ಬ್ರೇಕಿಂಗ್ ನ್ಯೂಸ್
07-06-22 06:07 pm Mangalore Correspondent ಕರಾವಳಿ
ಪುತ್ತೂರು, ಜೂನ್ 7: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿಚಾರ ಅಹಿತಕರ ಘಟನೆಗಳಿಗೆ ಕಾರಣವಾದ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಲು ಪಟ್ಟು ಹಿಡಿದ 24 ಮಂದಿ ವಿದ್ಯಾರ್ಥಿನಿಯರನ್ನು ಒಂದು ವಾರ ಕಾಲ ಕಾಲೇಜಿಗೆ ಬರದಂತೆ ನಿರ್ಬಂಧ ವಿಧಿಸಲಾಗಿದೆ.
ಕಾಲೇಜಿನಲ್ಲಿ ಕಳೆದ ವಾರ ಎರಡು ಗುಂಪುಗಳ ನಡುವೆ ಘೋಷಣೆ ವಿನಿಮಯ ಆಗಿರುವುದು, ಸುದ್ದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆದಿರುವುದು, ಈ ವಿಚಾರದಲ್ಲಿ ಉಪ್ಪಿನಂಗಡಿ ಠಾಣೆಯಲ್ಲಿ ಪರಸ್ಪರ ಕೇಸು ದಾಖಲಾಗಿರುವುದು ಇತ್ಯಾದಿ ಬೆಳವಣಿಗೆ ಹಿನ್ನೆಲೆಯಲ್ಲಿ ಮಂಗಳೂರು ವಿವಿಯ ಅಧಿಕಾರಿಯೊಬ್ಬರು ಕಾಲೇಜಿಗೆ ಬಂದಿದ್ದರು. ಅಲ್ಲದೆ, ವಿದ್ಯಾರ್ಥಿನಿಯರ ಜೊತೆಗೆ ಮಾತುಕತೆ ನಡೆಸಿ, ಹಿಜಾಬ್ ನಿಷೇಧದ ಬಗ್ಗೆ ಮನವರಿಕೆ ಮಾಡಲು ಯತ್ನಿಸಿದ್ದಾರೆ.
ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸಿಲ್ಲ. ಶೈಕ್ಷಣಿಕ ವರ್ಷದ ನಡುವೆ ಹಿಜಾಬ್ ಹೇರಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ತರಗತಿ ಹೊರಗಿನ ಡ್ರೆಸ್ಸಿಂಗ್ ರೂಮಿನಲ್ಲಿ ಉಳಿಯುವುದಕ್ಕೂ ಕಾಲೇಜಿನ ಆಡಳಿತ ನಿರ್ಬಂಧ ವಿಧಿಸಿತ್ತು. ಸೋಮವಾರ ದಿನವಿಡೀ ಪ್ರಹಸನದ ಬಳಿಕ ಸಂಜೆ ವೇಳೆಗೆ ಕಾಲೇಜಿನ ಉಪನ್ಯಾಸಕರ ಸಭೆ ಕರೆದ ಪ್ರಾಂಶುಪಾಲ ಶೇಖರ್ ಎಂ.ಬಿ., ಸರಕಾರದ ಸುತ್ತೋಲೆ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ನಿರ್ಣಯದ ಆಧಾರದಲ್ಲಿ ಕಾಲೇಜಿನ ಸಮವಸ್ತ್ರ ನಿಯಮವನ್ನು ಉಲ್ಲಂಘಿಸಿದ್ದಲ್ಲದೆ, ಶೈಕ್ಷಣಿಕ ವಾತಾವರಣ ಹಾಳು ಮಾಡುತ್ತಿರುವುದಕ್ಕಾಗಿ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲ ಕಾಲೇಜು ಪ್ರವೇಶ ನಿರ್ಬಂಧಿಸಿ ನಿರ್ಣಯ ಕೈಗೊಂಡಿದ್ದಾರೆ. ಇದೇ ವಿವಾದಕ್ಕೆ ಸಂಬಂಧಿಸಿ ಈ ಹಿಂದೆ ಏಳು ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿತ್ತು. ಇದೀಗ ಒಂದು ವಾರದ ನಿರ್ಬಂಧ ವಿಧಿಸಿ ಚಾಟಿ ಬೀಸಿದ್ದಾರೆ.
Twenty-four students studying in a college in Karnataka's Dakshina Kannada district were on Tuesday banned for a period of seven days from attending classes for wearing Hijab.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm