ಬ್ರೇಕಿಂಗ್ ನ್ಯೂಸ್
29-09-20 04:27 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 29: ಘನ ತ್ಯಾಜ್ಯಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ವಿಫಲವಾದರೆ ಮಂಗಳೂರು ನಗರ ಪಾಲಿಕೆಯ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಗರ ವ್ಯಾಪ್ತಿಯಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಪರವಾನಗಿ ನೀಡುವುದನ್ನು ತಡೆಯಬೇಕಾಗಬಹುದು ಎಂದು ಮಂಗಳೂರು ನಗರ ಪಾಲಿಕೆಗೆ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಪಚ್ಚನಾಡಿ ವಿಲೇವಾರಿ ಘಟಕದಲ್ಲಿ ಘನತ್ಯಾಜ್ಯದ ಭೂಕುಸಿತದಿಂದಾಗಿ ಪಚ್ಚನಾಡಿ, ಕುಡುಪು ಮತ್ತು ಮಂದಾರ ಪ್ರದೇಶದಲ್ಲಿ ಉದ್ಭವಿಸಿರುವ ಗಂಭೀರ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಕರಣ ಮುಖ್ಯ ನ್ಯಾಯಮೂರ್ತಿ ಅವರನ್ನು ಒಳಗೊಂಡ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿದ್ದು ಈ ಸಂದರ್ಭ ಹೈಕೋರ್ಟ್ ಮಂಗಳೂರು ನಗರ ಪಾಲಿಕೆಗೆ ಎಚ್ಚರಿಕೆ ನೀಡಿದೆ. ಪಚ್ಚನಾಡಿ ಪ್ರಕರಣದ ಹಿನ್ನೆಲೆಯಲ್ಲಿ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತು.

ವಾದ - ಪ್ರತಿವಾದಗಳ ಮಧ್ಯೆ ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ಪರಿಹರಿಸಲು ನಗರ ಪಾಲಿಕೆ ವಿಫಲವಾದರೆ ಅಥವಾ ಘನತ್ಯಾಜ್ಯ ನಿರ್ವಹಣಾ ನಿಯಮಗಳು - 2016 ರ ಪ್ರಕಾರ ತ್ಯಾಜ್ಯ ವಿಲೇವಾರಿ ಮಾಡಲು ಕ್ರಮಗಳನ್ನು ಜಾರಿಗೆ ತರಲು ವಿಫಲವಾದರೆ, ನಗರ ವ್ಯಾಪ್ತಿಯಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಪರವಾನಗಿ ನೀಡುವುದನ್ನು ತಡೆಯಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದೆ. "ಸರ್ಕಾರ ಒದಗಿಸಿದ ಮಾಹಿತಿಯ ಪ್ರಕಾರ, ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿದಿನ 200 ಮೆಟ್ರಿಕ್ ಟನ್ ಘನತ್ಯಾಜ್ಯವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಹಾಗಾಗಿ 2017 ರಿಂದ ಈವರೆಗೆ ನಗರದಲ್ಲಿ ಪ್ರತಿದಿನ ಉತ್ಪತ್ತಿಯಾಗಿರುವ ಘನತ್ಯಾಜ್ಯದ ಪ್ರಮಾಣವನ್ನು ನಗರ ಪಾಲಿಕೆ ತಿಳಿಸಬೇಕು. ಹಾಗೆಯೇ 2017 ರಿಂದ ಈವರೆಗೆ ಎಷ್ಟು ಹೊಸ ಕಟ್ಟಡಗಳಿಗೆ ಪರವಾನಗಿಗಳನ್ನು ನೀಡಲಾಗಿದೆ ಎಂದು ಕೂಡ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ನ್ಯಾಯಪೀಠ ಆದೇಶಿಸಿದೆ.

ಅಲ್ಲದೆ, ನಗರದ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಲಹೆ ಮತ್ತು ಮಾರ್ಗದರ್ಶನ ಪಡೆಯಲು ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯನ್ನು ನೇಮಿಸಲು ಪಾಲಿಕೆ ಮುಂದಾಗಿದೆಯೇ ಎಂಬುದನ್ನು ಕೂಡ ನ್ಯಾಯಪೀಠಕ್ಕೆ ತಿಳಿಸುವಂತೆ ಸೂಚಿಸಿದೆ. ಪಚ್ಚನಾಡಿ ದುರಂತದ ವಿಚಾರದಲ್ಲಿ ಅಧಿಕಾರಿಗಳ ವಿರುದ್ಧ ಈವರೆಗೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 12 ಕ್ಕೆ ಕೋರ್ಟ್ ಮುಂದೂಡಿದೆ.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm