೇವಿಸುವ ಜನರು ಇತರರಿಗಿಂತ ಅಧಿಕ ರಕ್ತದೊತ್ತಡವನ್ನು ಅಭಿವೃದ್ಧಿ ಪಡಿಸುವ ಸಾಧ್ಯತೆ 31% ಕಡಿಮೆ ಹೊಂದಿರುತ್ತಾರೆ ಎಂದು ತಿಳಿದು ಬಂದಿದೆ.
ಇದರಲ್ಲಿರುವ ಪ್ರೋಟೀನ್‌ಗಳು, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್‌ನಂತಹ ಪೋಷಕಾಂಶಗಳು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಿಂದ ಆರೋಗ್ಯಕರವಾದ ಹೃದಯವನ್ನು ಉತ್ತೇಜಿಸುತ್ತದೆ.
ಮೂಳೆಗಳನ್ನು ಬಲಿಷ್ಠಗೊಳಿಸುತ್ತದೆ
ಮೊಸರು ಮೂಳೆಗಳನ್ನು ಬಲಿಷ್ಠಗೊಳಿಸಲು ತನ್ನದೇ ಆದ ಪಾತ್ರ ವಹಿಸುತ್ತದೆ. ಏಕೆಂದರೆ ಇದರಲ್ಲಿ ಕ್ಯಾಲ್ಸಿಯಂ ಶ್ರೀಮಂತವಾಗಿದೆ. ದೈನಂದಿನ ಆಹಾರದಲ್ಲಿ ಸ್ವಲ್ಪ ಕ್ಯಾಲ್ಸಿಯಂ ಸೇವನೆ ಮಾಡುವುದರಿಂದ ಮೂಳೆ ಸಾಂದ್ರತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮೊಸರಿನಲ್ಲಿ ಕೊಬ್ಬು ಮತ್ತು ಕ್ಯಾಲೋರಿಗಳು ಕಡಿಮೆ ಇರುವುದರಿಂದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.
Amazing Health Benefits Of Curd In Kannada.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am