ಬ್ರೇಕಿಂಗ್ ನ್ಯೂಸ್
04-06-22 11:22 am Mangalore Correspondent ಕರಾವಳಿ
ಉಳ್ಳಾಲ, ಜೂ.4: ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ವೃದ್ಧರೋರ್ವರಿಗೆ ಇಬ್ಬರು ಚಿಟ್ ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದು, ಹಣ ಕೇಳಿ ಸುಸ್ತಾದ ವೃದ್ಧ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮಾಡೂರು ಶಾಲೆ ಬಳಿ ನಡೆದಿದೆ.
ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆ ಬಳಿಯ ನಿವಾಸಿ ಜಯರಾಮ ಶೆಟ್ಟಿ(71) ಆತ್ಮಹತ್ಯೆಗೈದ ದುರ್ದೈವಿ. ಜಯರಾಮ ಅವರು ಇಂದು ಬೆಳಗ್ಗೆ ಮನೆಯ ಕೋಣೆಯೊಳಗೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪತ್ನಿ ಲೀನಾ ಜೆ ಶೆಟ್ಟಿ ಅವರು ಬೆಳಗ್ಗೆ ಚಹಾ ಕೊಡಲೆಂದು ಹೋಗುವಾಗ ಪ್ರಕರಣ ಬೆಳಕಿಗೆ ಬಂದಿದೆ.
ಜಯರಾಮ್ ಶೆಟ್ಟಿ ಅವರು ಮಾಡೂರು ಬಸ್ಸು ತಂಗುದಾಣದ ಬಳಿಯ ಪಂಚಾಯತ್ ಕಟ್ಟಡದ ಅಂಗಡಿಯಲ್ಲಿ ಸೀಯಾಳ ವ್ಯಾಪಾರಿಯಾಗಿದ್ದು , ಚಿಟ್ ಫಂಡ್ ವ್ಯವಹಾರವನ್ನೂ ನಡೆಸುತ್ತಿದ್ದರಂತೆ. ಕೊಟ್ಟವನು ಕೋಡಂಗಿ, ಇಸ್ಕೊಂಡವನು ವೀರಭದ್ರ ಎಂಬಂತೆ ಜಯರಾಮ್ ಶೆಟ್ಟಿ ಅವರ ಚಿಟ್ ಫಂಡ್ ಹಣ ಇಸ್ಕೊಂಡವರು ಹಣ ಮರಳಿಸದೆ ಮೋಸ ಮಾಡಿದ್ದರಂತೆ. ಇದರಿಂದ ಜಯರಾಮ ಶೆಟ್ಟಿ ಅವರು ನಷ್ಟ ಅನುಭವಿಸಿದ್ದು ಅದರ ಚಿಂತೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೈದಿರುವುದಾಗಿ ಅವರ ಪತ್ನಿ ಲೀನಾ ಪೊಲೀಸರಿಗೆ ದೂರು ನೀಡಿದ್ದಾರೆ.
ಜಯರಾಮ್ ಶೆಟ್ಟಿ ಅವರ ಪತ್ನಿ ಲೀನಾ ಜೆ ಶೆಟ್ಟಿ ಅವರು ಕೋಟೆಕಾರು ಪಂಚಾಯತ್ ಮಾಜಿ ಸದಸ್ಯರಾಗಿದ್ದಾರೆ. ಮೃತ ಜಯರಾಮ್ ಅವರು ಪತ್ನಿ, ಮೂರು ಪುತ್ರಿಯರು, ಮೊಮ್ಮಕ್ಕಳನ್ನ ಅಗಲಿದ್ದಾರೆ. ಮೃತದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
Mangalore 71 year old man commits suicide due to loss in chit fund finance at Maduru in Ullal. The deceased has been identified as Jayaram Shetty (71)
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 08:28 pm
HK News Desk
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm