ಹಿರಿಯ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ನಿಧನ

27-09-20 04:39 pm       Mangaluru Correspondant   ಕರಾವಳಿ

ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮಂಗಳೂರು, ಸೆಪ್ಟಂಬರ್ 27: ಅಲ್ಪಕಾಲದ ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ತೆಂಕಬೈಲು ಎಂಬಲ್ಲಿನ ನಿವಾಸಿಯಾಗಿರುವ ತಿರುಮಲೇಶ್ವರ ಶಾಸ್ತ್ರಿಗಳು ಕಂಚಿನ ಕಂಠದಿಂದಾಗಿಯೇ ಜನಮನ ಗೆದ್ದವರು. ಖ್ಯಾತ ಭಾಗವತ ಮಾಂಬಾಡಿ ನಾರಾಯಣ ಭಾಗವತರಲ್ಲಿ ಭಾಗವತಿಕೆ ಕಲಿತು, 35 ವರ್ಷಗಳ ಕಾಲ ವಿವಿಧ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಭಾಗವತಿಕೆ ಅಲ್ಲದೆ ಚೆಂಡೆ, ಮದ್ದಲೆಗಳಲ್ಲೂ ಪರಿಣತಿ ಪಡೆದಿದ್ದ ಶಾಸ್ತ್ರಿಗಳು ಕಳೆದ 15 ವರ್ಷಗಳಲ್ಲಿ ವಿವಿಧ ಕಡೆ ಹಿಮ್ಮೇಳ ತರಬೇತಿ ನಡೆಸುತ್ತಿದ್ದರು. ಗಡಿನಾಡು ಕಾಸರಗೋಡಿನ ಪಡ್ರೆ ಚಂದು ಸ್ಮಾರಕ ಯಕ್ಷಾಗನ ಕೇಂದ್ರದಲ್ಲಿಯೂ ಹಿಮ್ಮೇಳ ತರಗತಿ ನಡೆಸುತ್ತಿದ್ದರು. ಊರ ಹೆಸರು ತೆಂಕಬೈಲು ಹೆಸರಲ್ಲಿಯೇ ಅವರು ಪ್ರಸಿದ್ಧಿ ಗಳಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕೀಲಾರು ಗೋಪಾಲಕೃಷ್ಣಯ್ಯ ಸ್ಮಾರಕ ಪ್ರತಿಷ್ಠಾನ ಕೊಡಮಾಡುವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಮತ್ತು ಸನ್ಮಾನಗಳಿಗೆ ತೆಂಕಬೈಲು ಭಾಜನರಾಗಿದ್ದರು. 

Join our WhatsApp group for latest news updates (2)