ಬ್ರೇಕಿಂಗ್ ನ್ಯೂಸ್
28-05-22 10:26 pm Mangalore Correspondent ಕರಾವಳಿ
ಮಂಗಳೂರು, ಮೇ 28: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಒಬ್ಬ ಅತ್ಯಂತ ಅಸಮರ್ಥ ಜನಪ್ರತಿನಿಧಿ. ಇಂಥ ವ್ಯಕ್ತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕುಂಠಿತಗೊಂಡಿದೆ. ಪಂಪ್ವೆಲ್ ಮೇಲ್ಸೇತುವೆ ಪೂರ್ಣಗೊಳಿಸಲು ಹತ್ತು ವರ್ಷಕ್ಕೂ ಹೆಚ್ಚು ಕಾಲ ಬೇಕಾಗಿ ಬಂದಿದ್ದು ಈ ವ್ಯಕ್ತಿಯ ಅಸಾಮರ್ಥ್ಯಕ್ಕೆ ಸಾಕ್ಷಿ. 13 ವರ್ಷಗಳ ಸಂಸದನ ಕಾಲದಲ್ಲಿ ಜಿಲ್ಲೆಯ ಶಾಲೆಗಳು, ಆಸ್ಪತ್ರೆಗಳು ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿವೆ ಎಂದು ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರಭಾರಿ, ನಿವೃತ್ತ ಅಧಿಕಾರಿ ಕೆ.ಮಥಾಯಿ ಟೀಕಿಸಿದ್ದಾರೆ.
2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಡಾಲರ್ ಗೆ 15 ರೂಪಾಯಿ ಆಗುತ್ತದೆ ಎಂದು ನಳಿನ್ ಕುಮಾರ್ ಸುಳ್ಳು ಭರವಸೆಗಳನ್ನು ನೀಡಿದ್ದರು. ಈ ವ್ಯಕ್ತಿಯ ಸುಳ್ಳುಗಳು ಎಷ್ಟೆಂದರೆ, ಡಾಲರ್ ರೇಟ್ ಎಷ್ಟೆನ್ನುವುದೇ ಈ ಮನುಷ್ಯನಿಗೆ ತಿಳಿದಿಲ್ಲ. ಎಂಟು ವರ್ಷಗಳ ಮೋದಿ ಆಳ್ವಿಕೆಯಲ್ಲಿ ಮೂರ್ಖತನದ ಆರ್ಥಿಕ ನೀತಿಗಳ ಪರಿಣಾಮ ಡಾಲರ್ ದರ ಮತ್ತಷ್ಟು ಏರಿಕೆಯಾಗಿದ್ದು, ಈಗ ಒಂದು ಡಾಲರ್ ದರ 77 ರೂ. ಆಗಿದೆ. ಈಗ ಡಾಲರ್ ದರದ ಬಗ್ಗೆ ಮಾತನಾಡಲು ನಳಿನ್ ಕುಮಾರ್ ತಯಾರಿದ್ದಾರೆಯೇ ಎಂದು ಮಥಾಯಿ ಪ್ರಶ್ನೆ ಮಾಡಿದ್ದಾರೆ.

ಸಂಸದ ನಳಿನ್ ಕುಮಾರ್ 13 ವರ್ಷಗಳಲ್ಲಿ ತಮ್ಮ ಅಸಾಮರ್ಥ್ಯದಿಂದಾಗಿ ಸಮಸ್ಯೆಗಳ ಸರಮಾಲೆಯನ್ನೇ ಜಿಲ್ಲೆಯಲ್ಲಿ ಸೃಷ್ಟಿಸಿದ್ದಾರೆ. ಇಂಥ ವ್ಯಕ್ತಿ ಈಗ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ಹೀಗಿದ್ದರೂ ಜಿಲ್ಲೆಯ ಸರಕಾರಿ ಶಾಲೆಗಳು ಮೂಲ ಸೌಕರ್ಯಗಳಿಲ್ಲದೆ ನಲುಗುತ್ತಿವೆ. ಇವರು ತಾಕತ್ತಿದ್ದರೆ, ನಮ್ಮ ಒಟ್ಟಿಗೆ ಯಾವುದಾದ್ರೂ ಒಂದು ಸರಕಾರಿ ಶಾಲೆಗೆ ಬರಲಿ. ಜೊತೆಗೆ ಹೋಗಿ ಪರಿಶೀಲನೆ ಮಾಡಲು ರೆಡಿ ಇದ್ದೇವೆ ಎಂದು ಹೇಳಿದರು. ನಾನು ಅಧಿಕಾರದಲ್ಲಿದ್ದಷ್ಟು ದಿನ ಭ್ರಷ್ಟಾಚಾರದ ವಿಚಾರದಲ್ಲಿ ರಾಜಿ ಮಾಡಿಕೊಂಡಿಲ್ಲ. ಭ್ರಷ್ಟಾಚಾರ ತಡೆಯುವುದಕ್ಕೆ ನನ್ನಿಂದಾದಷ್ಟು ಪ್ರಯತ್ನ ಪಟ್ಟಿದ್ದೇನೆ. ನನ್ನ ದಿಟ್ಟ ಧೋರಣೆಯ ಕಾರಣಕ್ಕೆ 18 ವರ್ಷಗಳಲ್ಲಿ 28 ಬಾರಿ ವರ್ಗಾವಣೆ ಆಗುವಂತಾಗಿತ್ತು. ಆದರೂ ನಾನು ಎದೆಗುಂದಿಲ್ಲ. ಆಮ್ ಆದ್ಮಿ ಪಾರ್ಟಿಯಿಂದಾಗಿ ನಾನು ಈಗಲೂ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುತ್ತಿದ್ದೇನೆ ಎಂದರು.
ಆಮ್ ಆದ್ಮಿ ಪಾರ್ಟಿಯು ದೇಶದ ಇತಿಹಾಸ ಕಂಡ ಏಕೈಕ ಪ್ರಾಮಾಣಿಕ ಪಕ್ಷ. ಎಂದೂ ಭ್ರಷ್ಟಾಚಾರ ಸಹಿಸಲ್ಲ ಎಂಬುದು ಇತ್ತೀಚೆಗೆ ಪಂಜಾಬ್ ನಲ್ಲಿ ನಡೆದ ಘಟನೆಯಿಂದ ಸಾಬೀತಾಗಿದೆ. ತಮ್ಮದೇ ಸರಕಾರದ ಆರೋಗ್ಯ ಸಚಿವರು ಒಂದು ಪರ್ಸೆಂಟ್ ಕಮಿಷನ್ ಪಡೆದಿದ್ದನ್ನು ತಿಳಿದ ಸಿಎಂ ಭಗವಂತ ಮಾನ್, ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿ ತನಿಖೆಗೆ ಆದೇಶಿಸಿದ್ದಾರೆ. ಬಿಜೆಪಿ ಆಡಳಿತ ಇರುವ ಕರ್ನಾಟಕದಲ್ಲಿ ಸಚಿವರ ವಿರುದ್ಧ ಸಾಲು ಸಾಲು ಭ್ರಷ್ಟಾಚಾರದ ಆರೋಪಗಳಿವೆ. ಜನರು ರಾಜಿನಾಮೆಗೆ ಆಗ್ರಹಿಸುತ್ತಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಭ್ರಷ್ಟಾಚಾರವನ್ನೇ ಹೊದ್ದು ಮಲಗಿರುವ ಬಿಜೆಪಿಯನ್ನು ಅಧಿಕಾರದಿಂದ ಇಳಿಸಿ ಎಎಪಿಯನ್ನು ಅಧಿಕಾರಕ್ಕೇರಿಸಬೇಕು ಎಂದು ಮಥಾಯಿ ಮನವಿ ಮಾಡಿದ್ದಾರೆ.
ಆಪ್ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ರಾಜ್ಯ ಕಮಿಟಿ ಸದಸ್ಯ ಅಶೋಕ್ ಎಡಮಲೆ, ಜೆಪಿ ರಾವ್. ವೇಣುಗೋಪಾಲ್ ಉಪಸ್ಥಿತರಿದ್ದರು.
Aam Aadmi Party (AAP), Mathai slammed Nalin Kumar Kateel over development in Dakshin Kannada during a press meet held at press club in Mangalore.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm