ಕುತೂಹಲ ಮೂಡಿಸಿದ ಎಚ್‌ಡಿಕೆ – ಬಿಎಸ್‌ವೈ ಭೇಟಿ !!

11-09-20 03:46 pm       Bangalore Correspondent   ಲೀಡರ್ಸ್ ರಿಪೋರ್ಟ್

ಮೈತ್ರಿ ಸರ್ಕಾರ ಪತನವಾದ ಬಳಿಕ ಮೊದಲ ಬಾರಿಗೆ ಭೇಟಿ ಮಾಡಿದ ಎಚ್‌ಡಿಕೆ – ಬಿಎಸ್‌ವೈ.

ಬೆಂಗಳೂರು, ಸಪ್ಟೆಂಬರ್ 11: ಕ್ಷಿಪ್ರ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ. ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ದಾಸರಹಳ್ಳಿಯಲ್ಲಿ ಇತ್ತೀಚೆಗೆ ಬಿದ್ದ ಭಾರಿ ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಮೈತ್ರಿ ಸರ್ಕಾರ ಪತನವಾದ ಬಳಿಕ ಇದೇ ಮೊದಲ ಬಾರಿಗೆ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಭೇಟಿ ಆಗಿದ್ದಾರೆ. ಇಬ್ಬರೂ ನಾಯಕರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.

ಇದಕ್ಕೆ ಕೆಲವರು ರಾಜಕೀಯ ಬಣ್ಣ ನೀಡಿದರೂ, ರಾಜಕೀಯದ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ತಕ್ಷಣವೇ ಆಗಬೇಕಾಗಿರುವ ಕೆಲಸಗಳು ಮತ್ತು ರಾಮನಗರ ಕ್ಷೇತ್ರಕ್ಕೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಮಾತುಕತೆಗೆ ಬಂದಿದ್ದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಮಂಜುನಾಥ್‌ ಅವರೂ ಕುಮಾರಸ್ವಾಮಿ ಜತೆಗಿದ್ದರು. ನಗರದಲ್ಲಿ ಮಂಜುನಾಥ್‌ ಜೆಡಿಎಸ್‌ನಿಂದ ಗೆದ್ದಿರುವ ಏಕೈಕ ಶಾಸಕ.

Join our WhatsApp group for latest news updates