ಬ್ರೇಕಿಂಗ್ ನ್ಯೂಸ್
03-06-22 11:42 am Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ದೇಶದ ಅಭಿವೃದ್ಧಿಯನ್ನು ಸಹಿಸದ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ನಡೆಸುತ್ತಿರುವ ಕಾಶ್ಮೀರ ಪಂಡಿತರ ಹತ್ಯೆ ಖಂಡನೀಯ. ಜಮ್ಮು ಕಾಶ್ಮೀರದಲ್ಲಿ ಶಾಂತಿಯಿಂದ ಬದುಕು ಕಟ್ಟಿಕೊಳ್ಳಲು ಬಯಸುವ ಅಲ್ಲಿಯ ನಾಗರಿಕರಿಗೂ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳಿಂದ ನೆಮ್ಮದಿಯ ಜೀವನ ಸಾಗಿಸಲು ಕಷ್ಟವಾಗಲಿದ್ದು ಇಸ್ಲಾಮ್ ಧರ್ಮಕ್ಕೆ ಕಳಂಕ ತರುವ ಪಾಕಿಸ್ತಾನ್ ಬೆಂಬಲಿತ ಭಯೋತ್ಪಾದಕರ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಮುಸ್ಲಿಂ ಧರ್ಮಗಳ ನಾಯಕತ್ವದಲ್ಲಿ ಉಗ್ರ ಪ್ರತಿಭಟನೆ ನಡೆಯುವಂತಾಗಬೇಕು. ರಾಷ್ಟ್ರಭಕ್ತ ಎಲ್ಲಾ ಮುಸ್ಲಿಂ ಸಂಘಟನೆಗಳು ದೇಶದ ಏಕತೆಗಾಗಿ ಹಾಗೂ ಪಾಕಿಸ್ತಾನಕ್ಕೆ ನೇರ ಸಂದೇಶ ನೀಡಲು ಒಗ್ಗಟ್ಟಾಗಬೇಕೆಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರು, ಬಿಜೆಪಿ ಮುಖಂಡರೂ ಆದ ರಹೀಮ್ ಉಚ್ಚಿಲ್ ಮುಸ್ಲಿಂ ಧರ್ಮಗುರುಗಳು ಹಾಗೂ ಮುಸ್ಲಿಂ ಸಂಘಟನೆಗಳಿಗೆ ಆಗ್ರಹಿಸಿದ್ದಾರೆ.

ಭಾರತದ ಆಂತರಿಕ ಸಮಸ್ಯೆ ಏನೇ ಇದ್ದರೂ ಪರಸ್ಪರ ಬಗೆಹರಿಸಲು ನಾವು ಶಕ್ತರಿದ್ದೇವೆ. ಆದರೆ ಶತ್ರು ದೇಶದಂತೆ ವ್ಯವಹರಿಸುತ್ತಿರುವ ಪಾಕಿಸ್ತಾನ ನಮ್ಮ ಸಹನೆಯನ್ನು ಪರೀಕ್ಷಿಸುತ್ತಿದ್ದು ಭಾರತದ ಮುಸಲ್ಮಾನರು ಒಗ್ಗೂಡಿ ಇಂತಹ ಕೃತ್ಯವನ್ನು ಗಟ್ಟಿ ದನಿಯಲ್ಲಿ ವಿರೋಧಿಸಬೇಕಾಗಿದೆ. ಇದಕ್ಕೆ ಪಂಥ ಪಂಗಡ ಹಾಗೂ ರಾಜಕೀಯ ಬದಿಗಿಟ್ಟು ಧಾರ್ಮಿಕ ನಾಯಕರ ಮುಖಂಡತ್ವದಲ್ಲಿ ಒಂದಾಗಬೇಕು ಎಂದು ಸಮಾಜ ಬಾಂಧವರಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆ ಕಾರ್ಗಿಲ್ ಯುದ್ಧ ಸಂದರ್ಭದಲ್ಲಿ ಪಾಕಿಸ್ತಾನದ ಜೊತೆ ಯುದ್ಧ ಘೋಷಣೆಯಾದರೆ ಭಾರತದ ಮುಸಲ್ಮಾನರು ದೇಶಕ್ಕಾಗಿ ಪ್ರಾಣ ಅರ್ಪಿಸಲು ಸಿದ್ದರಾಗಿ ಎಂದು ಕರೆ ನೀಡಿದ ಅಂದಿನ ಮೌಲಾನಗಳು ಅದೇ ಮಾತನ್ನು ಮತ್ತೊಮ್ಮೆ ತಮ್ಮ ಸಮಾಜ ಬಾಂಧವರಿಗೆ ಕರೆ ನೀಡುವ ಕಾಲ ಸನ್ನಿಹಿತವಾಗಿದೆ. ಪಾಕಿಸ್ತಾನ ಹಾಗೂ ಅದರ ಬೆಂಬಲಿತರ ಉಪಟಳ ಹೆಚ್ಚಾಗುವಾಗ ಇಂತಹ ಕರೆ ದೇಶದ ಹಿತದೃಷ್ಟಿಯಿಂದ ಅಗತ್ಯವಾಗಿ ಬೇಕಾಗಿದೆ ಎಂದು ರಹೀಮ್ ಉಚ್ಚಿಲ್ ಹೇಳಿದ್ದಾರೆ.

ಭಯೋತ್ಪಾದಕರ ಈ ಹೀನ ಕೃತ್ಯಕ್ಕೂ ಇಸ್ಲಾಮ್ ಧರ್ಮಕ್ಕೂ ಯಾವ ಸಂಬಂಧವೂ ಇಲ್ಲ. ಬಿನ್ ಲ್ಯಾಡನ್, ಮುಲ್ಲಾ ಉಮರ್ ರಂತವರ ಅನುಯಾಯಿಗಳಿಂದ ಮಾತ್ರ ಇಂತಹ ಕೃತ್ಯ ಸಾಧ್ಯವೇ ಹೊರತು ಪ್ರವಾದಿ ಮುಹಮ್ಮದರ ಅನುಯಾಯಿಗಳಿಂದ ಇದು ಸಾಧ್ಯವಿಲ್ಲ. ಮುಸ್ಲಿಂ ಸಮಾಜ ಒಂದಾಗಿ ನಮ್ಮವರೇ ಆದ ಕಾಶ್ಮೀರ ಪಂಡಿತರ ನೈತಿಕ ಬೆಂಬಲಕ್ಕೆ ನಿಲ್ಲಬೇಕು ಎಂದು ಮಾಧ್ಯಮ ಪ್ರಕಟಣೆಯಲ್ಲಿ ರಹೀಂ ಉಚ್ಚಿಲ್ ತಿಳಿಸಿದ್ದಾರೆ.
Mangalore Rahim Uchil slams Kashmir targeted killing, says Pak behind it. A Hindu teacher from Jammu’s Samba district, posted in Kashmir Valley’s Kulgam, was shot dead just outside the school by militants on Tuesday morning. Target killings have left seven civilians dead this month in the Valley.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm