ದೊಡ್ಡಪತ್ರೆ ಆರೋಗ್ಯ ಗುಣವೂ ಬಲು ದೊಡ್ಡದು

27-04-22 08:20 pm       Source: Vijayakarnataka   ಡಾಕ್ಟರ್ಸ್ ನೋಟ್

ಆರೋಗ್ಯ ಉತ್ತಮಗೊಳಿಸುವ ಸಸ್ಯಗಳಲ್ಲಿ ದೊಡ್ಡ ಪತ್ರೆ ಗಿಡ ಮುಂಚೂಣಿಯಲ್ಲಿ ಸಿಗುತ್ತದೆ.

ಮನೆಯ ಹಿತ್ತಲಿನಲ್ಲಿರುವ ಅದೆಷ್ಟೋ ಸಸ್ಯಗಳು ಸಾಮಾನ್ಯ ಕಾಯಿಲೆಗಳಿಗೆ ಪರಿಣಾಮಕಾರಿ ಪರಿಹಾರವನ್ನು ನೀಡುತ್ತದೆ. ಹೂವಿನ ಗಿಡಗಳ ನಡುವೆಯೇ ಬೆಳೆದು ಆರೋಗ್ಯ ವೃದ್ಧಿಸುವ ಕೆಲಸ ಮಾಡುವ ಪುಟ್ಟ ಪುಟ್ಟ ಗಿಡಗಳ ಆರೋಗ್ಯ ಗುಣ ಮಾತ್ರ ಬಹು ದೊಡ್ಡದು. ಅದರಲ್ಲಿ ದೊಡ್ಡ ಪತ್ರೆ ಗಿಡ ಕೂಡ ಒಂದು. ಸಾಮಾನ್ಯವಾಗಿ ಎಲ್ಲರ ಮನೆಯ ಹಿತ್ತಲಿನಲ್ಲಿ ಈ ದೊಡ್ಡ ಪತ್ರೆ ಗಿಡ ಕಂಡು ಬರುತ್ತದೆ. ಇದನ್ನು ಪುಟ್ಟ ಪಾಟ್‌ನಲ್ಲಿಯೂ ಇಟ್ಟು ಬೆಳೆಸಬಹುದಾಗಿದೆ. ಇದನ್ನು ಸಾಂಬಾರ ಸೊಪ್ಪು ಅಥವಾ ಅಜವನ ಗಿಡ ಎಂದೂ ಕರೆಯುತ್ತಾರೆ.

ಇದು ಸಾಮಾನ್ಯ ಶೀತ, ಜ್ವರಕ್ಕೆ ಉತ್ತಮ ಮನೆಮದ್ದಾಗಿದೆ. ಆರೋಗ್ಯ ಹದಗೆಟ್ಟ ತಕ್ಷಣ ಆಸ್ಪತ್ರೆಗೆ ಓಡುವ ಬದಲು ಒಮ್ಮೆ ಮನೆಯ ಹಿತ್ತಲಿನಲ್ಲಿ ಕಣ್ಣಾಡಿಸಿ, ಅಥವಾ ಆಯುರ್ವೇದ ವೈದ್ಯರನ್ನು ಒಮ್ಮೆ ಸಂಪರ್ಕಿಸಿ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಮನೆಯಲ್ಲೇ ಸಿಗುವ ಪದಾರ್ಥಗಳಿಂದ ಹೇಗೆ ಅನಾರೋಗ್ಯವನ್ನು ಸರಿಪಡಿಸಿಕೊಳ್ಳುವುದು ಎಂದು ಹೇಳುತ್ತಾರೆ. ಈಗ ಈ ದೊಡ್ಡ ಪತ್ರೆ ಸೊಪ್ಪು ಯಾವೆಲ್ಲಾ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ ಎನ್ನುವ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ ಇಲ್ಲಿದೆ ನೋಡಿ.

ಕಫ, ಶೀತಕ್ಕೆ ಬೆಸ್ಟ್‌

ಶೀತ ಮತ್ತು ಕೆಮ್ಮಿಗೆ ಸುಲಭ ಪರಿಹಾರಗಳು-Home Remedies For Cold And Cough-Kannada

  • ಸಾಮಾನ್ಯವಾಗಿ ಆಹಾರ ಸೇವನೆಯಲ್ಲಿ ಬದಲಾವಣೆ, ಹವಾಮಾನದಲ್ಲಿನ ವ್ಯತ್ಯಾಸದಿಂದ ಶ್ವಾಸಕೋಶದಲ್ಲಿ ಕಫ ಕಟ್ಟಿಕೊಳ್ಳುತ್ತದೆ. ಇದರಿಂದ ಶೀತವಾದರೆ ಎಷ್ಟು ದಿನವಾದರೂ ಕಡಿಮೆಯಾಗುವುದಿಲ್ಲ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆಮದ್ದಾಗಿದೆ. ಇನ್ನಂತೂ ಮಾವಿನ ಹಣ್ಣಿನ ಸೀಸನ್‌ ಆರಂಭವಾಗುತ್ತದೆ. ಹೀಗಾಗಿ ಕಫ, ಶೀತ ಸಾಮಾನ್ಯವಾಗಿರುತ್ತದೆ. ಚಿಕ್ಕ ಮಕ್ಕಳಿಗೂ ಕೂಡ ಈ ದೊಡ್ಡ ಪತ್ರೆ ಸೊಪ್ಪನ್ನು ಔಷಧವಾಗಿ ಬಳಸಬಹುದಾಗಿದೆ.
  • ದೊಡ್ಡ ಪತ್ರೆ ಸೊಪ್ಪನ್ನು ಕೊಯ್ದು ತಂದು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೆ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ.
  • ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಗೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ. ಮಕ್ಕಳಿಗೆ ಇದು ಬೆಸ್ಟ್‌ ಔಷಧವಾಗಿದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ

How to increase immunity amid Coronavirus: Immunity boosting tips for vegans

  • ದೊಡ್ಡ ಪತ್ರೆಯಲ್ಲಿ ವಿಟಮಿನ್‌ ಸಿ, ಫೈಬರ್‌ ಮತ್ತು ಕ್ಯಾಲ್ಸಿಯಂ ಗುಣ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಗೊಳಿಸಲು ಸಹಾಯ ಮಾಡುತ್ತದೆ.
  • ಕೀಟಗಳು ಕಚ್ಚಿದಾಗ ಕೆಂಪು ಗುಳ್ಳೆಗಳು ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಉರಿ, ಬಾವು ಕಾಣಿಸಿಕೊಳ್ಳುತ್ತದೆ. ದೊಡ್ಡ ಪತ್ರೆ ರಸವನ್ನು ತೆಗೆದು ಕೀಟಕಚ್ಚಿದ ಜಾಗದಲ್ಲಿ ಹಚ್ಚಿದರೆ ಗಂಟೆಗಳೊಳಗೆ ಶಮನವಾಗುತ್ತದೆ.
  • ದೊಡ್ಡ ಪತ್ರೆ ಸೊಪ್ಪನ್ನು ಚಟ್ನಿ, ತಂಬುಳಿ ಅಥವಾ ಕರಕಲಿ ಮಾಡುವ ಮೂಲಕ ಸೇವಿಸಬಹುದಾಗಿದೆ. ಅಲ್ಲದೆ ದೋಸೆ ಮಾಡುವಾಗಲೂ ದೊಡ್ಡ ಪತ್ರೆ ಎಲೆಯನ್ನು ಬಳಸಬಹುದಾಗಿದೆ. ಇದು ಹೆಚ್ಚು ರುಚಿಯೊಂದಿಗೆ ಆರೋಗ್ಯವನ್ನೂ ವೃದ್ಧಿಸುತ್ತದೆ.

ಮಲಬದ್ಧತೆ ಸಮಸ್ಯೆಗೆ ಪರಿಹಾರ

This seed will give instant relief from the problem of constipation |  Health Tips: ಈ ಬೀಜವು ಮಲಬದ್ಧತೆ ಸಮಸ್ಯೆಗೆ ತ್ವರಿತ ಪರಿಹಾರ ನೀಡುತ್ತದೆLifestyle  News in Kannada

  • ದೊಡ್ಡ ಪತ್ರೆಯ ಗಿಡದ ಎಲೆಯನ್ನು ತಂದು ಬಾಡಿಸಿ ರಸ ತೆಗೆದು ಜೇನುತುಪ್ಪ ಸೇರಿಸಿ ಕುಡಿದರೆ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.
  • ಅರಿಸಿನ ಕಾಮಾಲೆ ಇದ್ದವರಿಗೂ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆ ಮದ್ದಾಗಿದೆ. ಈ ಎಲೆಯನ್ನು ಆಹಾರ ರೂಪದಲ್ಲಿ ಅಂದರೆ ಚಟ್ನಿ, ತಂಬುಳಿ ಮಾಡಿ ಸೇವಿಸಿದರೆ ಕೆಲವೇ ದಿನಗಳಲ್ಲಿ ಕಾಯಿಲೆ ಚೇತರಿಕೆಯನ್ನು ಕಾಣುತ್ತದೆ.
  • ಕಂಬಳಿ ಹುಳ, ಇಸುಬು ಇಂತಹ ಕೀಟಗಳು ಕಚ್ಚಿದ್ದರೆ ಸಹಿಸಲಾರದ ಉರಿ ಚರ್ಮಕ್ಕಾಗುತ್ತದೆ. ಇದನ್ನು ತಡೆಯಲು ಈ ದೊಡ್ಡ ಪತ್ರೆ ಸೊಪ್ಪು ಸಹಾಯಕವಾಗಿದೆ.

ರಕ್ತ ಶುದ್ದಿ ಮಾಡುತ್ತದೆ

ದೇಹದ ರಕ್ತ ಶುದ್ಧೀಕರಿಸುವ ಇಂತಹ ಆಹಾರಗಳನ್ನು ದಿನಾ ಮಿಸ್ ಮಾಡದೇ ಸೇವಿಸಿ | Consume  this foods daily to purify blood naturally - Kannada BoldSky

ಆರೋಗ್ಯ ಸಮಸ್ಯೆಗೆ ರಕ್ತ ಮಲೀನವಾಗುವುದು ಕೂಡ ಒಂದು ಕಾರಣವಾಗುತ್ತದೆ. ರಕ್ತಶುದ್ಧಿಯಾದಾಗ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕೂಡ ಹೆಚ್ಚುತ್ತದೆ. ಆ ಕೆಲಸವನ್ನು ದೊಡ್ಡ ಪತ್ರೆ ಸೊಪ್ಪು ಮಾಡುತ್ತದೆ. ದೊಡ್ಡ ಪತ್ರೆ ಎಲೆಯ ರಸಕ್ಕೆ ಬೆಲ್ಲ ಸೇರಿಸಿ ಕುಡಿದಾಗ ಬೆಲ್ಲ ಕೂಡ ದೇಹಕ್ಕೆ ಒಳ್ಳೆಯ ಪದಾರ್ಥವಾಗಿದೆ. ಇದು ದೇಹದಿಂದ ವಿಷಯುಕ್ತ ಪದಾರ್ಥವನ್ನು ಹೊರಹಾಕಲು ನೆರವಾಗುತ್ತದೆ.ಆದ್ದರಿಂದ ನಿಮ್ಮ ಮನೆಯ ಹಿತ್ತಲಿನಲ್ಲಿ ದೊಡ್ಡ ಪತ್ರೆ ಸೊಪ್ಪಿದ್ದರೆ ಜೋಪಾನ ಮಾಡಿ ಉಳಿಸಿಕೊಳ್ಳಿ. ಆರೋಗ್ಯ ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಅಜೀರ್ಣತೆ ನಿವಾರಿಸುತ್ತದೆ

ಮಲಬದ್ಧತೆ ಸಮಸ್ಯೆಗೆ ಸುಲಭ ಪರಿಹಾರಗಳು. - ಕನ್ನಡ ಸಂಪದ

ಗಟ್ಟಿ ಆಹಾರಗಳ ಸೇವನೆ ಮಾಡಿದಾಗ ಬೇಗನೆ ಜೀರ್ಣವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಅಜೀರ್ಣತೆ ಉಂಟಾಗುತ್ತದೆ. ಇದರಿಂದ ಹೊಟ್ಟೆ ನೋವು, ವಾಂತಿಯಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ದಿನ ಕಳೆಯುವುದರೊಳಗೆ ಪರಿಹಾರ ನೀಡುತ್ತದೆ. ಅದರ ಎಲೆಯನ್ನು ಉಪ್ಪಿನೊಂದಿಗೆ ಸೇರಿಸಿ ಜಗಿದು ರಸವನ್ನು ನುಂಗಿದರೆ ಜೀರ್ಣಶಕ್ತಿ ಉತ್ತಮವಾಗುತ್ತದೆ. ತಿಂದ ಆಹಾರಗಳು ಸರಿಯಾಗಿ ಜೀರ್ಣ ಮಾಡಲು ಸಹಾಯ ಮಾಡುತ್ತದೆ.ಗ್ಯಾಸ್ಟ್ರಿಕ್‌ ಸಮಸ್ಯೆಗೆ ದೊಡ್ಡ ಪತ್ರೆ ಉತ್ತಮ ಮನೆಮದ್ದಾಗಿದೆ. ಉಪ್ಪಿನೊಂದಿಗೆ ಎಲೆಯನ್ನು ತಿಂದಾಗ ಗ್ಯಾಸ್ಟ್ರಿಕ್‌ ಸಮಸ್ಯೆ ಶಮನವಾಗುತ್ತದೆ.

Know The Health Benefits Of Mexican Mint.