ಬ್ರೇಕಿಂಗ್ ನ್ಯೂಸ್
24-08-20 10:56 pm Headline Karnataka News Network ಲೀಡರ್ಸ್ ರಿಪೋರ್ಟ್
ಮಂಗಳೂರು, ಆಗಸ್ಟ್ 24: ಮರವೂರು ಕಿಂಡಿ ಅಣೆಕಟ್ಟಿನಿಂದ ಕಂದಾವರ ಭಾಗದಲ್ಲಿ ಕೃಷಿ ಮತ್ತು ಜನವಸತಿ ಪ್ರದೇಶಗಳಿಗೆ ನೀರು ನುಗ್ಗುತ್ತಿರುವ ಸಮಸ್ಯೆಗೆ ಪರಿಹಾರ ರೂಪಿಸಲು ತಜ್ಞರ ಸಮಿತಿಯನ್ನು ರಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಅವರು ಸೋಮವಾರ ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮರವೂರು ಅಣೆಕಟ್ಟಿನ ಹಿನ್ನೀರಿನ ಪ್ರದೇಶದ ಆಸುಪಾಸಿನಲ್ಲಿರುವ ಕಂದಾವರ, ಅದ್ಯಪಾಡಿ ಪ್ರದೇಶಗಳ ನೂರಾರು ಎಕರೆ ಕೃಷಿ ಭೂಮಿಗಳಲ್ಲಿ ಕಳೆದ ಕೆಲವು ವರ್ಷಗಳಿಂದ ನದಿ ನೀರು ನಿಲ್ಲುತ್ತಿರುವ ಬಗ್ಗೆ ಸ್ಥಳೀಯರಿಂದ ಹಲವು ಅಹವಾಲುಗಳು ಬಂದಿವೆ. ಈ ನಿಟ್ಟಿನಲ್ಲಿ ಸಮಸ್ಯೆಗೆ ಪರಿಹಾರ ಒದಗಿಸಲು ತಾಂತ್ರಿಕ ನಿಪುಣರು, ಇಂಜಿನಿಯರಿಂಗ್ ಅಧಿಕಾರಿಗಳು ಹಾಗೂ ಸ್ಥಳೀಯರನ್ನೊಳಗೊಂಡ ಸಮಿತಿಯನ್ನು ಜಿಲ್ಲಾಧಿಕಾರಿಗಳು ರಚಿಸಿ, ಈ ಸಮಸ್ಯೆಗೆ ಪರಿಹಾರ ನೀಡಲು ಪ್ರಯತ್ನಿಸಲಾಗುವುದು. ಸಮಿತಿಯು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಯೋಜನಾ ವರದಿ ಜಿಲ್ಲಾಡಳಿತಕ್ಕೆ ಸಲ್ಲಿಸಲಿದೆ ಎಂದು ಸಚಿವರು ತಿಳಿಸಿದರು.
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಮರವೂರು ಡ್ಯಾಂ ನಿಂದಾಗಿ ಕಂದಾವರ ಪ್ರದೇಶದ ನೂರಾರು ಎಕರೆ ಕೃಷಿ ಪ್ರದೇಶಗಳಲ್ಲಿ ನೀರು ನಿಲ್ಲುತ್ತಿರುವುದರಿಂದ ಸ್ಥಳೀಯರು ಸಂಕಷ್ಟಕ್ಕೀಡಾಗಿದ್ದಾರೆ. ಅಡಿಕೆ, ತೆಂಗು ಸೇರಿದಂತೆ ತೋಟಗಳಿಗೆ ನೀರು ನುಗ್ಗುತ್ತಿವೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯಪಾಲಕ ಅಭಿಯಂತರ ನರೇಂದ್ರ, ಎನ್‍ಐಟಿಕೆ ತಂತ್ರಜ್ಞ ಮಯ್ಯ, ಕಂದಾವರ ಸ್ಥಳೀಯ ಪ್ರತಿನಿಧಿಗಳು, ರೈತ ಮುಖಂಡರು ಉಪಸ್ಥಿತರಿದ್ದರು.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm