ಬ್ರೇಕಿಂಗ್ ನ್ಯೂಸ್
04-06-22 01:18 pm Mangalore Correspondent ಕರಾವಳಿ
ಮಂಗಳೂರು, ಜೂನ್ 4 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಅಪ್ಪ - ಮಗಳು ಸಾವನ್ನಪ್ಪಿದ ಘಟನೆ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ರಾಣೆಬೆನ್ನೂರಿನ ಪುಂಡಲೀಕಪ್ಪ (62) ಮತ್ತು ಅವರ ಪುತ್ರಿ ಅಶ್ವಿನಿ (29) ಮೃತರು. ಪುಂಡಲೀಕಪ್ಪ ಅವರಿಗೆ ಅನಾರೋಗ್ಯ ಇದ್ದುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾರಿನಲ್ಲಿ ಮಂಗಳೂರಿಗೆ ಕರೆತರಲಾಗುತ್ತಿತ್ತು.
ವ್ಯಾಗನಾರ್ ಕಾರಿನಲ್ಲಿ ಕುಟುಂಬ ಸಮೇತ ಜೂನ್ 2ರ ರಾತ್ರಿ ಹೊರಟಿದ್ದು ಮರುದಿನ ನಸುಕಿನ ಜಾವ ಕಾರು ಮೂಡುಬಿದ್ರೆ ಮೂಲಕ ಮಂಗಳೂರಿಗೆ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಅಶ್ವಿನಿ ಅವರಿಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪುಂಡಲೀಕ ಅವರನ್ನು ಅಲ್ಲಿಂದ ಬೇರೆ ಕಾರಿನಲ್ಲಿ ಆಸ್ಪತ್ರೆಗೆ ಒಯ್ಯುವ ಮಧ್ಯೆ ಸಾವನ್ನಪ್ಪಿದ್ದಾರೆ. ಅಶ್ವಿನಿ ಪತಿ ಸಂತೋಷ್, ಪುತ್ರಿ ಶ್ರೇಯಾ, ತಾಯಿ ಪುಷ್ಪಾ, ಕಾರು ಚಾಲಕ ಸೊಹೈಲ್ ಗಾಯಗೊಂಡಿದ್ದಾರೆ. ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ.
Two people died when the car in which they were travelling crashed against a tree on the June 2 near A K Urdu school near Sooralpady of Ganjimutt on NH 169. The deceased are identified as Ashwini (29) and her father Pundalikappa (62), natives of Ranebennur. Ashiwni’s husband Santhosh, daughter Shreya, mother Pushpa and car driver Sohail, who suffered injuries, are recovering.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 09:24 pm
HK News Desk
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm