ಬ್ರೇಕಿಂಗ್ ನ್ಯೂಸ್
29-05-22 03:11 pm Mangalore Correspondent ಕರಾವಳಿ
ಮಂಗಳೂರು, ಮೇ 29: ಅಡ್ಯಾರ್ ಕಣ್ಣೂರಿನಲ್ಲಿ ನಡೆದ ಎಸ್ಡಿಪಿಐ ಸಮಾವೇಶಕ್ಕೆ ಆಗಮಿಸುತ್ತಿದ್ದ ವೇಳೆ ಕಾರ್ಯಕರ್ತರು ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿರುವ ಪ್ರಕರಣದ ಬಗ್ಗೆ ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೈಕ್, ಸ್ಕೂಟರ್ ಮತ್ತು ಕಾರಿನಲ್ಲಿ ತೆರಳುತ್ತಿದ್ದ ಯುವಕರು ಪೊಲೀಸರ ವಿರುದ್ಧ ಅವಾಚ್ಯವಾಗಿ ನಿಂದಿಸುತ್ತಾ ಘೋಷಣೆ ಹಾಕಿದ್ದಲ್ಲದೆ, ಅದರ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು. ಈ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಎಎಸ್ಐ ಚಂದ್ರಶೇಖರ ಬಿ. ದೂರು ನೀಡಿದ್ದು, ಆರು ಮಂದಿಯ ವಿರುದ್ಧ ಸೆಕ್ಷನ್ 143, 353, 504 ಮತ್ತು 149 ಅಡಿ ಪ್ರಕರಣ ದಾಖಲಿಸಲಾಗಿದೆ.
ಎಸ್ಡಿಪಿಐ ವತಿಯಿಂದ ಆಯೋಜಿಸಿದ್ದ ಜನಾಧಿಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೊಡಕ್ಕಲ್ ಕಣ್ಣೂರು ಚೆಕ್ ಪೋಸ್ಟ್ ನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಹೆಡ್ ಕಾನ್ಸ್ ಟೇಬಲ್ ಗಳಾದ ಪುಟ್ಟರಾಮ, ರವಿಕುಮಾರ್, ಪೊಲೀಸ್ ಪೇದೆಗಳಾದ ಜಗದೀಶ್ ಮೆಟ್ಟಗುಡ್ಡ ಮತ್ತು ಸಂಗನ ಗೌಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ, ಪಡೀಲ್ ಕಡೆಯಿಂದ ಕೆಟಿಎಂ ಬೈಕ್, ಸ್ಕೂಟರ್ ಹಾಗೂ ಕಾರಿನಲ್ಲಿ ಯುವಕರು ಆಗಮಿಸಿದ್ದು ರಸ್ತೆಯಲ್ಲಿ ಅಡ್ಡಲಾಗಿ ನಿಂತು ಕರ್ತವ್ಯದಲ್ಲಿದ್ದ ಸಿಬಂದಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.
ಬ್ಯಾರಿ ಭಾಷೆಯಲ್ಲಿ ಪೋಡೆ ಪುಲ್ಲೆ ಪೋಲೀಸೆ, ನಾಯಿಂಡೆ ಮೋನೆ ಪೊಲೀಸೆ ಎಂದು ಘೋಷಣೆ ಕೂಗುತ್ತಾ ತಿ ವೇಗವಾಗಿ ವಾಹನಗಳನ್ನು ಚಲಾಯಿಸಿ ಕರ್ತವ್ಯದಲ್ಲಿದ್ದ ಪೇದೆ ಸಂಗನಗೌಡ ಮೈಮೇಲೆ ಹಾಯಿಸುವಂತೆ ಬಂದಿದ್ದು ಈ ವೇಳೆ ಸಂಗನಗೌಡ ತಪ್ಪಿಸಿಕೊಂಡಿದ್ದಾರೆ. ಕರ್ತವ್ಯ ನಿರತ ಪೊಲೀಸರಿಗೆ ಅಡ್ಡಿಪಡಿಸಿದ್ದಲ್ಲದೆ, ಅವಾಚ್ಯವಾಗಿ ನಿಂದಿಸಿದ್ದ ಬಗ್ಗೆ ದೂರು ದಾಖಲಿಸಲಾಗಿದೆ. ಆರು ಮಂದಿಯನ್ನು ಅಪರಿಚಿತರು ಎಂದು ತೋರಿಸಲಾಗಿದ್ದು, ವಿಡಿಯೋ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Mangalore Sdpi members abusing police video during a SDPI program at Kannur goes viral, Police have booked six members of SDPI under section 143, 353 and 504.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm