ಬ್ರೇಕಿಂಗ್ ನ್ಯೂಸ್
13-06-22 09:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 13: ಉತ್ತರ ಭಾರತದ ಪ್ರಮುಖ ನಗರಗಳಲ್ಲಿ ಪ್ರವಾದಿ ಪೈಗಂಬರ್ ಅವಹೇಳನ ವಿರೋಧಿಸಿ ಪ್ರತಿಭಟನೆ ನಡೆದಿರುವ ಹಿನ್ನೆಲೆಯಲ್ಲಿ ದೇಶದ ಕರಾವಳಿ ಭಾಗದ ಪ್ರಮುಖ ನಗರ ಮಂಗಳೂರಿನಲ್ಲಿಯೂ ಬೃಹತ್ತಾದ ಪ್ರತಿಭಟನೆ ರೂಪದಲ್ಲಿ ಶಕ್ತಿಪ್ರದರ್ಶನ ತೋರಿಸಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹ, ಒತ್ತಾಯಗಳು ಕೇಳಿಬರುತ್ತಿದ್ದು, ಈ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮುಸ್ಲಿಂ ಧಾರ್ಮಿಕ ಮುಖಂಡರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ.
ದೇಶದ ಬೇರೆ ಬೇರೆ ಕಡೆ ನಡೆದಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಅದೇ ರೀತಿ ಪ್ರತಿಭಟನೆ ನಡೆಸಲು ಯೋಜಿಸಿದ್ದೀರಾ ಎಂದು ಕಮಿಷನರ್ ಧಾರ್ಮಿಕ ಮುಖಂಡರನ್ನು ಪ್ರಶ್ನೆ ಮಾಡಿದ್ದಾರೆ. ಆದರೆ, ಆ ರೀತಿಯ ಯಾವುದೇ ಮಾಹಿತಿ ನಮಗಿಲ್ಲ. ನಾವು ಯಾವುದೇ ರೀತಿಯ ಪ್ರತಿಭಟನೆ ನಡೆಸುವ ಇರಾದೆ ಹೊಂದಿಲ್ಲ ಎಂದು ಧರ್ಮಗುರುಗಳು ಅಭಿಪ್ರಾಯ ನೀಡಿದ್ದಾರೆ.

ಆದರೆ, ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ ಎನ್ನುವ ಸಂದೇಶಗಳು ಹರಿದಾಡುತ್ತಿರುವ ಬಗ್ಗೆ ಕಮಿಷನರ್ ಅಭಿಪ್ರಾಯ ಕೇಳಿದ್ದಾರೆ. ಆ ರೀತಿಯ ಸಂದೇಶಕ್ಕೂ ನಮಗೂ ಸಂಬಂಧ ಇಲ್ಲ. ನಾವು ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಮುಂದಾಗಿಲ್ಲ ಎಂದು ಮುಖಂಡರು ತಿಳಿಸಿದ್ದಾರೆ. ಇದೇ ವೇಳೆ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಟ್ಟಿರುವ ವಿಚಾರವನ್ನು ಧಾರ್ಮಿಕ ಮುಖಂಡರಿಗೆ ತಿಳಿಸಿದ್ದಾರೆ. ಈಗಾಗಲೇ ನಾವು ಪ್ರತೀ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಗಾ ಇಟ್ಟಿದ್ದೇವೆ. ಯಾರೆಲ್ಲ ಅಪರಾಧ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಯಾರು ಸಾಮಾಜಿಕ ಸಾಮರಸ್ಯ ಹಾಳುಗೆಡಹುವ ಯತ್ನ ಮಾಡುತ್ತಿದ್ದಾರೆ ಎಂಬುದನ್ನು ನೋಡುತ್ತಿದ್ದೇವೆ. ಶಾಂತಿ ಕದಡುವ ವಾಟ್ಸಪ್ ಗ್ರೂಪ್ ಗಳು ಹಾಗೂ ಇತರ ಜಾಲತಾಣಗಳ ಬಗ್ಗೆಯೂ ನಿಗಾ ಇಟ್ಟಿರುವುದನ್ನು ಧಾರ್ಮಿಕ ಮುಖಂಡರ ಗಮನಕ್ಕೆ ತಂದಿದ್ದಾರೆ.

ಅದಕ್ಕೆ ಪ್ರತಿಕ್ರಿಯಿಸಿದ ಮುಖಂಡರು, ಆ ರೀತಿಯ ಯಾವುದೇ ಅಹಿತಕರ ಘಟನೆ ನಡೆಯದಂತೆ ನೀವು ನೋಡಿಕೊಳ್ಳಬೇಕು. ಜಾಲತಾಣದಲ್ಲಿ ಸಾಮರಸ್ಯ ಕದಡುವ ಸಂದೇಶ ಹಾಕುವ ಮಂದಿಯನ್ನು ನೀವೇ ಪತ್ತೆ ಮಾಡಬೇಕು ಎಂದು ಪೊಲೀಸ್ ಕಮಿಷನರ್ ಬಳಿ ಹೇಳಿದ್ದಾರೆ. ಅಲ್ಲದೆ, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ, ಪ್ರತೀ ಠಾಣೆ ವ್ಯಾಪ್ತಿಯಲ್ಲಿ ಯೂತ್ ವಿಂಗ್ ಅನ್ನುವ ಹೊಸ ವ್ಯವಸ್ಥೆ ಮಾಡಲಾಗುವುದು. ಠಾಣೆ ವ್ಯಾಪ್ತಿಯಲ್ಲಿ ಸಮಾಜದಲ್ಲಿ ಸಕ್ರಿಯವಾಗಿರುವ ಎಲ್ಲ ಸಮುದಾಯದ ಯುವಕರನ್ನು ಸೇರಿಸಿ ಯೂತ್ ವಿಂಗ್ ಮಾಡಲಾಗುವುದು. ಅಹಿತಕರ ಘಟನೆಗಳ ಬಗ್ಗೆ ಅವರಿಂದಲೇ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯ ಸರಕಾರ ಈಗಾಗಲೇ ಗಲಭೆ ನಡೆಸುವ ಮತ್ತು ಸಮಾಜದಲ್ಲಿ ಶಾಂತಿ ಕದಡುವ ಮಂದಿಯ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿರುವುದರಿಂದ ಪೊಲೀಸರು ಆರಂಭಿಕವಾಗಿ ಧಾರ್ಮಿಕ ಗುರುಗಳನ್ನು ಕರೆದು ಮಾತುಕತೆ ನಡೆಸಿದ್ದು ವಿಶೇಷ. ಸೋಮವಾರದ ಸಭೆಯಲ್ಲಿ ರಾಜಕೀಯ ಪಕ್ಷಗಳು, ಇತರ ಸಂಘಟನೆಗಳ ಪ್ರಮುಖರನ್ನು ಕರೆಸಿಲ್ಲ. ಸದ್ಯದಲ್ಲೇ ರಾಜಕೀಯ ಪ್ರಮುಖರು ಮತ್ತು ಹಿಂದು- ಮುಸ್ಲಿಂ ಸಂಘಟನೆಗಳ ಪ್ರಮುಖರನ್ನು ಕರೆಸಿ ಪೊಲೀಸರು ಮಾತುಕತೆ ನಡೆಸಲಿದ್ದಾರೆ.
ಸಭೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ವಿವಿಧ ವಿಭಾಗದ ಮಸೀದಿ ಕಮಿಟಿ ಅಧ್ಯಕ್ಷರು, ಮುಸ್ಲಿಂ ಧಾರ್ಮಿಕ ಮುಖಂಡರು, ಕೆ.ಎಂ. ಮಸೂದ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Prophet row, Mangalore police commissioner Shashi Kumar call for a peace meeting with Muslim leaders after protest erupted all over India by Nupur Sharmas statement on Prophet Mohammad.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm