ಬ್ರೇಕಿಂಗ್ ನ್ಯೂಸ್
26-05-22 04:49 pm Udupi Correspondent ಕರಾವಳಿ
ಉಡುಪಿ, ಮೇ 26 : ಮೂರು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪಿದ ಪ್ರಕರಣದಲ್ಲಿ ಭಾರೀ ಟ್ವಿಸ್ಟ್ ಸಿಕ್ಕಿದ್ದು ಯುವತಿ ಸಾವಿಗೆ ಲವ್ ಜಿಹಾದ್ ಕಾರಣ ಎನ್ನುವ ಆರೋಪ ಕೇಳಿಬಂದಿದೆ.
ಕುಂದಾಪುರ ತಾಲೂಕಿನ ಉಪ್ಪಿನಕುದ್ರು ನಿವಾಸಿ ಶಿಲ್ಪಾ (25) ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದು ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು. ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶಿಲ್ಪಾಗೆ ಅಜೀಜ್ (32) ಎಂಬಾತನನ್ನು ಪ್ರೀತಿಸುತ್ತಿದ್ದು ಆತನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಅಜೀಜ್ ಗೆ ಈ ಮೊದಲೇ ಒಂದು ಮದುವೆಯಾಗಿದ್ದು ಮಕ್ಕಳನ್ನು ಹೊಂದಿದ್ದಾನೆ. ಈ ಹಿಂದೆ ಶಿಲ್ಪಾ ಟ್ಯುಟೋರಿಯಲ್ ಹೋಗುತ್ತಿದ್ದ ವೇಳೆ ಅಜೀಜ್ ಪರಿಚಯ ಆಗಿತ್ತು.
ಆನಂತರ, ಅಜೀಜ್ ಪ್ರೀತಿಯ ಹೆಸರಿನಲ್ಲಿ ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಆಗಾಗ ಶಿಲ್ಪಾಳನ್ನು ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದ. ಪತಿಯ ಕೃತ್ಯಕ್ಕೆ ಪತ್ನಿ ಸಲ್ಮಾ ಬೆಂಬಲಿಸುತ್ತಿದ್ದಳು ಎನ್ನಲಾಗಿದೆ.
ಇತ್ತೀಚೆಗೆ ಮದುವೆ ಬಗ್ಗೆ ಕೇಳಿದ್ದಕ್ಕೆ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದ ಎನ್ನಲಾಗುತ್ತಿದೆ. ಅಲ್ಲದೆ, ಸಲ್ಮಾ ಮತ್ತು ಶಿಲ್ಪಾ ನಡುವೆ ಇದೇ ವಿಚಾರದಲ್ಲಿ ಜಗಳವಾಗಿದ್ದು ಬಟ್ಟೆ ಅಂಗಡಿಗೆ ಬಂದಿದ್ದ ಅಜೀಜ್ ಶಿಲ್ಪಾಗೆ ಅವಾಚ್ಯವಾಗಿ ನಿಂದಿಸಿ ನೀನು ಸತ್ತು ಹೋಗು ಎಂದು ಹೇಳಿದ್ದ. ಇದರಿಂದ ಮನನೊಂದು ಮೇ 23ರಂದು ರಾತ್ರಿ ಮನೆಯಲ್ಲಿದ್ದ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಮನೆಯವರು ನೋಡಿ ಬಳಿಕ ಆಸ್ಪತ್ರೆಗೆ ದಾಖಲಿಸಿದ್ದರು. 25 ರಂದು ಯುವತಿ ಸಾವು ಕಂಡಿದ್ದು ಆಕೆಯ ಸೋದರ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವತಿ ಸಾವಿಗೆ ಅಜೀಜ್ ಕಾರಣ ಎಂದು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಹಿಂದು ಸಂಘಟನೆಗಳು ಲವ್ ಜಿಹಾದ್ ಬಗ್ಗೆ ಆರೋಪ ಮಾಡಿವೆ.
Udupi Love sex dhoka Kundapura Muslim boy booked for Love Jihad, girl commits suicide. The deceased has been identified as Shilpa (25). A case been registered against Aziz (32). It is said Aziz was already married and has a child but he cheated the Hindu girl of marrying her.
10-01-25 11:01 pm
Bangalore Correspondent
G Parameshwara: ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್...
10-01-25 07:03 pm
NT chairman SN Subrahmanyan: ಇನ್ಫೋಸಿಸ್ ನಾರಾಯಣ...
10-01-25 02:44 pm
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
Ramnagara Accident, KSRTC: KSRTC ಬಸ್ - ಬೈಕ್ ನ...
09-01-25 07:04 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
10-01-25 11:14 pm
Mangalore Correspondent
Mini Olympics, Mangalore- Uudpi: ಜ.17ರಿಂದ 23...
10-01-25 06:23 pm
Wenlock Hospital, Mangalore, organ harvesting...
10-01-25 03:31 pm
Mangalore crime, Misfire, Police; ಪಿಎಫ್ಐ ಒಳಸಂ...
09-01-25 07:50 pm
ಜನವರಿ 11-12 ; 'ಮಂಗಳೂರು ಲಿಟ್ ಫೆಸ್ಟ್' ಏಳನೇ ಆವೃತ...
08-01-25 09:51 pm
10-01-25 11:05 pm
HK News Desk
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm