ಕರಾವಳಿ ಜಿಲ್ಲೆಗಳಿಗೆ ತಟ್ಟದ ಬಂದ್ ಬಿಸಿ ; ಸಂಚಾರ ನಿರಾತಂಕ, ಪ್ರತಿಭಟನೆ ಸೀಮಿತ !

28-09-20 11:57 am       Mangalore Correspondent   ಕರಾವಳಿ

ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಕರೆಗೆ ಮಂಗಳೂರಿನಲ್ಲಿ ಬೆಂಬಲ ವ್ಯಕ್ತವಾಗಿಲ್ಲ.

ಮಂಗಳೂರು, ಸೆ.28: ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತರಲು ಉದ್ದೇಶಿಸಿರುವ ಭೂ ಸುಧಾರಣೆ ಕಾನೂನು ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಕರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. 

ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಬೆಳಗ್ಗಿನಿಂದಲೇ ಎಂದಿನಂತೆ ವಾಹನ ಸಂಚಾರ ಇದೆ. ಕೆಎಸ್‌ಆರ್‌ಟಿಸಿ, ಖಾಸಗಿ ಬಸ್, ಆಟೋ, ಟ್ಯಾಕ್ಸಿಗಳ ಸಂಚಾರ ಎಂದಿನಂತಿವೆ. ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಜನಸಂಚಾರವೂ ಯಾವಾಗಿನಂತೇ ಇದೆ. ಈ ನಡುವೆ ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರ ಭದ್ರತೆ ಹೆಚ್ಚಿಸಲಾಗಿದೆ.

ರೈತರ ಹೋರಾಟ ಬೆಂಬಲಿಸಿ ಪ್ರತಿಭಟನೆ ! 

ಬಂದ್ ಕರೆ ಹಿನ್ನೆಲೆಯಲ್ಲಿ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ, ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು. ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷದ ನಾಯಕರು ಹೋರಾಟ ಬೆಂಬಲಿಸಿ ಸೇರಿದ್ದರು. ಡಿವೈಎಫ್ಐ, ಸಿಐಟಿಯು ಸೇರಿ ಹಲವು ಕಾರ್ಮಿಕ ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು. 

Join our WhatsApp group for latest news updates (2)

video